ಬೆಂಗಳೂರು : ಕಳೆದ ಮಾರ್ಚ್ 31 ರಿಂದ ರಾಜ್ಯದಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭಗೊಂಡಿದೆ. ಪರೀಕ್ಷೆ ಆರಂಭಗೊಂಡ ಮೊದಲ ದಿನದಲ್ಲೆ ಕನ್ನಡ ಪ್ರಶ್ನೆ ಪತ್ರಿಕೆಯು ಸೋರಿಕೆಯಾಗಿ ಪ್ರಶ್ನೆ ಪತ್ರಿಕೆ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರಥಮ ಭಾಷೆ ಕನ್ನಡ ಪ್ರಶ್ನೆ ಪತ್ರಿಕೆಯ ಫೋಟೋ ತೆಗೆದು ಕಿಡಿಗೇಡಿಗಳು ವಾಟ್ಸ್ ಆ್ಯಪ್ನಲ್ಲಿ ವೈರಲ್ ಮಾಡಿದ್ದರು ಇದಾದ ಬಳಿಕ ಗಣಿತ ಪ್ರಶ್ನೆ ಪತ್ರಿಕೆಯು ಕೂಡ ಸೋರಿಕೆಯಾಗಿ ವಿದ್ಯಾರ್ಥಿಗಳಲ್ಲಿ ಕೆಲಕಾಲ ಆತಂಕದ ವಾತಾವರಣವನ್ನು ಉಂಟುಮಾಡಿತ್ತು. ಇದೀಗ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ನಕಲು ಮಾಡಲು ಸಹಕರಿಸಿದ ಆರೋಪದ ಮೇಲೆ 39 ಶಿಕ್ಷಕರು ಅಮಾನತು ಮಾಡಾಲಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಲಬುರಗಿಯಲ್ಲಿ 16, ಬೀದರ್ ನಲ್ಲಿ 16 ಹಾಗೂ ಬೆಳಗಾವಿಯಲ್ಲಿ 7 ಮಂದಿ ಶಿಕ್ಷಕರು ಸೇರಿ ಒಟ್ಟು 39 ಮಂದಿ ಶಿಕ್ಷಕರು ನಕಲಗಿರ ಸಹಕರಿಸಿದ ಆರೋಪದ ಮೇಲೆ ಅಮನಾತಿಗೆ ಒಳಗಾಗಿದ್ದಾರೆ.
ಇದನ್ನೂ ಓದಿ : SSLC Exams 2023: ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ! ಸಾಮಾಜಿಕ ಜಾಲತಾಣದಲ್ಲಿ ವೈರಲ್
ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯ ಪರೀಕ್ಷಾ ಕೇಂದ್ರದಲ್ಲಿ ಏಪ್ರಿಲ್ 3 ರಂದು ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ 7 ಶಿಕ್ಷಕರನ್ನು ಗುರುವಾರ ಸೇವೆಯಿಂದ ಅಮಾನತು ಮಾಡಿ ಡಿಡಿಪಿಐ ಬಸವರಾಜ ನಾಲತವಾಡ ಆದೇಶ ಹೊರಡಿಸಿದ್ದಾರೆ.