ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಣೆಯಾಗಿದೆ. ದಿನಾಂಕ: ಸೆಪ್ಟೆಂಬರ್ 12ರಿಂದ ರಿಂದ ಸೆಪ್ಟೆಂಬರ್ 19 ರವರೆಗೆ ಅರ್ಧವಾರ್ಷಿಕ ಪರೀಕ್ಷೆ ನಡೆಸಲಿದೆ.
2025-26ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಧವಾರ್ಷಿಕ ಪರೀಕ್ಷೆಯನ್ನು ನಡೆಸಲು ಮಂಡಲಿಯಿಂದ ಪ್ರಶ್ನೆಪತ್ರಿಕೆಗಳನ್ನು ಸಿದ್ದಪಡಿಸಿ ನೀಡುವಂತೆ, ಉಲ್ಲೇಖಿತ ಸುತ್ತೋಲೆಯಲ್ಲಿ ಆದೇಶವಾಗಿರುತ್ತದೆ. ಬೆಂಗಳೂರು
ಇದನ್ನೂ ಓದಿ: ನೇಪಾಳದಲ್ಲಿ ಪ್ರಕ್ಷುಬ್ಧತೆ: ಒಂದು ಪ್ರಜಾಸತ್ತಾತ್ಮಕ ನವೀಕರಣವೇ ಯುವಜನರ ಪ್ರತಿಭಟನೆಯ ಫಲಿತಾಂಶವಾಗಬೇಕು – ಸಿಪಿಐ(ಎಂ)
ಅದರಂತೆ ಎಲ್ಲಾ ವಿಷಯಗಳಿಗೆ ಮಂಡಲಿ ಹಂತದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗಿದ್ದು, ಪ್ರಶ್ನೆ ಪತ್ರಿಕಗಳನ್ನು ಶಾಲಾ ಮುಖ್ಯ ಶಿಕ್ಷಕರ ಲಾಗಿನ್ಗೆ ಲಭ್ಯಗೊಳಿಸಲಾಗುವುದು.
ಅದರಂತೆ, 2025-26 ಸಾಲಿನ 2.2.2. ಅರ್ಧವಾರ್ಷಿಕ ಪರೀಕ್ಷೆಯನ್ನು ದಿನಾಂಕ:12-09-2025 ರಿಂದ ದಿನಾಂಕ:19-09-2025 ರವರೆಗೆ ನಡೆಸಲು ತೀರ್ಮಾನಿಸಿ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಸದರಿ ವೇಳಾಪಟ್ಟಿಯನ್ನು ಈ ಪತ್ರಕ್ಕೆ ಲಗತ್ತಿಸಲಾಗಿದೆ.
ಇದನ್ನೂ ನೋಡಿ: ಅಮೆರಿಕ ಮಣಿಸಿದ ಮಹಾನ್ ನಾಯಕ ಫಿಡೆಲ್ ಕ್ಯಾಸ್ಟ್ರೊ – ಕೆ.ಎಸ್.ರವಿಕುಮಾರ್Janashakthi Media
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಎಲ್ಲಾ http://www.kseab.karnataka.gov.in ಪ್ರೌಢಶಾಲಾ ಮುಖ್ಯ ಶಿಕ್ಷಕರು ಮಂಡಲಿಯ ಡೌನ್ಲೋಡ್ ಮಾಡಿಕೊಂಡು ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕುರಿತು ಜಿಲ್ಲಾ ಉಪನಿರ್ದೇಶಕರು(ಆಡಳಿತ) ರವರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮವಹಿಸಲು ತಿಳಿಸಿದೆ.

