ರಾಜ್ಯ ಶಿಕ್ಷಣ ನೀತಿ:ಸಮಿತಿ ರಚಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಬಹಳಷ್ಟು ದಿನಗಳಿಂದ ಚರ್ಚೆಯಾಗುತ್ತಿರುವ ರಾಷ್ಟ್ರೀಯ ಶಿಕ್ಷಣ ನೀತಿಯ ರದ್ದು ವಿಚಾರ ಈಗ ಒಂದು ಹಂತಕ್ಕೆ ಬಂದು ತಲುಪಿದೆ. ರಾಷ್ಟ್ರೀಯ ಶಿಕ್ಷಣ ನೀತಿಯು ಬದಲಾಗಿ ರಾಜ್ಯದಲ್ಲಿ ಹಳೇ ಶಿಕ್ಷಣ ಪದ್ಧತಿಯನ್ನೇ ಮುಂದುವರೆಸಲು ಸರ್ಕಾರ ಕ್ರಮಕೈಗೊಂಡಿದೆ. ಈ ಹಿನ್ನೆಲೆ ಹೊಸ ರಾಜ್ಯ ಶಿಕ್ಷಣ ನೀತಿ ರೂಪಿಸಲು ವಾರದೊಳಗೆ ಸಮಿತಿ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.

ಇದನ್ನೂ ಓದಿ:ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ಎನ್‌ಇಪಿ ರದ್ದು:ಸಿಎಂ ಸಿದ್ದರಾಮಯ್ಯ

ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ಅಗತ್ಯ ಮೂಲಸೌಕರ್ಯ ಕಲ್ಪಿಸದೇ ಎರಡು ವರ್ಷಗಳ ಹಿಂದೆ ಬಿಜೆಪಿ ಸರ್ಕಾರ ತರಾತುರಿಯಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಿತ್ತು. ಅದರಲ್ಲಿ ಸಾಕಷ್ಟು ಲೋಪಗಳಿವೆ. ಹಾಗಾಗಿ, ನಾಗ್ಪುರ ಶಿಕ್ಷಣ ನೀತಿ ರದ್ದು ಮಾಡಿದ್ದೇವೆ. ಹೊಸ ಶಿಕ್ಷಣ ನೀತಿ ಸಿದ್ಧಪಡಿಸುತ್ತಿದ್ದೇವೆ. ಅಲ್ಲಿಯವರೆಗೂ ಹಿಂದಿನ ಹಳೆಯ ಶಿಕ್ಷಣ ಪದ್ಧತಿಯನ್ನೇ ಮುಂದುವರಿಸಲಾಗುವುದು ಎಂದು ಸಭೆಯ ನಂತರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾಹಿತಿ ನೀಡಿದರು.

ಶಾಲಾ ಶಿಕ್ಷಣ, ಉನ್ನತ ಶಿಕ್ಷಣ ಸಚಿವರಿಗೆ ಸಮಿತಿಯ ರೂಪುರೇಷೆ, ಸಂಭವನೀಯ ಅಧ್ಯಕ್ಷರು, ಸದಸ್ಯರ ಪಟ್ಟಿ ನೀಡಲು ಸೂಚಿಸಿದ್ದೇವೆ ಎಂದರು. ವಾರದೊಳಗೆ ಎಲ್ಲ ಪ್ರಕ್ರಿಯೆ ಪೂರ್ಣಗೊಂಡು ಸಮಿತಿ ರಚನೆಯಾಗಲಿದೆ ಎಂದು ಹೇಳಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *