ಬೆಂಗಳೂರು: ಶೀಘ್ರದಲ್ಲಿ ಕೈಮಗ್ಗ ನೇಕಾರರು ಹಾಗೂ ಜವಳಿ ಕಾರ್ಖಾನೆಗಳಲ್ಲಿ ದುಡಿಯುತ್ತಿರುವ ಮಹಿಳಾ ಕಾರ್ಮಿಕರಿಗೆ 2ರಿಂದ 3 ಸಾವಿರ ರೂಪಾಯಿ ಪ್ರೋತ್ಸಾಹ ಧನ ಸೇರಿದಂತೆ ಇನ್ನಿತರ ಅಂಶಗಳು ಒಳಗೊಂಡ ನೂತನ ಜವಳಿ ಹಾಗೂ ಸಿದ್ಧ ಉಡುಪು ನೀತಿಯನ್ನು ಪರಿಷ್ಕರಿಸಲಾಗಿದ್ದು, ಇದನ್ನು ಘೋಷಿಸಿ ಅನುಷ್ಠಾನಕ್ಕೆ ತರಲಾಗುವುದು ಎಂದು ಜವಳಿ ಸಚಿವ ಶಿವಾನಂದ ಎಸ್. ಪಾಟೀಲ್ ತಿಳಿಸಿದರು.
ವಿಧಾನಪರಿಷತ್ನಲ್ಲಿ ಮಂಗಳವಾರ ಬಿಜೆಪಿ ಸದಸ್ಯ ಎಂ. ನಾಗರಾಜ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಹಿಂದಿನ ಮೂರು ಜವಳಿ ನೀತಿಗಳ ಸಾಧಕ-ಬಾಧಕಗಳ ಅಧ್ಯಯನ ಮಾಡಿ, ಎಲ್ಲರ ಸಲಹೆ ಸೂಚನೆಗಳನ್ನು ಪರಿಗಣಿಸಿ, 2025ರಿಂದ 2030ರ ವರೆಗೆ ಹೊಸ ಜವಳಿ ನೀತಿ ರೂಪಿಸಲಾಗಿದೆ. ಶೀಘ್ರದಲ್ಲಿ ಇದನ್ನು ಘೋಷಿಸಿ, ಕಾರ್ಯಾರೂಪಕ್ಕೆ ತರಲಾಗುವುದು ಎಂದರು.
ಇದನ್ನೂ ಓದಿ : ಬೆಂಗಳೂರು | ಕಾರ್ಮಿಕರಿಗೆ ದ್ರೋಹ ಬಗೆದ ರಾಜ್ಯ ಕಾಂಗ್ರೇಸ್ ಸರ್ಕಾರ – ಸಿಐಟಿಯು ಖಂಡನೆ
ನೇಕಾರ ಸನ್ಮಾನ ಯೋಜನೆಯಡಿ ಕೊಡಲಾಗುತ್ತಿದ್ದ 2,500 ರೂ.ಗಳನ್ನು 5 ಸಾವಿರ ರೂ.ಗೆ ಏರಿಸಲಾಗಿದೆ. ಪರಿಷ್ಕೃತ ನೀತಿಯಲ್ಲಿ ಇನ್ನೂ ಹೆಚ್ಚಳ ಮಾಡಲಾಗುವುದು ಹಾಗೂ ನೂತನ ನೀತಿಯಲ್ಲಿ ಜವಳಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಕಾರ್ಮಿಕರಿಗೆ ಹಾಗೂ ಕೈಮಗ್ಗ ನೇಕಾರರಿಗೆ 2ರಿಂದ 3 ಸಾವಿರ ಸಹಾಯಧನ ನೀಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.
ಮಹಾರಾಷ್ಟ್ರ ಹಾಗೂ ತಮಿಳುನಾಡು ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದ ಜವಳಿ ಕೈಗಾರಿಕೆಗಳಿಗೆ ಹೆಚ್ಚಿನ ಮಟ್ಟದಲ್ಲಿ ಸಬ್ಸಿಡಿ ನೀಡಲಾಗುತ್ತಿದೆ. 1ರಿದ 10 ಹೆಚ್.ಪಿ ವಿದ್ಯುತ್ ಸಂಪರ್ಕ ಪಡೆದ ವಿದ್ಯುತ್ ಮಗ್ಗಗಳಿಗೆ ಉಚಿತ ವಿದ್ಯುತ್ ಪೂರೈಸಲಾಗುತ್ತಿದೆ. 10 ಹೆಚ್.ಪಿಯಿಂದ 20 ಹೆಚ್.ಪಿ ವಿದ್ಯುತ್ ಮಗ್ಗಗಳಿಗೆ ಪ್ರತಿ ಯೂನಿಟ್ 1.25 ರೂಪಾಯಿ ಶುಲ್ಕ ವಿಧಿಸಿದರೆ, ಬೇರೆ ರಾಜ್ಯಗಳಲ್ಲಿ ಪ್ರತಿ ಯೂನಿಟ್ಗೆ 5 ರೂಪಾಯಿ ಇದೆ. 2019ರಿಂದ 2024 ರವರೆಗೆ 954 ಕೋಟಿ ರೂಪಾಯಿ ಸಬ್ಸಿಡಿ ನೀಡಲಾಗಿದೆ ಎಂದು ವಿವರಿಸಿದರು.
ಈ ಹಿಂದೆ ಹಲವು ಬಾರಿ ಅವರ ಹೆಸರು ಕೇಳಿ ಬಂದಿತ್ತು. ಇತ್ತೀಚೆಗೆ 25 ಲಕ್ಷ ಲಂಚ ಸ್ವೀಕರಿಸುವಾಗ ಉಪ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದರು. ನಿಯಮ 330ರಡಿ ಪ್ರಸ್ತಾಪಿಸಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಅಬಕಾರಿ ಸಚಿವರ ಮೇಲೆ ಭ್ರಷ್ಟಾಚಾರ ಆರೋಪ ಹೊಸದಲ್ಲ. ಈ ವೇಳೆ, ಸಚಿವ ತಿಮ್ಮಾಪುರ ಅವರಿಗೂ ಲಂಚ ಕೊಡಬೇಕು ಎಂದು ಅಧಿಕಾರಿಗಳು ಪ್ರಸ್ತಾಪಿಸಿದ್ದರು. ಸರಣಿ ರೀತಿಯಲ್ಲಿ ಲಂಚಾವತಾರ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆ ಸಚಿವರು ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಸಚಿವ ಸಂಪುಟದಿಂದ ವಜಾಗೊಳಿಸುವವರೆಗೂ ಹೋರಾಟ ಮಾಡಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದರು.
ಇದನ್ನೂ ನೋಡಿ : ಒಂದು ದೇಹ, ಒಂದು ಸಾಕ್ಷಿ | ಸಾಮ್ರಾಜ್ಯಶಾಹಿಯ ವಿರುದ್ಧ ಸುಮಿತೇರು ತಾನಿಗುಚಿJanashakthi Media
