ಬೆಂಗಳೂರು: ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ‘ಶಕ್ತಿ’ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ವಿತರಿಸಲು ಸರ್ಕಾರ ನಿರ್ಧರಿಸಿದೆ ಎಂದು ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಈ ವಿಷಯ ತಿಳಿಸಿದರು.
ಆಧಾರ ಕಾರ್ಡ್ ಬದಲು ನಾಲ್ಕು ಸಾರಿಗೆ ನಿಗಮಗಳ ಮೂಲಕ ಸ್ಮಾರ್ಟ್ ಕಾರ್ಡ್ ವಿತರಿಸಲಾಗುವುದು. ಈ ಕಾರ್ಡ್ ತೋರಿಸಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದು’ ಎಂದೂ ವಿವರಿಸಿದರು.
ಇದನ್ನೂ ಓದಿ : ಕಾರ್ಮಿಕ ವಿರೋಧಿ ನೀತಿ ವಿರುದ್ದ ಕಾರ್ಮಿಕ ಸಂಘಟನೆಗಳು; ರೈತ ಸಂಘಟನೆಗಳು ಪ್ರತಿಭಟನೆ
ಉಚಿತ ಮತ್ತು ಶುಲ್ಕ ಪಾವತಿಸುವ ಪ್ರಯಾಣಿಕರಿಗೆ ಏಕೀಕೃತ, ಸಂಪರ್ಕರಹಿತ ಮತ್ತು ಪರಸ್ಪರ ಕಾರ್ಯನಿರ್ವಹಿಸಬಹುದಾದ ಶುಲ್ಕ ಸಂಗ್ರಹಣ ವ್ಯವಸ್ಥೆಯನ್ನು ಸುಗಮಗೊಳಿಸಲು ಶಕ್ತಿ ಸ್ಮಾರ್ಟ್ ಕಾರ್ಡ್ ಅನುಷ್ಟಾನಕ್ಕೆ ಅನುಮೋದನೆ ನೀಡಲಾಗಿದೆ. ನಿಗಮಗಳ ಪರವಾಗಿ ಶಕ್ತಿ ಸ್ಮಾರ್ಟ್ ಕಾರ್ಡ್ ಯೋಜನೆಯ ಅನುಷ್ಠಾನಕ್ಕೆ ಸ್ಪರ್ಧಾತ್ಮಕ ಬಿಡ್ಡಿಂಗ್ ಪ್ರಕ್ರಿಯೆಯ ಮೂಲಕ ಅರ್ಹ ಸಿಸ್ಟಂ ಇಂಟಿಗ್ರೇಟರ್ (ಎಸ್.ಐ) ಆಯ್ಕೆಗೆ ಟೆಂಡರ್ ಆಹ್ವಾನಿಸಲಾಗುವುದು. ಎಂದರು.
‘ಈ ಯೋಜನೆಯ ಅನುಷ್ಠಾನ, ಹಣಕಾಸು ನಿರ್ವಹಣೆ, ಆಡಳಿತ ಮತ್ತು ಸುಸ್ಥಿರತೆಗಾಗಿ ನಾಲ್ಕು ವಿಶೇಷ ಉದ್ದೇಶದ ವಾಹನ (ಎಸ್‌ಪಿವಿ) ರಚಿಸಲಾಗುವುದು. ಅಲ್ಲದೆ, ಈ ಕಾರ್ಡ್ ಮೂಲಕ ವ್ಯವಹರಿಸಲು ಪೂರಕವಾಗಿ ಎಸ್ಕೊ ಖಾತೆ ತೆರೆಯಲು ಕೂಡಾ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಯೋಜನೆಯನ್ನು ಸಮನ್ವಯಗೊಳಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವನ್ನು ರಾಜ್ಯ ನೋಡಲ್ ಸಂಸ್ಥೆಯಾಗಿ ನೇಮಿಸಲಾಗುವುದು’ ಎಂದೂ ಅವರು ವಿವರಿಸಿದರು.
ಶಕ್ತಿ ಯೋಜನೆಯಡಿ ಇದೇ ಜನವರಿ ಅಂತ್ಯದವರೆಗೆ 660 ಕೋಟಿಗೂ ಹೆಚ್ಚು ಮಹಿಳೆಯತು ಉಚಿತವಾಗಿ ಪ್ರಯಾಣಿಸಿದ್ದಾರೆ. ನಾಲ್ಕು ಸಾರಿಗೆ ನಿಗಮಗಳ ಅಡಿ ಪ್ರತಿದಿನ ಸರಾಸರಿ 75.68 ಲಕ್ಷ ಮಹಿಳೆಯರು ಉಚಿತ ಬಸ್ ಸೇವೆ ಬಳಸುತ್ತಿದ್ದಾರೆ.
ಇದನ್ನೂ ನೋಡಿ : “ಮ್ಯಾಗ್ನೆಟ್ ಯೋಜನೆಗೆ ವಿರೋಧ – ಆಂದೋಲನವಾಗುತ್ತಿರುವ ಸರ್ಕಾರಿ ಶಾಲೆ ಉಳಿಸಿ ಹೋರಾಟ” Janashakthi Media
