ಬೆಂಗಳೂರು: ವಿಧಾನಸಭೆಯಲ್ಲಿ ಬಿಜೆಪಿ ಶಾಸಕರು ಉಪ ಸಭಾಧ್ಯಕ್ಷರಿಗೆ ಅಗೌರವ ತೋರಿರುವ ಘಟನೆಗೆ ಸಂಬಂಧಿಸಿದಂತೆ ಹಾಗೂ ಹತ್ತು ಶಾಸಕರನ್ನು ವಿಧಾನಸಭೆಯಿಂದ ಅಮಾನತು ಮಾಡಿರುವ ವಿಚಾರವಾಗಿ ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಹಾಗೂ ಉಪಸಭಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ಗುರುವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿದರು.
ಇದನ್ನೂ ಓದಿ:ಮುಂಗಾರು ಅಧಿವೇಶನ: ಭಾರೀ ಗದ್ದಲದಿಂದಾಗಿ ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ
ಬುಧವಾರ ಸದನದಲ್ಲಿ ನಡೆದ ಘಟನೆಗಳ ಕುರಿತಾಗಿ ಸಂಪೂರ್ಣ ಮಾಹಿತಿಯನ್ನು ನೀಡಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ. ಈ ವೇಳೆ ವಿಧಾನಸಭೆ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಉಪಸ್ಥಿತರಿದ್ದರು.
ರಾಜ್ಯಪಾಲರ ಭೇಟಿ ಮಾಡಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸ್ಪೀಕರ್, ”ನಿನ್ನೆ ಸದನದಲ್ಲಿ ನಡೆದ ಎಲ್ಲಾ ವಿಚಾರಗಳನ್ನ ರಾಜ್ಯಪಾಲರ ಗಮನಕ್ಕೆ ತಂದಿದ್ದೇನೆ. ನನ್ನ ಜವಾಬ್ದಾರಿಯನ್ನ ನಾನು ನಿರ್ವಹಿಸಿದ್ದೇನೆ. ಸಂಪೂರ್ಣ ವರದಿಯನ್ನ ಸಲ್ಲಿಕೆ ಮಾಡಿದ್ದೇನೆ. ರಾಜ್ಯಪಾಲರೂ ಸಹ ಕೆಲ ಸಲಹೆ ಸೂಚನೆಗಳನ್ನ ಕೊಟ್ಟಿದ್ದಾರೆ” ಎಂದು ತಿಳಿಸಿದರು.