ಬೆಂಗಳೂರು: ಜೂನ್ 21 ರಿಂದ ಪ್ರಾರಂಭವಾಗಬೇಕಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಮುಂದಿನ ಆದೇಶ ನೀಡುವವರೆಗೆ ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
‘ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿವೆ. ವಿದ್ಯಾರ್ಥಿಗಳು, ಪೋಷಕರು ಹಾಗೂ ವಿವಿಧ ಶಾಲಾ ಸಂಘಟನೆಗಳ ಆತಂಕವನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ’ ಎಂದೂ ಅವರು ಹೇಳಿದ್ದಾರೆ.
ಇದನ್ನು ಓದಿ: ಹಿಂದಿನ ಅತಿಥಿ ಉಪನ್ಯಾಕರನ್ನು ಮುಂದುವರೆಸಲು ಆಗ್ರಹ
‘ಕೋವಿಡ್ ಎರಡನೇ ಅಲೆಯ ಹರಡುವಿಕೆ ಸಂಪೂರ್ಣ ನಿಯಂತ್ರಣಕ್ಕೆ ಬಂದ ಬಳಿಕ, ಪರೀಕ್ಷೆಗೆ ಸಾಕಷ್ಟು ದಿನಗಳ ಮೊದದಲೇ ದಿನಾಂಕಗಳನ್ನು ಪ್ರಕಟಿಸಲಾಗುವುದು’ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
ʻವಿದ್ಯಾರ್ಥಿಗಳು ಯಾವುದೇ ಆತಂಕಗೊಳ್ಳದೆ ವಿದ್ಯಾಭ್ಯಾಸವನ್ನು ಮುಂದುವರೆಸಿ ಪರೀಕ್ಷೆಯ ಸಿದ್ಧತೆಗಳನ್ನು ಮಾಡಿಕೊಳ್ಳಿ. ಪರೀಕ್ಷೆಯ ಕುರಿತಂತೆ ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬೇಡಿ’ ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.