ನಾಳೆಯಿಂದ ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ ಆರಂಭ,ಮೇ 2ನೇ ವಾರದಲ್ಲಿ ಫಲಿತಾಂಶ ಪ್ರಕಟ ಸಾಧ್ಯತೆ

Please follow and like us:

ಬೆಂಗಳೂರು : ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯ ಮೌಲ್ಯಮಾಪನ ಆರಂಭವಾಗಲಿದ್ದು, ಮೇ 2 ನೇ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎನ್ನಲಾಗಿದೆ.

ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬಿಡುಗಡೆಯಾಗಿದ್ದು, ಮೇ ಎರಡನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಬಿಡುಗಡೆಯಾಗುವ ಸಾಧ್ಯತೆ ಇದೆ.ಈ ಬಾರಿ ಎಸ್‌ಎಸ್‌ಎಲ್ಸಿ ವಾರ್ಷಿಕ ಪರೀಕ್ಷೆಗೆ 8.60 ಲಕ್ಷವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು.

ಪ್ರಶ್ನೆ ಪತ್ರಿಕೆಗಳ ಮೌಲ್ಯ ಮಾಪನ ಏ.24ರಿಂದ ಆರಂಭವಾಗಲಿದೆ. ಮೌಲ್ಯ ಮಾಪನ ಕಾರ್ಯಕ್ಕೆ ಹಾಜರಾಗಬೇಕಾದ ಶಿಕ್ಷಕರಿಗೆ ಈಗಾಗಲೇ ಮ೦ಡಳಿಯು ಆದೇಶಕಳುಹಿಸಿದ್ದು ಶೀಘ್ರವೇ ಈ ಕಾರ್ಯ ಮುಗಿಸಿ ಫಲಿತಾಂಶ ಪ್ರಕಟಿಸಲಿದೆ. ಆದಷ್ಟು ಬೇಗ ಎಸ್.ಎಸ್. ಎಲ್ಸಿ ಫಲಿತಾಂಶ ಪ್ರಕಟಿಸಲು ಯೋಚಿಸಲಾಗಿದ್ದು, . ಮೇ 2ನೇ ವಾರದಲ್ಲಿ ಚುನಾವಣೆ ಮತ್ತು ಫಲಿತಾಂಶ ಎರಡೂ ಇರುವುದರಿಂದ ಇದಕ್ಕೆ ಅಡ್ಡಿ ಉಂಟಾಗದಂತೆ ಎಸ್‌ಎಸ್‌ಎಲ್ಸಿ ಫಲಿತಾಂಶ ಪ್ರಕಟಿಸಲು ಯೋಚಿಸಲಾಗಿದೆ ಎಂದು ಮಂಡಳಿ ಅಧ್ಯಕ್ಷ ರಾಮಚಂದ್ರನ್ ಹೇಳಿದ್ದಾರೆ.

ಇದನ್ನೂ ಓದಿ : ಎಸ್‌ಎಸ್‌ಎಲ್‌ಸಿ ಪರೀಕ್ಷಾ ಅಕ್ರಮ : ರಾಜ್ಯಾದ್ಯಂತ 39 ಶಿಕ್ಷಕರು ಅಮಾನತು

10 ನೇ ತರಗತಿ ಮಕ್ಕಳು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಮೇ ಎರಡನೇ ವಾರದಲ್ಲಿ ಪರೀಕ್ಷೆಯ ಫಲಿತಾಂಶ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಸಂಬಂಧ ಶೀಘ್ರ ಅಧಿಕೃತ ಪ್ರಕಟಣೆ ಹೊರಡಿಸಲಾಗುತ್ತದೆ ಎಂದು ಮಂಡಳಿ ಅಧ್ಯಕ್ಷ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರನ್ ಮಾಹಿತಿ ನೀಡಿದ್ದಾರೆ.
SSLC ಫಲಿತಾಂಶವನ್ನು ಇಲಾಖೆಯ ಅಧಿಕೃತ ವೆಬ್ಸೈಟ್‌ಗಳಲ್ಲಿ ಪ್ರಕಟಿಸಲಾಗುವುದು. ವಿದ್ಯಾರ್ಥಿಗಳು karresults.nic.in ಮತ್ತು kseab.karnataka.gov.in. ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.ಅಧಿಕೃತ ವೆಬ್ಸೈಟ್-karresults.nic.in ಗೆ ಹೋಗಿ, ಮುಖಪುಟದಲ್ಲಿ, ಕರ್ನಾಟಕ SSLC 2023 ಫಲಿತಾಂಶ ಲಿಂಕ್ ಅನ್ನು ದರೆ ಹೊಸ ಲಾಗಿನ್ ಪುಟ ತೆರೆಯುತ್ತದೆ, ನಂತರ ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ಸಲ್ಲಿಸಿದರೆ ಫಲಿತಾಂಶ ವೀಕ್ಷಣೆ ಮಾಡಬಹುದಾಗಿದೆ.

Please follow and like us:
Donate Janashakthi Media

Leave a Reply

Your email address will not be published. Required fields are marked *