ರಾಜ್ಯಪಾಲರು ಸಂಘ ಪರಿವಾರದ ಅಜೆಂಡಾ ಜಾರಿಗೆ ಯತ್ನಿಸುತ್ತದ್ದಾರೆ: ಸೀತಾರಾಂ ಯೆಚೂರಿ

ತಿರುವನಂತಪುರಂ: ಕೇರಳ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ವಿರುದ್ಧ ಆಡಳಿತರೂಢ ಎಡರಂಗ ರಾಜಭವನಕ್ಕೆ ಮುತ್ತಿಗೆ ಹಾಕಿ ತಮ್ಮ ಶಕ್ತಿ ಪ್ರದರ್ಶ ಮಾಡಿದರು. ಉನ್ನತ ಶಿಕ್ಷಣ ಸಂರಕ್ಷಣಾ ಸಮಿತಿ ಹೆಸರಿನಲ್ಲಿ ರಾಜ್ಯಪಾಲರ ವಿರುದ್ಧ ಎಡರಂಗ ನಾಯಕರು ತೀವ್ರ ಟೀಕೆ ಮಾಡಿದರು. ರಾಜ್ಯಪಾಲರು ರಾಜ್ಯ ಸರ್ಕಾರದ ಕಾರ್ಯಚಟುವಟಿಕೆಗಳಿಗೆ ಅಡ್ಡಿಪಡಿಸುತ್ತಿದ್ದಾರೆ ಹಾಗೂ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಸಿಪಿಐ(ಎಂ) ನೇತೃತ್ವದ ಎಡರಂಗ ಕೂಟವು ಇಂದು(ನವೆಂಬರ್‌ 15) ಪ್ರತಿಭಟಿಸಿದರು.

ಸಂಘಪರಿವಾರದ ಹಿಂದೂ ರಾಷ್ಟ್ರ ಸಿದ್ಧಾಂತವನ್ನು ಜಾರಿಗೆ ತರಲು ರಾಜ್ಯಪಾಲರು ಯತ್ನಿಸುತ್ತಲೇ ಇದ್ದಾರೆ. ಅವರು, ಪ್ರಜಾಪ್ರಭುತ್ವ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ ಮತ್ತು ಚುನಾಯಿತ ಸರ್ಕಾರದ ನೀತಿಗಳ ವಿರುದ್ಧ ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಕೇರಳ ಅದನ್ನು ವಿರೋಧಿಸುತ್ತದೆ ಎಂದು ಪ್ರತಿಭಟನೆಯನ್ನು ಉದ್ಘಾಟಿಸಿದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಹೇಳಿದರು.

ರಾಜ್ಯಪಾಲರು ಬಿಜೆಪಿ ನಿರ್ದೇಶನದಂತೆ ನಡೆದುಕೊಳ್ಳುತ್ತಿದ್ದಾರೆ. ಸರ್ಕಾರಗಳು ಅವರಿಗೆ ಕಳುಹಿಸಿದ ಮಸೂದೆಗಳನ್ನು ತಡೆ ಹಿಡಿಯುತ್ತಿದ್ದಾರೆ. ಕೇರಳದ ಉನ್ನತ ಶಿಕ್ಷಣ ವ್ಯವಸ್ಥೆಯು ಉತ್ತಮ ಗುಣಮಟ್ಟದ್ದಾಗಿದೆ. ಅದನ್ನು ನಾಶಪಡಿಸಲು ರಾಜ್ಯಪಾಲರ ಪ್ರಯತ್ನಗಳು. ಅದಕ್ಕಾಗಿ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಡಿಎಂಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಇತ್ತೀಚೆಗೆ ರಾಷ್ಟ್ರಪತಿಗಳಿಗೆ ಪತ್ರ ಬರೆದು ತಮಿಳುನಾಡು ರಾಜ್ಯಪಾಲರನ್ನು ವಾಪಸ್ ಕರೆಸುವಂತೆ ಮನವಿ ಮಾಡಿದ್ದರು.

Donate Janashakthi Media

Leave a Reply

Your email address will not be published. Required fields are marked *