ಹಾವೇರಿ| ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಸೃಷ್ಟಿ ಪಾಟೀಲ ರಾಜೀನಾಮೆ

ಹಾವೇರಿ: ಜಿಲ್ಲಾ ಬಿಜೆಪಿಯ ಮಹಿಳಾ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಜಿಲ್ಲೆಯ ಹಿರೇಕೆರೂರು ಕ್ಷೇತ್ರದ ಮಾಜಿ ಶಾಸಕರಾದ ಬಿ.ಸಿ. ಪಾಟೀಲ ರ ಮಗಳು ಸೃಷ್ಟಿ ಪಾಟೀಲ ರಾಜೀನಾಮೆ ನೀಡಿದ್ದಾರೆ. ಹಾವೇರಿ

“ಪಕ್ಷದ ಸಾಮಾನ್ಯ ಕಾರ್ಯಕರ್ತೆಯಾಗಿ ಮುಂದುವರಿಯುತ್ತೇನೆ” ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಅರುಣ ಪೂಜಾರ ರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಸೃಷ್ಟಿ ಪಾಟೀಲ, ಹೇಳಿದ್ದಾರೆ.

ಇದನ್ನೂ ಓದಿ: ಕಾರ್ಮಿಕ ವರ್ಗದ ಬೇಡಿಕೆಗಳನ್ನು ಈಡೇರಿಸಲು ಒತ್ತಾಯ; ಸಿಐಟಿಯು ನೇತೃತ್ವದಲ್ಲಿ ಧರಣಿ

‘ಹಾವೇರಿ ಜಿಲ್ಲಾ ಮಹಿಳಾ ಮೋರ್ಚಾ ಘಟಕದ ಅಧ್ಯಕ್ಷರಾಗಿ ಮಾಡಿದ್ದು ಸಂತೋಷದ ವಿಷಯ. ಒಂದು ವರ್ಷದಿಂದ ಸಾಧ್ಯವಾದಷ್ಟು ಕೆಲಸ ಮಾಡಿಕೊಂಡು ಬಂದಿರುತ್ತೇನೆ. ಆದರೆ, ನಿರೀಕ್ಷಿಸಿದಷ್ಟು ಕೆಲಸ ನನ್ನಿಂದ ಆಗಿಲ್ಲವೆಂಬ ಭಾವನೆ ಕಾಡುತ್ತಿದೆ. ಆದ್ದರಿಂದ ಆ ಸ್ಥಾನಕ್ಕೆ ಅನ್ಯಾಯವಾಗಬಾರದೆಂಬ ಕಾರಣಕ್ಕೆ ನನ್ನ ಸ್ವ-ಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ನೋಡಿ: ಕೇಂದ್ರ ಬಜೆಟ್‌ 2025 : ಬಡವರಿಗೆ ಏನೂ ಇಲ್ಲ! ಶ್ರೀಮಂತರಿಗಾಗಿ ಮಂಡಿಸಿದ ಬಜೆಟ್‌ Janashakthi Media

Donate Janashakthi Media

Leave a Reply

Your email address will not be published. Required fields are marked *