ಬೆಂಗಳೂರು: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ತನಿಖೆಗೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡವು ಧರ್ಮಸ್ಥಳದತ್ತ ಹೊರಟಿದೆ. ಜುಲೈ 25 ಮಧ್ಯಾಹ್ನ ನಗರದಿಂದ ಧರ್ಮಸ್ಥಳದತ್ತ ತಂಡವು ಪ್ರಯಾಣ ಆರಂಭಿಸಿತು ಎಂಬುದು ಗೊತ್ತಾಗಿದೆ.
ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ಸದ್ಯ ನೇಮಕಾತಿ ವಿಭಾಗದ ಡಿಐಜಿ ಎಂ.ಎನ್.ಅನುಚೇತ್ ಅವರ ನೇತೃತ್ವದಲ್ಲಿ ತಂಡವು ದಕ್ಷಿಣ ಕನ್ನಡಕ್ಕೆ ತೆರಳಿದೆ. ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ.
ಇದನ್ನೂ ಓದಿ: ಲೈಂಗಿಕ ಕಿರುಕುಳ| ಸರ್ಜನ್ ರನ್ನು ತಕ್ಷಣವೇ ವರ್ಗಾವಣೆ: ಸಂಚಾಲಕ ಸುಂದರ್ ಮಾಸ್ತರ್ ಆಗ್ರಹ
ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳರು ಭಾಗದ ಅಧಿಕಾರಿಗಳು ಶುಕ್ರುವಾರ ಸಂಜೆ ಅಥವಾ ಶನಿವಾರ ಬೆಳಿಗ್ಗೆ ಬೆಳ್ತಂಗಡಿಗೆ ಬರುವ ಸಾಧ್ಯತೆ ಇದೆ. ಬೆಳ್ತಂಗಡಿಯಲ್ಲಿ ಎಸ್ಐಟಿ ಕಚೇರಿ ತೆರೆಯಲಾಗಿದೆ. ಅಲ್ಲಿ ಕಂಪ್ಯೂಟರ್ ಸೇರಿದಂತೆ ತನಿಖೆಗೆ ಅನುಕೂಲವಾಗುವ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಇದಕ್ಕೂ ಮುನ್ನ ಸಿಐಡಿ ಕಚೇರಿಯಲ್ಲಿ ಸಭೆ ನಡೆಸಿ ತನಿಖೆಯ ರೂಪರೇಷೆಗಳನ್ನು ಸಿದ್ಧ ಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ.
ಇದನ್ನೂ ನೋಡಿ: ಆಸಕ್ತಿಕರ ಸಂಗತಿ |ಪ್ರಾಣಿಗಳಲ್ಲಿ ಆಕಳಿಕೆJanashakthi Media
