ಮಂಗಳೂರು: ತನಿಖೆಯನ್ನು ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಉಜಿರೆ ಬಳಿ ಇರುವ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಗೆ ಮಂಗಳವಾರ ಭೇಟಿ ನೀಡಿದೆ.
ಇದನ್ನೂ ಓದಿ: ಅವರು ಆರ್‌ಎಸ್‌ಎಸ್ ಗೀತೆ ಹಾಡಬಹುದು, ಏನು ಬೇಕಾದರೂ ಮಾಡಬಹುದು ನಾವು ಏನೂ ಮಾತಾಡುವಂತಿಲ್ಲ ನಾವು ಎನೂ ಮಾತಾಡುವಂತಿಲ್ಲ
ಈ ಪ್ರಕರಣದ ಸಾಕ್ಷಿ ದೂರುದಾರ ವಿಚಾರಣೆ ವೇಳೆ ನೀಡಿರುವ ಮಾಹಿತಿಗಳಿಗೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ತಿಮರೋಡಿ ಮನೆಯಲ್ಲಿ ಮಹಜರು ನಡೆಸಲಿದ್ದಾರೆ ಎಂದು ಗೊತ್ತಾಗಿದೆ.

ವಿಧಿ ವಿಜ್ಞಾನ ತಜ್ಞರ ತಂಡ ಹಾಗೂ ಸಾಕ್ಷಿದೂರುದಾರ ಕೂಡ ಎಸ್ಐಟಿ ಅಧಿಕಾರಿಗಳ ಜೊತೆಗೆ ತಿಮರೋಡಿ ಅವರ ಮನೆಗೆ ತೆರಳಿದ್ದಾರೆ. ಈ ವೇಳೆ ಪೊಲೀಸ್ ಭದ್ರತೆಯನ್ನು ಬಿಗುಗೊಳಿಸಲಾಗಿದೆ. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ತುಕಡಿಗಳನ್ನು ಸ್ಥಳಕ್ಕೆ ಕರೆಸಿ ಕೊಳ್ಳಲಾಗಿದೆ. ತಿಮರೋಡಿ ಅವರ ಮನೆಗೆ ಮಾಧ್ಯಮದವರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಅವರ ಮನೆಯಿಂದ ಸುಮಾರು 1 ಕಿ. ಮೀ.ದೂರದಲ್ಲೇ ಮಾಧ್ಯಮದವರನ್ನು ಪೊಲೀಸರು ತಡೆದಿದ್ದಾರೆ. ಮಂಗಳೂರು
