ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟ: ಈ ಬಾರಿಯು ವಿದ್ಯಾರ್ಥಿನಿಯರೇ ಮೇಲುಗೈ

ಬೆಂಗಳೂರು : 2021-22ನೇ ಸಾಲಿನ  ಹತ್ತನೇ ತರಗತಿಯ ಫಲಿತಾಂಶ ಇಂದು ಪ್ರಕಟವಾಗಿದೆ. ಶೇಕಡಾವಾರು 85.63 ಫಲಿತಾಂಶ ಬಂದಿದೆ. ಇದು ಕಳೆದ 10 ವರ್ಷಗಳಲ್ಲಿನ ದಾಖಲೆಯ ಫಲಿತಾಂಶವಾಗಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ  ಬಿ.ಸಿ. ನಾಗೇಶ್ ಫಲಿತಾಂಶ ಪ್ರಕಟಿಸಿದ್ದು, ಒಟ್ಟು 8,73,884 ವಿದ್ಯಾರ್ಥಿಗಳ ಪೈಕಿ 8,53,436 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಇದರಲ್ಲಿ 7,30,881 ಮಂದಿ ಉತ್ತೀರ್ಣರಾಗಿದ್ದಾರೆ. ಇದರಲ್ಲಿ 40,061 ಮಂದಿ ಗ್ರೇಸ್ ಮಾರ್ಕ್ ಮೂಲಕ ಪಾಸ್ ಆಗಿದ್ದಾರೆ.  ಶೇ 90.29ರಷ್ಟು ಬಾಲಕಿಯರು, ಶೇ. 81.30 ಬಾಲಕರು ಉತ್ತೀರ್ಣರಾಗಿದ್ದಾರೆ.

145 ವಿದ್ಯಾರ್ಥಿಗಳು 100ಕ್ಕೆ 100 ರಷ್ಟು ಅಂಕಗಳಿಸಿದ್ದಾರೆ.  21 ಸರ್ಕಾರಿ ಶಾಲೆ, 8 ಅನುದಾನಿತ ಶಾಲೆ ಹಾಗೂ 116 ಖಾಸಗಿ ಶಾಲೆಗಳ ಮಕ್ಕಳು ಪೂರ್ಣ ಅಂಕ ಪಡೆದಿದ್ದಾರೆ. ಗ್ರಾಮೀಣಾ ಪ್ರದೇಶದ ವಿದ್ಯಾರ್ಥಿಗಳು ಶೇಕಡ 91.32 ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳು ಶೇಕಡ 86.64 ಉತ್ತೀರ್ಣರಾಗಿದ್ದಾರೆ.

ಗ್ರೇಡ್ ಮಾದರಿ: ಇದುವರೆಗೆ ಎಸ್ ಎಸ್ ಎಲ್ ಸಿಯಲ್ಲಿ ಮೊದಲ, ದ್ವಿತೀಯ ಮತ್ತು ತೃತೀಯ ಜಿಲ್ಲೆಗಳೆಂದು ಫಲಿತಾಂಶ ನೀಡಲಾಗುತ್ತಿತ್ತು. ಆದರೆ ಈ ಬಾರಿ ಪ್ರೌಢ ಶಿಕ್ಷಣ ಇಲಾಖೆ ಗ್ರೇಡ್ ಮಾದರಿಯಲ್ಲಿ ಫಲಿತಾಂಶ ನೀಡಿದೆ.

20 ಶಾಲೆಗಳು ಶೂನ್ಯ ಸಂಪಾದನೆ ಮಾಡಿದರೆ 3,920 ಶಾಲೆಗಳು ಶೇ.100 ರಷ್ಟು ಫಲಿತಾಂಶ ದಾಖಲಿಸಿದೆ. ರ‍್ಯಾಂಕ್‌ ಪದ್ದತಿ ಕೈ ಬಿಟ್ಟ ಇಲಾಖೆ ಈ ಬಾರಿ ಗ್ರೇಡ್ ವ್ಯವಸ್ಥೆಯಲ್ಲಿ ಫಲಿತಾಂಶ ಘೋಷಣೆ ಮಾಡಿದೆ. ಬೆಂಗಳೂರು ದಕ್ಷಿಣ ಮತ್ತು ಯಾದಗಿರಿ ಜಿಲ್ಲೆಗೆ ಬಿ ಗ್ರೇಡ್ ಸಿಕ್ಕಿದರೆ ಉಳಿದ ಎಲ್ಲಾ ಜಿಲ್ಲೆಗಳಿಗೆ ಎ ಗ್ರೇಡ್ ಸಿಕ್ಕಿದೆ.

ರಾಜ್ಯದ ಒಟ್ಟು 15,387 ಶಾಲೆಗಳ 8,53,436 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು 8,73,884 ವಿಧ್ಯಾರ್ಥಿಗಳಲ್ಲಿ   7,30,881  ಲಕ್ಷ ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.  3,72,279 ಲಕ್ಷ ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದು, 3,58,602 ಲಕ್ಷ ಗಂಡು ಮಕ್ಕಳು ಉತ್ತೀರ್ಣರಾಗಿದ್ದಾರೆ. 40,061 ಮಕ್ಕಳು ಗ್ರೇಸ್ ಮಾರ್ಕ್ಸ್ ಪಡೆದು ಪಾಸ್ ಆಗಿದ್ದಾರೆ.

ಪೂರಕ ಪರೀಕ್ಷೆ: ಜೂನ್ 27 ರಿಂದ ಜುಲೈ 4 ವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪ್ರತಿ ಪಡೆಯಲು ಮೇ 30ರವರೆಗೆ ಅವಕಾಶವಿದೆ. ಮರು ಎಣಿಕೆ, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು  ಜೂನ್ 6 ಕೊನೆಯ ದಿನಾಂಕವಾಗಿದೆ.

ಫಲಿತಾಂಶ ವೀಕ್ಷಣೆ: ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್ https://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ SMS ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ.

Donate Janashakthi Media

Leave a Reply

Your email address will not be published. Required fields are marked *