ಬೆಳಗಾವಿ: ವಿವಾದ ಸೃಷ್ಟಿಸುವ ಬದಲು ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡಬೇಕ ಎಂದು ಸಚಿವರು ಹಾಗೂ ಶಾಸಕರಿಗೆ ವಿಧಾನಸಭಾಧ್ಯಕ್ಷ ಯುಟಿ ಖಾದರ್ ಅವರು ಸೂಚನೆ ನೀಡಿದರು. ಸಮಾಜವನ್ನು
ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಇತರ ಕೆಲವು ಶಾಸಕರು ವಿಧಾನಸಭೆಯಲ್ಲಿ ಅಳವಡಿಸಿರುವ ಸಾವರ್ಕರ್ ಭಾವಚಿತ್ರವನ್ನು ತೆಗೆಯಬೇಕು ಎಂದು ನೀಡಿರುವ ಹೇಳಿಕೆಗೆ ಡಿ8 ಶುಕ್ರವಾರ ಪ್ರತಿಕ್ರಿಯೆ ನೀಡಿರುವ ಅವರು, ಶಾಸಕರು ಮತ್ತು ಸಚಿವರು ಅಧಿವೇಶನಕ್ಕೆ ಸರಿಯಾದ ಸಮಯಕ್ಕೆ ಬರಬೇಕು. ಉತ್ತಮವಾಗಿ ಚರ್ಚೆ ನಡೆಸುವುದು, ಯೋಜನೆ ರೂಪಿಸುವುದು ಅವರ ಕೆಲಸ. ಅವರ ಕೆಲಸವನ್ನು ಅವರು ಚೆನ್ನಾಗಿ ಮಾಡಲಿ. ಯಾರು ಯಾವ ಕೆಲಸ ಮಾಡಬೇಕೋ ಅದೇ ಕೆಲಸವನ್ನು ಮಾಡಬೇಕು ಎಂದು ಹೇಳಿದರು.
ಇದನ್ನೂ ಓದಿ:ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯ ಅನುದಾನದ ದುರ್ಬಳಕೆಗೆ ಅವಕಾಶ ನೀಡುವುದಿಲ್ಲ| ಸಚಿವ ಡಾ.ಹೆಚ್.ಸಿ. ಮಹದೇವಪ್ಪ
ವಿಧಾನಸಭೆಯಲ್ಲಿ ಸಾವರ್ಕರ್ ಭಾವಚಿತ್ರ ತೆಗೆಸುವುದು ಸರಿಯಲ್ಲ, ಶಾಸಕರು, ಸಚಿವರು ವಿವಾದ ಸೃಷ್ಟಿಸುವ ಬದಲು ಜನರನ್ನು ಒಗ್ಗೂಡಿಸುವ ಕೆಲಸ ಮಾಡಬೇಕು. ಸಮಾಜದಲ್ಲಿ ಸೌಹಾರ್ದಯುತ ವಾತಾವರಣ ನಿರ್ಮಿಸಬೇಕು. ತಮ್ಮ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವತ್ತ ಗಮನ ಹರಿಸಬೇಕು ಎಂದು ತಿಳಿಸಿದರು.
ಹಿಂದೆ ಏನು ಆಗಿದೆಯೋ ಅದರ ಬಗ್ಗೆ ವಿಮರ್ಶೆ ಮಾಡುವುದಿಲ್ಲ. ರಾಜ್ಯದಲ್ಲಿ ಸೌಹಾರ್ದ ಮೂಡಿಸುವುದು ನನ್ನ ಕೆಲಸ. ಯಾವುದನ್ನೂ ಕಿತ್ತು ಎಸೆಯುವುದು ನನ್ನ ಕೆಲಸವಲ್ಲ. ಅದರ ಬದಲಿಗೆ ಬೆಸೆಯುವುದು ನನ್ನ ಕೆಲಸ. ಸೌಹಾರ್ದ ಮೂಡಿಸುವುದೇ ನನ್ನ ಆದ್ಯತೆ. ನಾನು ಸಾಂವಿಧಾನಿಕ ಚೌಕಟ್ಟಿನ ಅಡಿಯಲ್ಲಿ ಕೆಲಸ ಮಾಡುತ್ತೇನೆ ಎಂದರು.
ವಿಡಿಯೋ ನೋಡಿ:ಕೊಡಗು : ಹಾಡಿ ಜನರಿಗೆ ಬದುಕಿನ ಗ್ಯಾರಂಟಿ ಬೇಕಿದೆ Janashakthi Media