MGNREGA ಕುರಿತು ಚರ್ಚಿಸಲು ಜನವರಿ 22ರಿಂದ ವಿಶೇಷ ಅಧಿವೇಶನ: ಸಂಪುಟ ಸಭೆ​​ ನಿರ್ಧಾರ

ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(MGNREGA)ಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲು ರಾಜ್ಯ ಸರ್ಕಾರ ಜನವರಿ 22ರಿಂದ ಒಂದು ವಾರ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದೆ.

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ​​ ಸಭೆಯಲ್ಲಿ ಜನವರಿ 22ರಿಂದ 31ರ ವರೆಗೆ ವಿಶೇಷ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ.

ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು, ಜನವರಿ 22ರಂದು ಉಭಯ ಸದನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ ಎಂದರು.

ಇದನ್ನೂ ಓದಿ: ಕುಬ್ಜವಾಗುತ್ತಿರುವ ಸಮಾಜದಲ್ಲಿ ಯುವ ಸಮುದಾಯ

ಕೇಂದ್ರ ಸರ್ಕಾರ ಮನರೇಗಾ ಯೋಜನೆ ಹೆಸರು ಬದಲಾವಣೆ ಮಾಡಿದ್ದು, ಈ ಬಗ್ಗೆ ವಿಶೇಷ ಅಧಿವೇಶನದಲ್ಲಿ ಚರ್ಚಿಸಲು ನಿರ್ಧರಿಸಲಾಗಿದೆ. ಅಲ್ಲದೆ ಈ ವಿಶೇಷ ಅಧಿವೇಶನದಲ್ಲಿ ವಿಬಿಜಿ ರಾಮ್‌ಜಿ ಕಾಯ್ದೆಯನ್ನು ಹಿಂಪಡೆದು ಮನರೇಗಾ ಕಾಯ್ದೆಯನ್ನೇ ಮರು ಸ್ಥಾಪಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ನಿರ್ಣಯ ಅಂಗೀಕರಿಸುವ ಸಾಧ್ಯತೆ ಇದೆ.

ಕಳೆದ ವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಬಿಜಿ ರಾಮ್‌ಜಿ ಕಾಯ್ದೆಯನ್ನು ವಿರೋಧಿಸಿ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ಅಲ್ಲದೆ, ಈ ಕಾಯ್ದೆ ವಿರುದ್ಧ ಕಾನೂನು ಹೋರಾಟ ನಡೆಸುವತೀರ್ಮಾನವನ್ನು ರಾಜ್ಯಸರ್ಕಾರ ಕೈಗೊಂಡಿತ್ತು.

ಜನವರಿ 14ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದೂ, ಈ ಸಂಪುಟ ಸಭೆಯಲ್ಲಿ ಜನವರಿ.22ರ ಬೆಳಗ್ಗೆ 11 ಗಂಟೆಯಿಂದ ವಿಶೇಷ ಅಧಿವೇಶನ ಕರೆಯಲು ನಿರ್ಧರ ಕೈಗೊಳ್ಳಲಾಗಿದೆ.

ಇದನ್ನೂ ನೋಡಿ: ಕೇಂದ್ರದ ಉದ್ಯೋಗ ಪರೀಕ್ಷೆ ಕನ್ನಡದಲ್ಲೂ ನಡೆಯಲಿ Janashakthi Media

Donate Janashakthi Media

Leave a Reply

Your email address will not be published. Required fields are marked *