ಬೆಂಗಳೂರು: ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಸದ ಸಮಸ್ಯೆಯ ನಡುವೆಯೇ, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಜೂನ್ 17ರಂದು ಪ್ರಮುಖ ರಸ್ತೆಗಳಲ್ಲಿ ಕಸ ಮತ್ತು ನಿರ್ಮಾಣ ಅವಶೇಷಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲು ವಿಶೇಷ ಅಭಿಯಾನ ಆರಂಭಿಸಲು ಅಧಿಕಾರಿಗಳಿಗೆ ಸೂಚಿಸಿದರು. ಸಮಸ್ಯೆ
ಕಸ ಎಸೆಯುವವರ ವಿರುದ್ಧ ಕಠಿಣ ದಂಡ ವಿಧಿಸುವ ಎಚ್ಚರಿಕೆ ನೀಡಿದ ಅವರು, ಐದು ನಗರ ಪಾಲಿಕೆಗಳು, ನಮ್ಮ ಮೆಟ್ರೋ, ಬಿಡಿಎ ಹಾಗೂ ರೈಲ್ವೆ ಇಲಾಖೆಗಳನ್ನು ಒಳಗೊಂಡಂತೆ ಸಮಗ್ರ ಕಾರ್ಯಯೋಜನೆ ರೂಪಿಸಲು ನಿರ್ದೇಶನ ನೀಡಿದರು.
ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆ: ಯಾವುದೇ ತಂತ್ರಗಾರಿಕೆ ಇಲ್ಲ – ಎಲ್ಲ ಮತಗಳು ಸ್ವಇಚ್ಛೆಯಿಂದ: ಸಿಎಂ ಡಿಕೆಶಿ
ಘನ ತ್ಯಾಜ್ಯ ನಿರ್ವಹಣೆ ಕುರಿತ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಮನೆಮನೆಗೆ ಕಸದ ಸಂಗ್ರಹಣೆ ಯಾವುದೇ ವ್ಯತ್ಯಯವಿಲ್ಲದೆ ನಡೆಯಬೇಕು ಎಂದು ಒತ್ತಿ ಹೇಳಿದರು. ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ಮೇಲೆ ದಂಡ ವಿಧಿಸುವುದರ ಜೊತೆಗೆ, ಅವರಿಂದಲೇ ಕಸ ಸ್ವಚ್ಛಗೊಳಿಸುವ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ನಿಯಮಗಳ ಪ್ರಕಾರ, ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆಯುವವರಿಗೆ ರೂ.2,000 ವರೆಗೆ ದಂಡ ವಿಧಿಸಬಹುದು. ಕಸದ ವಿಂಗಡಣೆ ಮಾಡದ ಮನೆಗಳಿಗೆ ರೂ.5,000 ವರೆಗೆ ಹಾಗೂ ದೊಡ್ಡ ಪ್ರಮಾಣದ ತ್ಯಾಜ್ಯ ಉತ್ಪಾದಕರಿಗೆ ರೂ.30,000 ವರೆಗೆ ದಂಡ ವಿಧಿಸುವ ವ್ಯವಸ್ಥೆಯಿದೆ.
ಇತ್ತೀಚಿನ ವರ್ಷಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ನಿಯಂತ್ರಣವಿಲ್ಲದೆ ಕಸ ಎಸೆಯುವ ಪ್ರವೃತ್ತಿ ಹೆಚ್ಚಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ವಿಂಗಡಣೆ ಪದ್ಧತಿ ಜಾರಿಯಾದ ನಂತರ ಸಾರ್ವಜನಿಕ ಕಸದ ಡಬ್ಬಿಗಳನ್ನು ತೆರವುಗೊಳಿಸಿರುವ ಹಿನ್ನೆಲೆಯಲ್ಲಿ, ನಾಗರಿಕರು ಎಲ್ಲೆಂದರಲ್ಲಿ ಕಸ ಎಸೆಯುತ್ತಿರುವುದಾಗಿ ಅವರು ಹೇಳಿದರು.
ಇದನ್ನೂ ನೋಡಿ: SIR ತೀರ್ಪಿನ ಒಳನೋಟ: ಸಂವಿಧಾನ, ನಾಗರಿಕತ್ವ ಮತ್ತು ಮತದಾನದ ಹಕ್ಕು |ಜಸ್ಟೀಸ್ ಗೋಪಾಲಗೌಡ
