ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ

Please follow and like us:

ಹಾಸನ : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಹತ್ಯೆ ಪ್ರಕರಣ ದ ಬೆನ್ನಲ್ಲೆ ಈಗ ರೇವಣ್ಣ ಹಿರಿಯ ಮಗನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ.

ಇದರ ಬೆನ್ನಲ್ಲೇ ಇದೀಗ ಪ್ರಜ್ವಲ್ ಅಣ್ಣ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧವೂ ಸಹ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ.

ಅರಕಲಗೂಡು ಜೆಡಿಎಸ್​ ಕಾರ್ಯಕರ್ತನ ಮೇಲೆ ಸೂರಜ್​ ರೇವಣ್ಣ, ತಮ್ಮ ಪಕ್ಷದ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ವಿಲಕ್ಷಣ ಆರೋಪದಿಂದ ರೇವಣ್ಣ ಕುಟುಂಬ ಮತ್ತೆ ಮುಜುಗರಕ್ಕೀಡಾದಂತಾಗಿದೆ.

ಸೂರಜ್ ರೇವಣ್ಣ ಅವರು ಜೂನ್ 16ರ ರಾತ್ರಿ ತಮ್ಮ ಪಕ್ಷದ ಕಾರ್ಯಕರ್ತನನ್ನು ಸಹಾಯ ಮಾಡುವುದಾಗಿ ಚನ್ನಪಟ್ಟಣ ತಾಲ್ಲೂಕಿನ ಗನ್ನಿಕಡದ ತೋಟದ ಮನೆಗೆ ಕರೆಯಿಸಿಕೊಂಡು ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನಲಾಗಿದೆ. ಬಲವಂತವಾಗಿ ತನ್ನ ಮೇಲೆ ದೌರ್ಜನ್ಯ ನಡೆಸಿರುವ ಬಗ್ಗೆ ಜೆಡಿಎಸ್​ ಕಾರ್ಯಕರ್ತ, ಸಿಎಂ, ಗೃಹ ಸಚಿವರು, ಡಿಜಿ ಮತ್ತು ಐಜಿಪಿ ಮತ್ತು ಹಾಸನ ಎಸ್ಪಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ತಮ್ಮ ಪ್ರಜ್ವಲ್​ ಇನ್ನೂ ಎಸ್​ಐಟಿ ವಶದಲ್ಲಿರುವಾಗಲೇ ಅಣ್ಣ ಸೂರಜ್​ ವಿರುದ್ಧ ಯುವಕನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಸೂರಜ್ ರೇವಣ್ಣ ಜೆಡಿಎಸ್​ ವಿಧಾನಪರಿಷತ್ ಸದಸ್ಯರಾಗಿದ್ದರಿಂದ ಈ ಪ್ರಕರಣವೂ ಸಹ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ.

ಸಿಕ್ಕ ಮಾಹಿತಿ ಪ್ರಕಾರ ಸಂತ್ರಸ್ತ ಯುವಕ ಸಿಎಂ, ಗೃಹ ಸಚಿವ ಹಾಗೂ ಡಿಜಿ ಮತ್ತು ಐಜಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದ್ದು.

Please follow and like us:
Donate Janashakthi Media

Leave a Reply

Your email address will not be published. Required fields are marked *