ಆಟೋ ಚಾಲಕರೊಬ್ಬರಿಗೆ ಚಾಕುವಿನಿಂದ ಇರಿದ ಸಾಫ್ಟ್ ವೇರ್‌ ಇಂಜಿನಿಯರ್‌

ಬೆಂಗಳೂರು: ಜೂನ್‌ 8 ಭಾನುವಾರ ಮುಂಜಾನೆ ಕುಡಿದು ಗಲಾಟೆ ಮಾಡುತ್ತಿದ್ದ ಸಾಫ್ಟ್ ವೇರ್‌ಇಂಜಿನಿಯರ್‌ ಒಬ್ಬರು ಆಟೋ ಚಾಲಕರೊಬ್ಬರಿಗೆ ಚಾಕುವಿನಿಂದ ಇರಿದಿರುವ ಘಟನೆ ಗೋವಿಂದಪುರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಮನಹಳ್ಳಿಯ ನಿವಾಸಿ ಆಟೋ ಚಾಲಕ ರಾಮ್‌ಕುಮಾರ್‌ ಎಂಬುವರು ಇರಿತದಿಂದ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಫ್ಟ್ ವೇರ್‌ ಇಂಜಿನಿಯರ್‌ ವಿಷ್ಣು ಸಹ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಇದನ್ನೂ ಓದಿ: ಆಡಳಿತಾಧಿಕಾರಿಗಳಿಗೆ ಗ್ರಾಮ ಪಂಚಾಯಿತಿಯಲ್ಲಿಯೇ ಸ್ಥಳಾವಕಾಶ: ಕೃಷ್ಣ ಬೈರೇಗೌಡ

ಜೂನ್‌ 8 ಮುಂಜಾನೆ ಸುಮಾರು ಒಂದು ಗಂಟೆ ಸಮಯದಲ್ಲಿ ವಿಷ್ಣು ಕುಡಿದು ಹೆಣ್ಣೂರು ಜಂಕ್ಷನ್‌ನಲ್ಲಿ ಗಲಾಟೆ ಮಾಡುತ್ತಿದ್ದ. ಆಗ ಅಲ್ಲಿಗೆ ಬಂದ ಹೊಯ್ಸಳ ಪೊಲೀಸರು ಆತನನ್ನು ಹಿಡಿಯಲು ಪ್ರಯತ್ನಿಸುತ್ತಿದ್ದರು. ಈ ಸಂದರ್ಭದಲ್ಲಿ ರಾಮ್‌ಕುಮಾರ್‌ ಮುನ್ನುಗ್ಗಿ ಆತನನ್ನು ಹಿಡಿಯಲು ಯತ್ನಿಸಿದ.

ಆಗ ರಾಮ್‌ಕುಮಾರ್‌ ಹೊಟ್ಟೆಗೆ ವಿಷ್ಣು ಚಾಕುವಿನಿಂದ ಇರಿದು ಓಡುತ್ತಿದ್ದಾಗ ಕೆಳಗೆ ಬಿದ್ದು ಗಾಯಗೊಂಡಿದ್ದಾನೆ. ಈ ಬಗ್ಗೆ ರಾಮ್‌ಕುಮಾರ್‌ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ನೋಡಿ: ಫ್ಯಾಸಿಸಂ ವಿರುದ್ಧ ವಿಜಯದ 80ನೇ ವಾರ್ಷಿಕೋತ್ಸವ | ಜನತಾ ಪ್ರತಿರೋಧ ಗೆರಿಲ್ಲಾ ಸೈನ್ಯಗಳ ಪಾತ್ರ – ಭಾಗ 3

Donate Janashakthi Media

Leave a Reply

Your email address will not be published. Required fields are marked *