ಪರೀಕ್ಷೆಯ ವೇಳಾಪಟ್ಟಿಯಲ್ಲಿ ಮುಸ್ಲಿಂ ತುಷ್ಟೀಕರಣ : ಸುಳ್ಳು ಸುದ್ದಿ ಹರಡಿದ ಬಿಜೆಪಿ

ಬೆಂಗಳೂರು :  ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ದತಾ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಮುಸ್ಲಿಂರನ್ನು ಓಲೈಸಲಾಗಿದೆ ಎಂದು ಬಿಜೆಪಿಯ ಐಟಿ ಸೆಲ್‌ ಸುಳ್ಳು ಸುದ್ದಿ ಹರಡಿದೆ. ಪರೀಕ್ಷೆಯ

ಬಿಜೆಪಿಯ ಐಟಿ ಸೆಲ್‌ ಮತ್ತು ವಕ್ತಾರರು ಸುಳ್ಳು ಸುದ್ದಿ ಹರಡುವ ಮೂಲಕ ಕೋಮು ಘರ್ಷಣೆಗೆ ಪ್ರೇರೆಪಿಸುವ ಕೆಲಸ ನಡೆಯುತ್ತಿದೆ. ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿಯಲ್ಲಿ ಮುಸ್ಲಿಂ ತುಷ್ಟೀಕರಣದ ಆರೋಪ ಕೇಳಿಬಂದಿದೆ. ರಾಜ್ಯ ಸರ್ಕಾರದ ನಿರ್ದೇಶನದಂತೆ ಬೆಳಗ್ಗೆ ನಮಾಜ್‌ಗೆ ಅನುಕೂಲವಾಗುವಂತೆ ಎಸ್‌ಎಸ್‌ಎಲ್‌ಸಿ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಬದಲಿಸಿದೆ ಎಂದು ಬಿಜೆಪಿ ಆರೋಪ ಮಾಡಿತ್ತು.  ಪರೀಕ್ಷೆಯ

ಈ ಕುರಿತು ಬಿಜೆಪಿ ವಕ್ತಾರ ಹರಿಪ್ರಕಾಶ್ ಕೊಣೆಮನೆ  ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿದ್ದರು. ಅವರ ಪೋಸ್ಟ್‌ ವಿವರ ಈ ರೀತಿ ಇದೆ “ರಾಜ್ಯಮಟ್ಟದ ಎಸ್ ಎಸ್ ಎಲ್ ಸಿ ಪೂರ್ವ ಸಿದ್ದತಾ ಪರೀಕ್ಷೆಯ ವೇಳಾಪಟ್ಟಿಯಲ್ಲೂ ಸಹ ಮುಸ್ಲಿಂ ತುಷ್ಟೀಕರಣ. ಇದೇ ಮೊದಲ ಬಾರಿಗೆ ಕಾಂಗ್ರೆಸ್ ಸರ್ಕಾರದ ನಿರ್ದೇಶನದಂತೆ, ರಾಜ್ಯ ಶಿಕ್ಷಣ ಇಲಾಖೆ ಬೆಳಿಗ್ಗೆಯ ನಮಾಜ್ ಮಾಡಲು ಅನುಕೂಲ ಮಾಡಿಕೊಡಲು ಉಳಿದೆಲ್ಲ ದಿನದ ವೇಳಾಪಟ್ಟಿಯ ಸಮಯಕ್ಕೆ ಬದಲಾಗಿ ಶುಕ್ರವಾರದಂದು ಮಧ್ಯಾಹ್ನ ಪರೀಕ್ಷೆ ನಡೆಸಲು ನಿರ್ಧರಿಸಿದ್ದು ನಿಜವಾಗಿಯೂ ಖೇದಕರ. ಶಿಕ್ಷಣ ಕ್ಷೇತ್ರದಲ್ಲೂ ನೇರವಾಗಿ ಮುಸ್ಲಿಂ ತುಷ್ಟೀಕರಣದ ಈ ನೀತಿಯನ್ನು ಬಹಿರಂಗವಾಗಿ ಖಂಡಿಸಬೇಕಾಗಿದೆʼ, ಎಂದು ಬರೆದುಕೊಂಡಿದ್ದರು.‌

ಇದನ್ನೂ ಓದಿ : ಫ್ಯಾಕ್ಟ್‌ಚೆಕ್ | ಮುಸ್ಲಿಂ ಆಧ್ಯಾತ್ಮಿಕ ನಾಯಕನನ್ನು ಭಯೋತ್ಪಾದಕ ಬೆಂಬಲಿಗ ಎಂದು ಸುಳ್ಳು ಹೇಳಿದ ಬಿಜೆಪಿ ಶಾಸಕ ಯತ್ನಾಳ್

ಪರೀಕ್ಷೆಯ

ಇದೆ ವಿಚಾರವಾಗಿ ಬಿಜೆಪಿ ಕರ್ನಾಟಕದ ಫೆಸ್ಬುಕ್‌ ಪೇಜ್‌ನಲ್ಲಿ ಖಂಡನಾ ಹೇಳಿಕೆ ಬಂದಿತ್ತು. ಉಗ್ರ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಅನೇಕರು ತಮ್ಮ ಫೆಸ್ಬುಕ್‌ ಪೇಜ್‌ನಲ್ಲಿ ಹರೀಶ್‌ ಕೊಣೆಮನೆ ಅವರ ಫೆಸ್ಬುಕ್‌ ಪೋಸ್ಟ್‌ ಶೇರ್‌ ಮಾಡಿಕೊಂಡಿದ್ದರು.

ಇನ್ನೂ ಮಾರ್ಚ್ 1ರಂದು ಪಿಯುಸಿ ಮುಖ್ಯ ಪರೀಕ್ಷೆ ನಡೆಯಲಿದ್ದು, ಅದೇ ದಿನ 01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ ಇದೆ. ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯವಾಗಲಿದೆ. ಹೀಗಾಗಿ ಮಾರ್ಚ್ 1ರಂದು ಎಸ್‌ಎಸ್‌ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆ ಮಧ್ಯಾಹ್ನ 2 ಗಂಟೆಗೆ ಪ್ರಾರಂಭಿಸಲಾಗಿದೆ. ಯಾವುದೇ ನಮಾಜ್‌ಗೆ ಅನುಕೂಲ ಹಾಗೂ ಧರ್ಮದ ತುಷ್ಠೀಕರಣ ಇಲ್ಲ ಎಂದು ಕರ್ನಾಟಕ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ. ಪರೀಕ್ಷೆಯ

ಪರೀಕ್ಷಾ ಕೇಂದ್ರಗಳ ಕೊರತೆ ಹಾಗೂ ಗೊಂದಲ ಉಂಟಾಗುವುದನ್ನು ತಪ್ಪಿಸಲು ಈ ಕ್ರಮ ವಹಿಸಲಾಗಿದೆ ಎಂಬ ವಾಸ್ತವ ಅರಿವು ಬಿಜೆಪಿಗೆ ಇದ್ದರೂ , ಸುಳ್ಳು ಸುದ್ದಿ ಹರಡುವ ಮೂಲಕ ಬಿಜೆಪಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದೆ. ಸುಳ್ಳು ಸುದ್ದಿ ಹರಡಿದ ಹರೀಶ್‌ ಕೋಣೆಮನೆ, ಚಕ್ರವರ್ತಿ ಸೂಲಿಬೆಲೆಯರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂಬ ಕೂಗು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಪರೀಕ್ಷೆಯ

ಈ ವಿಡಿಯೋ ನೋಡಿಮಂಗಳೂರು – ರಾಷ್ಟ್ರ ಧ್ವಜ ಹಾರಿಸುವ ಅಶೋಕ ಸ್ಥಂಬದಲ್ಲಿ #ಆರೆಸ್ಸೆಸ್‌ ಬಾವುಟ ಹಾರಿಸಿದ ಕಿಡಿಗೇಡಿಗಳು

Donate Janashakthi Media

Leave a Reply

Your email address will not be published. Required fields are marked *