ಬೆಂಗಳೂರು: ದೇಶದಲ್ಲಿ ಸಿಬಿಎಸ್‌ಇ ಪರೀಕ್ಷೆಗಳು ರದ್ದಾದ ಕೆಲವೇ ಗಂಟೆಗಳಲ್ಲಿ ರಾಜ್ಯದಲ್ಲಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದುಪಡಿಸುವ ಅಥವಾ 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡುವ ಬಗ್ಗೆ ನಡೆಯುತ್ತಿರುವ ಚರ್ಚೆಯ ಬಗ್ಗೆ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದರು ಸದ್ಯ ಈ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ ಎಂದು ಹೇಳಿದ್ದಾರೆ.
ಇದನ್ನು ಓದಿ: ಕೋವಿಡ್: ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ ರದ್ದು
ಈದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಸಚಿವರು ಸಿಬಿಎಸ್‌ಇ ನಿರ್ಧಾರದ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ 12ನೇ ತರಗತಿಯ ಪರೀಕ್ಷೆಗಳ ಬಗ್ಗೆ ಮುಂದಿನ ಬೆಳವಣಿಗೆವರೆಗೆ ಕಾದಿರುವುದಾಗಿ ತಿಳಿಸಿದ್ದಾರೆ.
CBSE ಹತ್ತನೇ ತರಗತಿಗಳ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ನಮ್ಮ ರಾಜ್ಯದ SSLC ಪರೀಕ್ಷೆಗಳ ಕುರಿತು ಈಗಾಗಲೇ ಊಹಾಪೋಹ ಏಳತೊಡಗಿದೆ.
ನಮ್ಮ ರಾಜ್ಯದ SSLC ಪರೀಕ್ಷೆಗಳು ಪ್ರಾರಂಭ ವಾಗಬೇಕಿರುವುದು
21.6.2021 ರಿಂದ, ಅಂದರೆ ಜೂನ್ 21 ರಿಂದ.ಆದ್ದರಿಂದ ಈಗ ನಮ್ಮ ರಾಜ್ಯದಲ್ಲಿ CBSE ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ.
— S.Suresh Kumar, Minister – Govt of Karnataka (@nimmasuresh) April 14, 2021
ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗುವುದು 21.6.2021 ರಿಂದ, ಅಂದರೆ ಜೂನ್ 21 ರಿಂದ. ಆದ್ದರಿಂದ ಈಗ ನಮ್ಮ ರಾಜ್ಯದಲ್ಲಿ ಸಿಬಿಎಸ್‌ಇ ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.
ಸಿಬಿಎಸ್‌ಇ ನಿರ್ಧಾರದಿಂದ ಎಸ್‌ಎಸ್‌ಎಲ್‌ಸಿ ತರಗತಿಯ ಬೋರ್ಡ್ ಪರೀಕ್ಷೆ ರದ್ದು ಮಾಡುವ ಬಗ್ಗೆ ಹಾಗೂ 12ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡವ ಬಗ್ಗೆ ಸಾಕಷ್ಟು ಊಹಾಪೋಹಗಳು ಏಳತೊಡಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವರು ಪ್ರತಿಕ್ರಿಯಿಸಿದ್ದಾರೆ.