ಅ.5ರಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮೂರು ಹಂತಗಳಲ್ಲಿ ಬಿಪಿಎಲ್‌ ಕಾರ್ಡ್‌ ತಿದ್ದುಪಡಿಗೆ ಅವಕಾಶ!

ಬೆಂಗಳೂರು: ಗೃಹಲಕ್ಷ್ಮಿ, ಅನ್ನ ಭಾಗ್ಯ ಸೇರಿ ವಿವಿಧ ಸರ್ಕಾರಿ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ಹಣ ಜಮೆ ಆಗುವಲ್ಲಿ ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ಬಿಪಿಎಲ್ ಕಾರ್ಡ್‌ನಲ್ಲಿ ಫಲಾನುಭವಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಆಹಾರ ಇಲಾಖೆ ಅ.5ರಿಂದ  ಅವಕಾಶ ನೀಡಿದೆ.ಮೂರು 

ಇದನ್ನೂ ಓದಿ:ಬಿಪಿಎಲ್‌ ಕಾರ್ಡ್‌ ವಿತರಣೆ ರದ್ದು: ಅನರ್ಹರ ಪತ್ತೆ ಬಳಿಕ ವಿತರಣೆಗೆ ಆಹಾರ ಇಲಾಖೆ ಕ್ರಮ

ಬೆಂಗಳೂರು ಒನ್‌,ಕರ್ನಾಟಕ ಒನ್‌,ಗ್ರಾಮ ಒನ್‌ ಕೇಂದ್ರಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಬಿಪಿಎಲ್‌ ಕಾರ್ಡ್‌ ತಿದ್ದುಪಡಿ ಮಾಡಿಸಬಹುದಾಗಿದೆ. ತಿದ್ದುಪಡಿಗೆ ಮೂರು ಹಂತಗಳಲ್ಲಿ ವಿವಿಧ ಜಿಲ್ಲೆಗಳಿಗೆ ವೇಳಾಪಟ್ಟಿ ನಿಗದಿಪಡಿಸಲಾಗಿದೆ.

ಮೂರು ಹಂತಗಳಲ್ಲಿ ಅವಕಾಶ:

ಮೊದಲ ಹಂತ: ಅ-5 ರಿಂದ 7ರವರೆಗೆ ಬೆಂಗಳೂರು ನಗರ,ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು

ಎರಡನೇ ಹಂತ: ಅ-8 ರಿಂದ ಅ-10ರ ವರೆಗೆ ಬೆಳಗಾವಿ, ಬಾಗಲಕೋಟೆ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಸೇರಿ ಒಟ್ಟು 15 ಜಿಲ್ಲೆಗಳಲ್ಲಿ ಅವಕಾಶ.

3ನೇ ಹಂತ: ಅ-11 ರಿಂದ ಅ.13ರವರೆಗೆ ಕಲಬುರ್ಗಿ, ಬಳ್ಳಾರಿ,ಬೀದರ್‌, ಚಿಕ್ಕಬಳ್ಳಾಪುರ, ಚಿತ್ರದುರ್ಗ,ದಾವಣಗೆರೆ, ಕೋಲಾರ,ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ,ತುಮಕೂರು, ಯಾದಗಿರಿ, ವಿಜಯನಗರ ಸೇರಿ ಒಟ್ಟು 14 ಜಿಲ್ಲೆಗಳಲ್ಲಿ ಅವಕಾಶ.

ಇದನ್ನೂ ಓದಿ:ಕಾಂಗ್ರೆಸ್ 5 ‘ಗ್ಯಾರಂಟಿ’ ಜಾರಿ: ಯೋಜನೆಗಳ ಲಾಭ ಪಡೆಯೋದು ಹೇಗೆ? ಇಲ್ಲಿದೆ ಸಮಗ್ರ ವಿವರ!

ಕಳೆದ ತಿಂಗಳು ಒಂದೊಂದು ಜಿಲ್ಲೆಯಲ್ಲೂ ಸಮಯ ನಿಗದಿ ಮಾಡಲಾಗಿದೆ. ಈ ತಿಂಗಳು ಎಲ್ಲಾ ಜಿಲ್ಲೆಗಳಲ್ಲೂ ಮೂರು ದಿನ ಬಿಪಿಎಲ್‌ ಕಾರ್ಡ್‌ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

ಏನೇನು ತಿದ್ದುಪಡಿ?

  • ಫಲಾನುಭವಿ ಹೆಸರು ಬದಲಾವಣೆ
  • ಪಡಿತರ ಕೇಂದ್ರ ಬದಲಾವಣೆ
  • ಕಾರ್ಡ್‌ ಸದಸ್ಯರ ಹೆಸರು ರದ್ದು, ಸೇರ್ಪಡೆ
  • ಕಾರ್ಡ್‌ ಮುಖ್ಯಸ್ಥರ ಹೆಸರು ಬದಲಾವಣೆ
  • ಕುಟುಂಬದ ಮುಖ್ಯಸ್ಥರ ಹೆಸರು ಬದಲಾವಣೆ

ವಿಡಿಯೋ ನೋಡಿ:ಐದು ಗ್ಯಾರಂಟಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ #congressguaranteecard

Donate Janashakthi Media

Leave a Reply

Your email address will not be published. Required fields are marked *