ನವದೆಹಲಿ | ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ : ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯ ಸಮಸ್ಯೆಯಿಂದಾಗಿ ಇಂದು (ಮಂಗಳವಾರ) ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಗರದ ಮಾಲಿನ್ಯದಿಂದಾಗಿ ಅವರು ದೀರ್ಘಕಾಲದ ಕೆಮ್ಮಿನ ಸಮಸ್ಯೆ ಹೊಂದಿದ್ದು, ಈ ಕಾರಣದಿಂದ ಸೋಮವಾರ ಸಂಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರು ತಪಾಸಣೆ ನಡೆಸಿದ್ದಾರೆ.

ಇದನ್ನೂ ಓದಿ : ಕನ್ನಡ ಮಾತನಾಡದಂತೆ ಹಾಸ್ಟೆಲ್ ವಾರ್ಡನ್ ಧಮ್ಕಿ ಹಾಕಿರುವುದನ್ನು ಖಂಡಿಸಿ ಪ್ರತಿಭಟನೆ

ಈ ಕುರಿತು ಪ್ರಕಟಣೆ ಹೊರಡಿಸಿರುವ ಗಂಗಾ ರಾಮ್​ ಆಸ್ಪತ್ರೆ, ಸೋನಿಯಾ ಗಾಂಧಿ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ತಿಳಿಸಿದೆ.

ಗಂಗಾ ರಾಮ್​ ಆಸ್ಪತ್ರೆಯ ಅಧ್ಯಕ್ಷ ಅಜಯ್​ ಸ್ವರೂಪ್​ ಮಾತನಾಡಿ, ಸೋನಿಯಾ ಗಾಂಧಿ ಅವರಿಗೆ ಸಂಪೂರ್ಣ ಆರೋಗ್ಯ ತಪಾಸಣೆ ನಡೆಸಿದ್ದು, ದೆಹಲಿಯಲ್ಲಿ ಶೀತ ಹವಾಮಾನ ಮತ್ತು ಮಾಲಿನ್ಯದ ಪರಿಣಾಮಗಳಿಂದಾಗಿ ಅವರಲ್ಲಿ ಶ್ವಾಸನಾಳದ ಆಸ್ತಮಾ ಸ್ವಲ್ಪ ಉಲ್ಬಣಗೊಂಡಿದೆ ಎಂದು ಕಂಡುಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯರು ಅವರನ್ನು ನಿಗಾ ಹೆಚ್ಚಿಸಿದ್ದಾರೆ. ಆ್ಯಂಟಿಬಯೋಟಿಕ್​ ಚಿಕಿತ್ಸೆ ಆರಂಭಿಸಲಾಗಿದೆ ಎಂದು ಹೇಳಿದರು.

ಸೋನಿಯಾ ಗಾಂಧಿ ಅವರು ಕಳೆದ ಡಿಸೆಂಬರ್​ನಲ್ಲಿ 79 ವರ್ಷ ಪೂರ್ಣಗೊಳಿಸಿದ್ದರು. ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಗೆ ತುತ್ತಾಗುತ್ತಿದ್ದು ದೈನಂದಿನ ತಪಾಸಣೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.

ದೆಹಲಿಯಲ್ಲಿ ವಾಯು ಮಾಲಿನ್ಯ ತೀವ್ರ ಕಳಪೆ ವರ್ಗದಲ್ಲಿ ಮುಂದುವರೆದಿದೆ. ಇದರಿಂದಾಗಿ ಜನಸಾಮಾನ್ಯರ ಆರೋಗ್ಯದಲ್ಲೂ ಏರುಪೇರು ಉಂಟಾಗಿದ್ದು, ಈ ಕುರಿತು ವೈದ್ಯರು ಕೂಡ ಎಚ್ಚರಿಕೆ ನೀಡಿದ್ದರು.

ಇದನ್ನೂ ನೋಡಿ : ವೆನೆಜುವೆಲಾ | ಅಮೆರಿಕ ಪುಂಡಾಟವನ್ನು ಖಂಡಿಸಿ ಭಾರತದಾದ್ಯಂತ ಪ್ರತಿಭಟನೆ Janashakthi Media

Donate Janashakthi Media

Leave a Reply

Your email address will not be published. Required fields are marked *