ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಲಿರುವ ಸೋನಿಯಾ ಗಾಂಧಿ!

ನವದೆಹಲಿ: ಮುಂದಿನ ಎಪ್ರಿಲ್‌ನಲ್ಲಿ ರಾಜ್ಯಸಭೆಯ 56 ಸ್ಥಾನಗಳು ತೆರವುಗೊಳ್ಳಲಿದ್ದು, ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಈ ಚುನಾವಣೆಯಲ್ಲಿ ರಾಜಸ್ಥಾನದಿಂದ ಸ್ಪರ್ಧಿಸುತ್ತಿರುವುದಾಗಿ ರಾಜ್ಯದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ ಎಂದು ವರದಿಯಾಗಿದೆ. ಅವರನ್ನು ಆಯ್ಕೆ ಮಾಡಲು ಕಾಂಗ್ರೆಸ್‌ಗೆ ಸಾಕಷ್ಟು ಮತಗಳನ್ನು ಇರುವುದರಿಂದ ಅವರು ಮೇಲ್ಮನೆಯಲ್ಲಿ ಮೊದಲ ಬಾರಿ ಪ್ರವೇಶಕ್ಕೆ ಸಿದ್ಧರಾಗಿದ್ದಾರೆ.

ಸೋನಿಯಾ ಗಾಂಧಿ ಅವರು ಈ ಹಿಂದೆ ಸ್ಪರ್ಧಿಸುತ್ತಿದ್ದ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದ ಪ್ರಸ್ತುತ ಯಾರು ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಕ್ಷೇತ್ರದಲ್ಲಿ ಅವರು ಸತತ ಐದು ಅವಧಿಗೆ ಗೆದ್ದಿದ್ದರು. ಅದಾಗ್ಯೂ ವರದಿಗಳು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಇಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಸೂಚಿಸಿವೆ.

ಇದನ್ನೂ ಓದಿ: ಹಾಸನ | ಕೆಪಿಆರ್‌ಎಸ್ ನೇತೃತ್ವದಲ್ಲಿ ಬಗರ್ ಹುಕುಂ ಸಾಗುವಳಿ ಭೂಮಿಗಾಗಿ ಹೋರಾಟ

ಫೆಬ್ರವರಿ 14 ರಂದು ಪ್ರಿಯಾಂಕಾ ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಸೋನಿಯಾ ಗಾಂಧಿ ಜೈಪುರಕ್ಕೆ ಆಗಮಿಸಿದ್ದರು. ಈ ವೇಳೆ ಜೈಪುರ ವಿಮಾನ ನಿಲ್ದಾಣದಲ್ಲಿ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಉಪಸ್ಥಿತರಿದ್ದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋನಿಯಾ ಅವರು ರಾಜ್ಯಸಭಾ ಚುನಾವಣೆಗೆ ರಾಜಸ್ಥಾನದಿಂದ ಸ್ಪರ್ಧಿಸಲು ಆಯ್ಕೆ ಮಾಡುತ್ತಿರುವುದು ರಾಜ್ಯಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದ್ದಾರೆ.

ಉತ್ತರದ ರಾಜ್ಯಗಳಲ್ಲಿ ಸೋನಿಯಾ ಗಾಂಧಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಏಪ್ರಿಲ್‌ನಲ್ಲಿ ತೆರವುಗೊಳ್ಳುವ ಸ್ಥಾನಗಳಲ್ಲಿ ಒಂದು ಸ್ಥಾನ ಪ್ರಸ್ತುತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರದ್ದಾಗಿದೆ. 91 ವರ್ಷದ ಅವರು ತಮ್ಮ ರಾಜ್ಯಸಭಾ ಅಧಿಕಾರಾವಧಿಯ ನಂತರ ಮತ್ತೆ ಸಾರ್ವಜನಿಕ ಜೀವನಕ್ಕೆ ಮರಳುವುದಿಲ್ಲ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಮನಮೋಹನ್ ಸಿಂಗ್ ಅವರು ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ವರದಿಯ ಪ್ರಕಾರ, 2023 ರ ಚಳಿಗಾಲದ ಅಧಿವೇಶನದ ಆರಂಭದಲ್ಲಿ ಅವರು ಸಂಸತ್ತಿಗೆ ಕೊನೆಯ ಭೇಟಿ ನೀಡಿದ್ದರು.

ಇದನ್ನೂ ಓದಿ: ದೆಹಲಿ ರೈತ ಹೋರಾಟ | ಡ್ರೋನ್ ಮೂಲಕ ಅಶ್ರುವಾಯು ಸಿಡಿಸುತ್ತಿರುವ ಸರ್ಕಾರ

ರಾಜ್ಯಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದಿಂದ ಅಭಿಷೇಕ್ ಸಿಂಘ್ವಿ, ಬಿಹಾರದಿಂದ ಅಖಿಲೇಶ್ ಪ್ರಸಾದ್ ಸಿಂಗ್ ಮತ್ತು ಮಹಾರಾಷ್ಟ್ರದಿಂದ ಚಂದ್ರಕಾಂತ್ ಹಂದೋರೆ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಕಾಂಗ್ರೆಸ್ ಅಧಿಕಾರದಲ್ಲಿರುವ ಹಿಮಾಚಲ ಪ್ರದೇಶದ ಏಕೈಕ ಸ್ಥಾನವನ್ನು ಸಿಂಘ್ವಿ ಸುಲಭವಾಗಿ ಗೆಲ್ಲುವ ನಿರೀಕ್ಷೆಯಿದೆ. ಅವರು ತೃಣಮೂಲ ಕಾಂಗ್ರೆಸ್ ಬೆಂಬಲದೊಂದಿಗೆ ಪಶ್ಚಿಮ ಬಂಗಾಳದಿಂದ ಕೊನೆಯ ಬಾರಿಗೆ ಆಯ್ಕೆಯಾಗಿದ್ದರು.

ಅಖಿಲೇಶ್ ಪ್ರಸಾದ್ ಸಿಂಗ್ ಅವರು ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ರಾಷ್ಟ್ರೀಯ ಜನತಾ ದಳ ಮತ್ತು ಎಡಪಕ್ಷಗಳ ಬೆಂಬಲದ ಅಗತ್ಯವಿದೆ. ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರು ಬಿಜೆಪಿ ಪಕ್ಷಾಂತರಗೊಂಡ ಕಾರಣ ಹೆಚ್ಚಿನ ಕಾಂಗ್ರೆಸ್ ಶಾಸಕರು ಪಕ್ಷವನ್ನು ತೊರೆದರೆ ಮಹಾರಾಷ್ಟ್ರದಿಂದ ಚಂದ್ರಕಾಂತ್ ಹಂದೋರೆ ಕಠಿಣ ಸ್ಪರ್ಧೆಯನ್ನು ಎದುರಿಸಬೇಕಾಗುತ್ತದೆ ಎಂದು ನಿರೀಕ್ಷಿಸಲಾಗಿದೆ.

56 ರಾಜ್ಯಸಭಾ ಸ್ಥಾನಗಳಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಯಲ್ಲಿ ಕಾಂಗ್ರೆಸ್ 11 ಸ್ಥಾನಗಳನ್ನು ಗೆಲ್ಲಲಿದೆ. ನಾಮಪತ್ರ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನವಾಗಿದೆ.

ಇದನ್ನೂ ಓದಿ: ‘ಇದು ಆರಂಭ ಮಾತ್ರ’ | ದೆಹಲಿ ರೈತ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ

ಹಿಮಾಚಲ ಪ್ರದೇಶ, ತೆಲಂಗಾಣ ಮತ್ತು ರಾಜಸ್ಥಾನ ರಾಜ್ಯ ಕಾಂಗ್ರೆಸ್ ಘಟಕಗಳಲ್ಲಿ ಸೋನಿಯಾ ಗಾಂಧಿ ಅವರನ್ನು ತಮ್ಮ ರಾಜ್ಯಗಳಿಂದ ಸ್ಪರ್ಧಿಸುವಂತೆ ಒತ್ತಾಯಿಸಿದ್ದವು. ಗಾಂಧಿ ಕುಟುಂಬದ ನಿಕಟವರ್ತಿ ಎಂದು ಪರಿಗಣಿಸಲಾದ ನಾಯಕರೊಬ್ಬರು ಅವರು ಉತ್ತರ ಭಾರತದ ಸ್ಥಾನಕ್ಕೆ ಆದ್ಯತೆ ನೀಡಿದ್ದಾರೆ ಎಂದು ಹೇಳಿದ್ದಾರೆ. ನಾಲ್ವರು ಪ್ರಮುಖ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್ ಮತ್ತು ಜೈರಾಮ್ ರಮೇಶ್ ದಕ್ಷಿಣ ಭಾರತವನ್ನು ಪ್ರತಿನಿಧಿಸುತ್ತಾರೆ.

ಕರ್ನಾಟಕ ಮತ್ತು ತೆಲಂಗಾಣದಿಂದ ರಾಜ್ಯಸಭಾ ಅಭ್ಯರ್ಥಿಗಳನ್ನು ಇನ್ನೂ ಹೆಸರಿಸದ ಕಾಂಗ್ರೆಸ್ ಇತ್ತೀಚಿನ ಸುತ್ತಿನ ಚುನಾವಣೆಯಲ್ಲಿ ಒಂದು ಸ್ಥಾನವನ್ನು ಗಳಿಸುವ ನಿರೀಕ್ಷೆಯಿದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಪ್ರಸ್ತುತ ಸ್ಥಾನದಿಂದ ಎರಡು ಸ್ಥಾನಗಳನ್ನು ಹೆಚ್ಚಿಸಿಕೊಳ್ಳುವ ನಿರೀಕ್ಷೆಯಿದೆ.

ವಿಡಿಯೊ ನೋಡಿ: ರಾಮನಿಗೆ ಭವ್ಯ ಮಂದಿರ, ಶ್ರಮಿಕರಿಗೆ ಟೆಂಟ್ – ನಾಗೇಶ ಹೆಗಡೆ ವಿಶ್ಲೇಷಣೆ Janashakthi Media

Donate Janashakthi Media

Leave a Reply

Your email address will not be published. Required fields are marked *