ಬೆಂಗಳೂರು : ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇಕಡ 83.88 ಫಲಿತಾಂಶ ದಾಖಲಾಗಿದೆ. ಒಟ್ಟು 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ನಾಲ್ವರು ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ ಪಡೆದಿದ್ದಾರೆ.
ಎಂಟು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇಕಡ 83.88 ಫಲಿತಾಂಶ ದಾಖಲಾಗಿದೆ. ಒಟ್ಟು 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ.
ಎಸ್‌ಎಸ್‌ಎಲ್‌ಸಿಯಲ್ಲಿ ಚಿತ್ರದುರ್ಗ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಶೇಕಡಾ 96.08ರಷ್ಟು ಫಲಿತಾಂಶ ದಾಖಲಾಗಿದೆ. ಎರಡನೇ ಸ್ಥಾನವನ್ನು ಮಂಡ್ಯ ಜಿಲ್ಲೆ ಮತ್ತು ಮೂರನೇ ಸ್ಥಾನವನ್ನು ಹಾಸನ ಜಿಲ್ಲೆ ಪಡೆದಿದೆ. ಈ ಬಾರಿಯೂ ವಿದ್ಯಾರ್ಥಿನಿಯರು ಮೇಲುಗೈ ಪಡೆದಿದ್ದಾರೆ. ನಾಲ್ವರು ವಿದ್ಯಾರ್ಥಿಗಳು ಶೇಕಡ 100 ಫಲಿತಾಂಶ ಪಡೆದಿದ್ದಾರೆ. ಭೂಮಿಕಾ ಪೈ, ಯಶಸ್ ಗೌಡ, ಅನುಮಮಾ ಶ್ರೀಶೈಲ, ಭೀಮನಗೌಡ ಹನುಮಂತಗೌಡ ಬಿರಾದಾರ ಪಾಟೀಲ ಶೇಕಡ 100 ಫಲಿತಾಂಶ ಪಡೆದಿದ್ದಾರೆ.
SSLCಯಲ್ಲಿ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳು
ಭೂಮಿಕಾ ಪೈ- ನ್ಯೂ ಮೆಕಾಲೆ ಶಾಲೆ, ಹೊಸೂರು ರಸ್ತೆ, ಬೆಂಗಳೂರು
ಯಶಸ್ಗೌಡ- ಬಿಜಿಎಸ್ ಶಾಲೆ, ಅಗಲಗುರ್ಕಿ, ಚಿಕ್ಕಬಳ್ಳಾಪುರ ಜಿಲ್ಲೆ
ಅನುಪಮಾ ಶ್ರೀಶೈಲ್ ಹಿರೆಹೋಳಿ- ಶ್ರೀಕುಮಾರೇಶ್ವರ ಶಾಲೆ,ಸವದತ್ತಿ
ಬೀಮನಗೌಡ ಪಾಟೀಲ್-ವಿಜಯಪುರ
ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧ್ಯಕ್ಷ ಆರ್ ರಾಮಚಂದ್ರ, ಪರೀಕ್ಷಾಂಗ ನಿರ್ದೇಶಕ ಎಚ್ ಗೋಪಾಲಕೃಷ್ಣ ಮತ್ತು ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಸಿಂಗ್ ಅವರು ಬೆಂಗಳೂರಿನಲ್ಲಿಂದು ಫಲಿತಾಂಶ ಪ್ರಕಟಿಸಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ಫಲಿತಾಂಶ ಪ್ರಕಟಿಣೆಯಲ್ಲಿ ಭಾಗಿಯಾಗಿಲ್ಲ.
ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು 2023 ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಕೈಗೊಳ್ಳಲಾಗಿದ್ದು ಒಟ್ಟು ರಾಜ್ಯದ 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ರಾಜ್ಯಾದ್ಯಂತ ಒಟ್ಟು 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಬಂದ ಉತ್ತರ ಪತ್ರಿಕೆಗಳನ್ನು ತಿದ್ದಲು 63 ಸಾವಿರ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು.