ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಸಚಿವರ ಆರೋಪಕ್ಕೆ ಸಿಎಂ ಮದ್ಯಪ್ರವೇಶ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ದಿನಾಂಕಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಸಚಿವರ ಮಧ್ಯೆಯ ಪ್ರತಿಕ್ರಿಯೆಗಳ ಬಗ್ಗೆ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಮದ್ಯಪ್ರವೇಶಿಸಬೇಕಾಗಿ ಬಂದಿದೆ.

ಇದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಶಿಕ್ಷಣ ಸಚಿವವರು ಪೂರ್ವಭಾವಿಯಾಗಿ ನನ್ನೊಂದಿಗೆ ಚರ್ಚಿಸಿ, ಎಸ್‌ಎಸ್‌ಎಲ್‌ ಪರೀಕ್ಷೆಗೆ ದಿನಾಂಕ ನಿಗದಿಪಡಿಸುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದ ನಂತರವೇ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ. ಈ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದ ನಂತರವೇ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ. ಈ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮತ್ತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ನಡುವೆ ಜಟಾಪಟಿ ನಡೆದಿದೆ. ಸಚಿವ ಎಸ್‌ ಸುರೇಶ್‌ ಕುಮಾರ್‌ ಅವರು ನೆನ್ನೆ (ಜೂನ್‌ 28) ಉನ್ನತ ಮಟ್ಟದ ಸಭೆಯ ನಂತರ ಎಸ್‌ಎಸ್ಎಲ್‌ಸಿ ಪರೀಕ್ಷಾ ದಿನಾಂಕವನ್ನು ಪ್ರಕಟಿಸಿದರು. ಈ ಬಗ್ಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವ ಬಗ್ಗೆ ಆರೋಗ್ಯ ಇಲಾಖೆ ಜೊತೆ ಚರ್ಚೆ ನಡೆಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *