ಬೆಂಗಳೂರು: ಎಸ್ಎಸ್ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಇನ್ಮು ಮುಂದೆ ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಂಗಳವಾರ ಸೆ- 5 ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಈ ಘೋಷಣೆ ಮಾಡಿದರು. ಈ ನಿಯಮದ ಪ್ರಕಾರ ವಿದ್ಯಾರ್ಥಿಗಳು, ಕೆಲ ವಿಷಯಗಳಲ್ಲಿ ಫೇಲ್ ಆದರೂ ಮುಂದಿನ ತರಗತಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ.
ಇದನ್ನೂ ಓದಿ:ಶಿಕ್ಷಕರ ದಿನಾಚರಣೆ ಅಂಗವಾಗಿ 43 ಶಿಕ್ಷಕರಿಗೆ ಸಿಎಂ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ
2023-24ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯು ವಿದ್ಯಾರ್ಥಿಗಳು ವರ್ಷಕ್ಕೆ 3 ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು, ಫೇಲ್ ಅಥವಾ ಕಡಿಮೆ ಅಂಕ ಬಂದವರು 3 ಬಾರಿ ಪರೀಕ್ಷೆ ಬರೆಯಬಹುದು. 32.44 ಲಕ್ಷ ಮಕ್ಕಳಿಗೆ ಕಲಿಕಾ ಬಲವರ್ಧನೆ ಕಾರ್ಯಕ್ರಮ ನಡೆಸುವುದಾಗಿ ಮಧು ಬಂಗಾರಪ್ಪ ತಿಳಿಸಿದರು.