ಹಾಸನ ಬಳಿ ರಸ್ತೆ ಅಪಘಾತದಲ್ಲಿ ಮಗು ಸೇರಿದಂತೆ ಆರು ಮಂದಿ ಸಾವು

ಹಾಸನ: ಇಂದು ಬೆಳಗಿನ ಜಾವ ಸಂಭವಿಸಿದ ಹಾಸನ ಬಳಿ ರಸ್ತೆ ಅಪಘಾತದಲ್ಲಿ ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಅವರು ಪ್ರಯಾಣಿಸುತ್ತಿದ್ದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಮೃತರಲ್ಲಿ ಇಬ್ಬರು ಮಹಿಳೆಯರು, ಮೂವರು ಪುರುಷರು ಮತ್ತು ಒಂದು ಮಗು ಸೇರಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮೋದಿ ಹೆಸರಿನಲ್ಲಿ ಹೊಟೇಲ್ ಬಿಲ್ ಬಾಕಿ

ಚಾಲಕನನ್ನು ಹೊರತುಪಡಿಸಿ ಉಳಿದವರೆಲ್ಲರೂ ಚಿಕ್ಕಬಳ್ಳಾಪುರ ಮೂಲದ ಒಂದೇ ಕುಟುಂಬದವರು ಎಂದು ಹೇಳಲಾಗಿದ್ದು, ಅವರು ಮಂಗಳೂರಿನಿಂದ ಹಿಂತಿರುಗುತ್ತಿದ್ದರು ಎಂದು ವರದಿಯಾಗಿದೆ.

ಮುಂದಿನ ಪ್ರಕ್ರಿಯೆಗಾಗಿ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ನೋಡಿ: “ಹೊರಗುತ್ತಿಗೆಯಲ್ಲಿ ಮೀಸಲಾತಿ” – ಅರೆಹೊಟ್ಟೆಯ ಸಾಮಾಜಿಕ ನ್ಯಾಯವೇ? – ಕೆ. ಮಹಾಂತೇಶ್‌

Donate Janashakthi Media

Leave a Reply

Your email address will not be published. Required fields are marked *