ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2022-2023ರ ಸಾಲಿನ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿಯೂ ಬಿಡುಗಡೆಯಾಗಿದ್ದು, 2023ರ ಮಾರ್ಚ್ 31 ರಿಂದ ಎಪ್ರಿಲ್ 15 ವರೆಗೆ ಪರೀಕ್ಷೆ ನಡೆಯಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಣೆ ಎರಡು ಬದಲಾವಣೆ ಮಾಡಿ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಮಾರ್ಚ್‌ 31ರಂದು ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ)), ಸಂಸ್ಕೃತ ಪರೀಕ್ಷೆ ನಡೆಯಲಿದೆ.

ಏಪ್ರಿಲ್‌ 3 ರಂದು ಗಣಿತ ಶಾಸ್ತ್ರ, ಸಮಾಜ ಶಾಸ್ತ್ರ.

ಏಪ್ರಿಲ್ 6 ರಂದು ದ್ವಿತೀಯ ಭಾಷೆಗಳಾದ ಇಂಗ್ಲಿಷ್, ಕನ್ನಡ.

ಏಪ್ರಿಲ್ 10 ರಂದು ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ.

ಏಪ್ರಿಲ್‌ 12 ರಂದು ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ತುಳು, ಕೊಂಕಣಿ, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ.

ಏಪ್ರಿಲ್‌ 15 ರಂದು ಸಮಾಜ ವಿಜ್ಞಾನ

ಮಹಾವೀರ ಜಯಂತಿಯ ಅಂಗವಾಗಿ ಏಪ್ರಿಲ್ 4ರಂದು ಸರ್ಕಾರಿ ರಜೆ ಇದ್ದು ಅಂದು ನಡೆಯಬೇಕಿದ್ದ ಗಣಿತ ಮತ್ತು ಸಮಾಜಶಾಸ್ತ್ರ ವಿಷಯದ ಪರೀಕ್ಷೆಯನ್ನು ಏಪ್ರಿಲ್ 3ರಂದು ನಿಗದಿಪಡಿಸಲಾಗಿದೆ. ಇದೊಂದು ಬದಲಾವಣೆ ಹೊರತುಪಡಿಸಿ ಈ ಹಿಂದೆ ಹೊರಡಿಸಲಾಗಿದ್ದ ಅಂತಿಮ ವೇಳಾಪಟ್ಟಿಯಂತೆ ಇತರ ವಿಷಯಗಳ ಪರೀಕ್ಷೆ ನಿಗದಿಯಾಗಿದೆ.

ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯು ಪ್ರತಿದಿನ ಒಂದು ವಿಷಯಕ್ಕೆ ಮಾತ್ರ ನಡೆಯಲಿದೆ. ಬೆಳಗ್ಗೆ 10-30 ರಿಂದ ಮಧ್ಯಾಹ್ನ 01-30 ರವರೆಗೆ ಪರೀಕ್ಷೆ ನಡೆಯುತ್ತದೆ.

Donate Janashakthi Media

Leave a Reply

Your email address will not be published. Required fields are marked *