ಸೆಪ್ಟೆಂಬರ್ 18 ರಿಂದ 22ರ ವರೆಗೆ ಸಂಸತ್ ವಿಶೇಷ ಅಧಿವೇಶನ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಘೋಷಣೆ

ನವದೆಹಲಿ: ಸೆಪ್ಟೆಂಬರ್ 18 ಮತ್ತು 22 ರ ನಡುವೆ ಐದು ದಿನಗಳ ಕಾಲ ಸಂಸತ್ತಿನ ವಿಶೇಷ ಅಧಿವೇಶನವನ್ನು ಸರ್ಕಾರ ಕರೆದಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಗುರುವಾರ ಹೇಳಿದ್ದು, ಅಮೃತ್ ಕಾಲದ ಈ ಮಹತ್ವದ ಕಾಲಫಟ್ಟದಲ್ಲಿ ಒಂದು ರಚನಾತ್ಮಕ ಅಧಿವೇಶವನ್ನು ಎದುರು ನೋಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಸಂಸತ್ ಅಧಿವೇಶನ ಕಳೆದ ತಿಂಗಳಗಷ್ಟೆ ಮುಗಿದಿತ್ತು.

ಈ ಬಗ್ಗೆ ಟ್ವಿಟರ್‌(ಎಕ್ಸ್‌)ನಲ್ಲಿ ಮಾಹಿತಿ ನೀಡಿರುವ ಜೋಶಿ, “ಸಂಸತ್ತಿನ ವಿಶೇಷ ಅಧಿವೇಶನವನ್ನು ಸಪ್ಟೆಂಬರ್ 18 ರಿಂದ 22ರ ವರೆಗೆ ಕರೆಯಲಾಗಿದ್ದು ಒಟ್ಟು 5 ಅವಧಿಗಳು ಇರಲಿವೆ. 17ನೇ ಲೋಕಸಭೆಯ 13ನೇ ಅಧಿವೇಶನ ಹಾಗೂ ರಾಜ್ಯಸಭೆಯ 261 ನೇ ಅಧಿವೇಶನ ಇದಾಗಿರಲಿದೆ.” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶಾಲೆ ತುಂಬಾ ಮಕ್ಕಳು, ಆದರೆ ಶಿಕ್ಷಕರಿಲ್ಲ; ಸ್ಪೀಕರ್ ಯು.ಟಿ. ಖಾದರ್ ಊರಿನ ಸರ್ಕಾರಿ ಶಾಲೆಯ ಕತೆಯಿದು!

ಸೆಪ್ಟೆಂಬರ್ 9 ಮತ್ತು 10 ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜಿ 20 ಶೃಂಗಸಭೆಯ ನಂತರ ನಡೆಯಲಿರುವ ಅಧಿವೇಶನದ ಕಾರ್ಯಸೂಚಿಯಲ್ಲಿ ಯಾವುದೇ ಹೇಳಿಕೆನನ್ನು ನೀಡಿಲ್ಲ. ಮೇ 28ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ಹಳೆಯ ಸಂಸತ್ ಭವನ ಹಾಗೂ ನೂತನ ಕಟ್ಟಡದ ಚಿತ್ರವನ್ನು ಸಚಿವ ಜೋಶಿ ಲಗತ್ತಿಸಿದ್ದಾರೆ.

ಕಳೆದ ತಿಂಗಳು ಮುಕ್ತಾಯಗೊಂಡ ಸಂಸತ್ತಿನ ಮುಂಗಾರು ಅಧಿವೇಶನವು ಹಳೆಯ ಸಂಸತ್ತಿನ ಕಟ್ಟಡದಲ್ಲಿ ನಡೆಯಿತು. ವಿಶೇಷ ಅಧಿವೇಶನದ ಘೋಷಣೆಯು ರಾಜಕೀಯ ವಲಯಗಳಲ್ಲಿ ಅಚ್ಚರಿ ಮೂಡಿಸಿದೆ. ಈ ವರ್ಷದ ಕೊನೆಯಲ್ಲಿ ದೇಶದ ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗೆ ಪಕ್ಷಗಳು ಸಜ್ಜಾಗುತ್ತಿವೆ. ಅದಾಗ್ಯೂ ಸಂಸತ್ತಿನ ಚಳಿಗಾಲದ ಅಧಿವೇಶನ ಸಾಮಾನ್ಯವಾಗಿ ನವೆಂಬರ್ ಕೊನೆಯ ವಾರದಲ್ಲಿ ಪ್ರಾರಂಭವಾಗುತ್ತದೆ.

ವಿಡಿಯೊ ನೋಡಿ: ಚಲೋ ಬೆಳ್ತಂಗಡಿ : ದೇವರ ಹೆಸರಿನಲ್ಲಿ ಎಲ್ಲ ಅನಾಚಾರಗಳನ್ನು ಮುಚ್ಚಿಹಾಕಲಾಗುತ್ತಿದೆ – ಮೀನಾಕ್ಷಿ ಬಾಳಿ

Donate Janashakthi Media

Leave a Reply

Your email address will not be published. Required fields are marked *