ಬೆಂಗಳೂರು: ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ( 84) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಹೊಸಕೋಟೆಯ ಅವರ ನಿವಾಸದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಬಿಜೆಪಿ ವಿರುದ್ಧ ಶೇ. 40 ಪರ್ಸೆಂಟೆಜ್ ಆರೋಪ ಮಾಡಿದ್ದ ಕೆಂಪಣ್ಣ ಗುತ್ತಿಗೆದಾರರ ಪರ ಹೋರಾಟ ಮಾಡಿದ್ದರು.
ಇದನ್ನೂ ಓದಿ: ಪಶ್ಚಿಮ ಬಂಗಾಳದ ಕೆಲವಡೆ ಎದುರಾಗಿರುವ ಪ್ರವಾಹ ಪರಿಸ್ಥಿತಿ ‘ಮಾನವ ನಿರ್ಮಿತ‘ : ಮಮತಾ ಬ್ಯಾನರ್ಜಿ
ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರ ಆರೋಪವು ಆಡಳಿತಾರೂಢ ಬಿಜೆಪಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರದಂತೆ ಸೋಲು ಕಾಣುವಂತೆ ಮಾಡಿತ್ತು ಎಂದರೂ ತಪ್ಪಾಗುವುದಿಲ್ಲ. ರಾಜ್ಯ ಸರ್ಕಾರದ ಎಲ್ಲ ನಾಯಕರು ಕಮೀಷನ್ ದಂಧೆ ಆಸೆಗೆ ಬಿದ್ದು ಆಡಳಿತ ಮಂಕಾಗಿದೆ ಎಂಬುದನ್ನು ಕಾಂಗ್ರೆಸ್ ನಾಯಕರು ಬಿಂಬಿಸಿದ್ದರು. ಇದರ ಬೆನ್ನಲ್ಲಿಯೇ ರಾಜ್ಯದ ಜನತೆಯಲ್ಲಿ ಬಿಜೆಪಿ ಸರ್ಕಾರದ ಆಡಳಿತ ವಿರೋಧಿ ಅಲೆ ಎಬ್ಬಿಸುವಂತೆ ಕಾಂಗ್ರೆಸ್ ತಂತ್ರ ರೂಪಿಸುವಲ್ಲಿ ಯಶಸ್ವಿಯಾಗಿತ್ತು. ಇದಾದ ನಂತರ ಕಾಂಗ್ರೆಸ್‌ನಿಂದ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಪೇ ಸಿಎಂ ಆಭಿಯಾನವನ್ನೂ ಮಾಡಿ, ಬಿಜೆಪಿ ಸೋಲಿಗೆ ಕಾರಣವಗಿತ್ತು.
ಕೆಂಪಣ್ಣನವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ ಧ್ವನಿಯೊಂದನ್ನು ನಾಡು ಇಂದು ಕಳೆದುಕೊಂಡಿದೆ ಎಂದು ಸಂತಾಪದಲ್ಲಿ ತಿಳಿಸಿದ್ದಾರೆ.
ಇದನ್ನೂ ನೋಡಿ: ಸುಗ್ರೀವಾಜ್ಞೆ ಮೂಲಕ ಒಳ ಮೀಸಲಾತಿ ಜಾರಿ ಮಾಡಿ – ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ ಆಗ್ರಹ