ಶ್ರೀಲಂಕಾದಲ್ಲಿ ಎರಡನೇ ಬಾರಿ ತುರ್ತು ಪರಿಸ್ಥಿತಿ ಜಾರಿ

ಕೊಲೊಂಬೊ: ಶ್ರೀಲಂಕಾ ದ್ವೀಪ ರಾಷ್ಟ್ರದಲ್ಲಿ ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಕಳೆದ ಐದು ವಾರಗಳಲ್ಲಿ ಎರಡನೇ ಬಾರಿ ನೆನ್ನೆ(ಮೇ 06) ಮಧ್ಯರಾತ್ರಿಯಿಂದಲೇ ತುರ್ತು ಪರಿಸ್ಥಿತಿ ಘೋಷಿಸಿದ್ದು, ಸೇನೆಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ.

ದೇಶದ ವಿದೇಶಿ ವಿನಿಯಮ ಮೀಸಲು ನಿಧಿ ಕರಗಿ, ಸಾಲದ ಸುಳಿಗೆ ಸಿಲುಕಿ ಶ್ರೀಲಂಕಾದಲ್ಲಿ ಭಾರೀ ಸಂಕಷ್ಟಕ್ಕೆ ಎದುರಾಗಿದೆ. ಪೆಟ್ರೋಲ್‌, ಡೀಸೆಲ್‌, ದಿನಬಳಕೆ ವಸ್ತುಗಳು, ಔಷಧಗಳಿಗೆ ಹಾಹಾಕಾರ ಎದುರಾಗಿದ್ದು ಸರಕಾರದ ವಿರುದ್ಧ ಜನಾಕ್ರೋಶ ತೀವ್ರಗೊಂಡಿದೆ. ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ವಿದ್ಯಾರ್ಥಿ ಸಂಘಟನೆಗಳು ನೆನ್ನೆ ಸಂಸತ್ತಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದವು. ಕಳೆದ ಏಪ್ರಿಲ್‌ 1ರಂದು ಗೋಟಾಬಯ ರಾಜಪಕ್ಸೆ ಸರ್ಕಾರ ತುರ್ತು ಪರಿಸ್ಥಿತಿ ಘೋಷಿಸಿ, ಏ. 6ರಂದು ಹಿಂಪಡೆದುಕೊಂಡಿದ್ದರು.

ಶ್ರೀಲಂಕಾದಲ್ಲಿ ಅಗತ್ಯವಸ್ತುಗಳ ಬೆಲೆ ಜನಸಾಮಾನ್ಯರ ಕೈಗೆ ನಿಲುಕದಷ್ಟು ಏರಿಕೆಯಾಗಿವೆ. ಹಣದುಬ್ಬರದ ಪರಿಣಾಮ ಜನಸಾಮಾನ್ಯರು ಜೀವನ ನಡೆಸದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಾರ್ವಜನಿಕ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ಅಧ್ಯಕ್ಷ ಗೋಟಬಯ ರಾಜಪಕ್ಸೆ ವಕ್ತಾರರು ತಿಳಿಸಿದ್ದಾರೆ.

ಇದನ್ನು ಓದಿ: ಶ್ರೀಲಂಕಾ: ಸಾರ್ವಭೌಮತ್ವಕ್ಕೇ ಕುತ್ತು ತರಬಹುದಾದ ಆರ್ಥಿಕ ಬಿಕ್ಕಟ್ಟು

ಇದಕ್ಕೂ ಮುನ್ನ ರಾಜಪಕ್ಸೆ ರಾಜೀನಾಮೆಗೆ ಆಗ್ರಹಿಸಿ ಸಂಸತ್ತಿನತ್ತ ಪ್ರತಿಭಟನಾ ಮೆರವಣಿಗೆ ಕೊಂಡೊಯ್ಯಲು ಯತ್ನಿಸಿದ ವಿದ್ಯಾರ್ಥಿಗಳನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದ್ದಾರೆ. “ಸಾರ್ವಜನಿಕ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಶ್ರೀಲಂಕಾ ಸರ್ಕಾರದ ವಿರುದ್ಧ ಸಾರ್ವಜನಿಕರು ಬೀದಿಗಿಳಿದು ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆಯೇ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

ದೇಶದ ಮೂರನೇ ಎರಡರಷ್ಟು ನೌಕಾಪಡೆಯನ್ನು ಹೊಂದಿರುವ ಖಾಸಗಿ ಬಸ್‌ಗಳು ಸಹ ರಸ್ತೆಗಿಳಿಯಲಿಲ್ಲ ಎಂದು ಖಾಸಗಿ ಬಸ್ ನಿರ್ವಾಹಕರ ಸಂಘದ ಅಧ್ಯಕ್ಷ ಗೇಮುನು ವಿಜೆರತ್ನ ಹೇಳಿದರು. “ನಾವು ಇಂದು ಸೇವೆಗಳನ್ನು ಒದಗಿಸುತ್ತಿಲ್ಲ, ಆದರೆ 20 ಕಿಲೋಮೀಟರ್ ವ್ಯಾಪ್ತಿಯೊಳಗೆ ಜನರ ಗುಂಪುಗಳು ಸರ್ಕಾರ ವಿರೋಧಿ ಪ್ರತಿಭಟನೆಯಲ್ಲಿ ಸೇರಲು ಬಯಸಿದರೆ, ನಾವು ನಮ್ಮ ಬಸ್‌ಗಳ ಸೇವೆಯನ್ನು ಉಚಿತವಾಗಿ ನೀಡುತ್ತೇವೆ” ಎಂದು ತಿಳಿಸಿದರು.

Donate Janashakthi Media

Leave a Reply

Your email address will not be published. Required fields are marked *