ಬೆಂಗಳೂರು: “ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನೇಲಿ ಅರ್ಧ ಪಾಕಿಸ್ತಾನವಿದೆ. ದೇಶವಿರೋಧಿ ಹೇಳಿಕೆ ನೀಡುವುದು ಚಟವಾಗಿದೆ” ಎಂದು ಆರೋಪಿಸಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮಾನನಷ್ಟ ಮೊಕದ್ದಮೆ ದಾಖಲಿಸಲು ಆದೇಶಿಸಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪತ್ನಿ ತಬಸ್ಸುಮ್ ದಿನೇಶ್ ರಾವ್ ದಾಖಲಿಸಿದ್ದ ಖಾಸಗಿ ದೂರನ್ನು ಪರಿಗಣಿಸಿರುವ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶ ಕೆ. ಎಂ. ಶಿವಕುಮಾರ್ ಆರೋಪಿ ಯತ್ನಾಳ್ ಅವರಿಗೆ ಸಮನ್ಸ್ ಜಾರಿಗೊಳಿಸಲು ಆದೇಶಿಸಿದ್ದಾರೆ.
ಇದನ್ನೂ ಓದಿ: ನಕಲಿ ದಾಖಲೆ ಸಲ್ಲಿಸಿ ಜಲಸಂಪನ್ಮೂಲ ಇಲಾಖೆಯಲ್ಲಿ ಹುದ್ದೆ ಗಿಟ್ಟಿಸಿಕೊಳ್ಳಲು ಪ್ರಯತ್ನ ; 48 ಆರೋಪಿಗಳ ಬಂಧನ
“ನನ್ನನ್ನು ದೇಶವಿರೋಧಿ ಎಂದು ಹೇಳಿರುವ ಯತ್ನಾಳ್ ಹೇಳಿಕೆಯಿಂದ ನನಗೆ ನೋವಾಗಿದೆ” ಎಂದು ಆರೋಪಿಸಿ ತಬಸ್ಸುಮ್, ಯತ್ನಾಳ್ ವಿರುದ್ಧ ಐಪಿಸಿ ಸೆಕ್ಷನ್ 499 ಮತ್ತು 500ರ ಅಡಿಯಲ್ಲಿ 2024ರ ಏಪ್ರಿಲ್ 15ರಂದು ಖಾಸಗಿ ದೂರು ದಾಖಲಿಸಿದ್ದರು. ಈ ದೂರನ್ನು ಪರಿಗಣಿಸಿರುವ ನ್ಯಾಯಾಲಯವು ಆರೋಪಿ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಲು ಸಂಬಂಧಿಸಿ ಠಾಣಾ ಪೊಲೀಸರಿಗೆ ನಿರ್ದೇಶಿಸಿದೆ.
ವಿಚಾರಣೆಯನ್ನು ಸೆಪ್ಟೆಂಬರ್ 20ಕ್ಕೆ ಮುಂದೂಡಲಾಗಿದೆ. ತಬಸ್ಸುಮ್ ಪರ ಹೈಕೋರ್ಟ್ ವಕೀಲ ಸೂರ್ಯ ಮುಕುಂದರಾಜ್ ಮತ್ತು ಬಿ ಸಂಜಯ ಯಾದವ್ ವಕಾಲತ್ತು ವಹಿಸಿದ್ದಾರೆ.
ಇದನ್ನೂ ನೋಡಿ: 18ನೇ ವಯಸ್ಸಿಗೆ ಸರ್ಕಾರವನ್ನು ಆರಿಸುವವಳಿಗೆ ಬಾಳ ಸಂಗಾತಿಯನ್ನು ಆರಿಸಲು ಅರ್ಹತೆ ಇರುವುದಿಲ್ಲವೆ? – ಕೆ.ಎಸ್ ವಿಮಲಾ