ಗದಗ | ಮರ್ಯಾದೆಗೇಡು ಹತ್ಯೆ ನಿರ್ಬಂಧಿಸಲು ಸುಪ್ರೀಂ ಕೋರ್ಟ್ ವಿಶೇಷ ಕಾನೂನು ಜಾರಿಗೆ ತರಬೇಕು

ಗದಗ: ಮರ್ಯಾದೆಗೇಡು ಹತ್ಯೆ ಪ್ರಕರಣಗಳು ಸಮಾಜಕ್ಕೆ ಕಪ್ಪುಚುಕ್ಕೆ ಇದ್ದಂತೆ, ಜಾತಿ ಮತ್ತು ಧರ್ಮದ ಹೆಸರಿನಲ್ಲಿ ನಡೆಯುವ ಮರ್ಯಾದೆ ಹೆಸರಿನಲ್ಲಿ ಮನುಷ್ಯತ್ವ ಕೊಲೆ ಮಾಡುವುದು ಅತ್ಯಂತ ಅಮಾನವೀಯ’ ಎಂದು ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು. ಗದಗ 

ಹುಬ್ಬಳ್ಳಿ ತಾಲ್ಲೂಕಿನ ಇನಾಂವೀರಾಪುರದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಖಂಡಿಸಿ ವಿವಿಧ ಸಂಘಟನೆಗಳ ಆಶ್ರಯದಲ್ಲಿ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಶುಕ್ರವಾರ ನಡೆದ ಪ್ರಾಯಶ್ಚಿತ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗದಗ

ಇದನ್ನೂ ಓದಿ : ಯುವಜನರಿಗಾಗಿ ಕುವೆಂಪು ಅಭಿಯಾನ – ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ

ಈ ನಿಟ್ಟಿನಲ್ಲಿ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು. ‘ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳುವುದು ಸರ್ಕಾರದ ಹೊಣೆಯಾಗಿದೆ.

ಶಾಲಾ ಪಠ್ಯಗಳಲ್ಲಿ ಜಾತಿ ವಿನಾಶಕಾರಿ ಮತ್ತು ಸಾಮರಸ್ಯದ ಚಿಂತನೆಗಳನ್ನು ಅಳವಡಿಸಬೇಕು. ಮರ್ಯಾದೆಗೇಡು ಹತ್ಯೆ ನಿರ್ಬಂಧಿಸಲು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕಠಿಣವಾದ ವಿಶೇಷ ಕಾನೂನು ಜಾರಿಗೆ ತರಬೇಕು. ಅಂತರ್ಜಾತೀಯ ಮತ್ತು ಅಂತರಧರ್ಮೀಯ ವಿವಾಹಿತರಿಗೆ ಸರ್ಕಾರವು ಪೊಲೀಸ್ ಇಲಾಖೆಯ ಮೂಲಕ ರಕ್ಷಣೆ ನೀಡಬೇಕು. ಅವರ ಸುರಕ್ಷತೆಯ ಬಗ್ಗೆ ಮಾಸಿಕ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಚರ್ಚಿಸಬೇಕು.  ವ್ಯಕ್ತಿ ಘನತೆ ಮತ್ತು ಬದುಕುವ ಹಕ್ಕಿನ ಕುರಿತು ಜಾಗೃತಿ ಮೂಡಿಸಬೇಕು, ಮಾನ್ಯಾ ಪಾಟೀಲ ಕೊಲೆ ಪ್ರಕರಣದ ಆರೋಪಿಗಳಿಗೆ ಮತ್ತು ಪ್ರಚೋದನೆ ನೀಡಿದವರಿಗೆ ವಿಳಂಬವಿಲ್ಲದೆ ಗರಿಷ್ಠ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಲಾಯಿತು.

ಬುದ್ಧ, ಬಸವ, ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪ್ರಗತಿಪರ ಸಂಘಟನೆಗಳ ಸದಸ್ಯರು ಕ್ರಾಂತಿ ಗೀತೆಗಳನ್ನು ಹಾಡುವ ಮೂಲಕ ಮರ್ಯಾದೆಗೇಡು ಹತ್ಯೆ ಖಂಡಿಸಿದರು.

ಪ್ರಾಯಶ್ಚಿತ ದಿನ ಆಚರಣೆಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ, ಬಸವ ದಳ, ಲಿಂಗಾಯತ ಪ್ರಗತಿಶೀಲ ಸಂಘ, ದಲಿತ ಸಂಘಟನೆಗಳು ಹಾಗೂ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು, ಬೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಭಾಗವಹಿಸಿದ್ದರು.

ಮಾಜಿ ಶಾಸಕ ಡಿ.ಆರ್. ಪಾಟೀಲ, ಸಾಹಿತಿ ಬಸವರಾಜ ಸೂಳಿಭಾವಿ, ಶರೀಫ ಬೆಳೆಯಲಿ, ಮುತ್ತು ಬಿಳೆಯಲಿ, ಕಾಂಗ್ರೆಸ್ ಮುಖಂಡ ಅಶೋಕ ಮಂದಾಲಿ, ಮುತ್ತಣ್ಣ ಭರಡಿ, ನಗರಸಭೆ ಸದಸ್ಯ ಚಂದ್ರು ತಡಸದ, ಶೇಖಣ್ಣ ಕವಳಿಕಾಯಿ, ಕೆ.ಎಸ್.ಚಿಟ್ಟಿ, ವಾಸಣ್ಣ ಕುರುಡಗಿ, ಮಂಜುನಾಥ ಮುಳಗುಂದ, ಎಸ್.ಎನ್.ಬಳ್ಳಾರಿ, ವಿದ್ಯಾಧರ ದೊಡ್ಡಮನಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಇದ್ದರು.

ಇದನ್ನೂನೋಡಿ : ಸಾವಿತ್ರಿಬಾಯಿ ಫುಲೆ ಹುಟ್ಟಿದ ದಿನ : ಅವ್ವ ಕವಿತೆ | ಕವಿ : ಆದಿತ್ಯ , ವಾಚನ : ರಾಗಿಣಿ ಮಾಲೂರು Janashakthi Media

Donate Janashakthi Media

Leave a Reply

Your email address will not be published. Required fields are marked *