ಎಂಜಿನಿಯರಿಂಗ್ ಶುಲ್ಕ ಶೇ.7.5 ಹೆಚ್ಚಳ: ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: 2026- 27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗವಂತೆ ಎಂಜಿನಿಯರಿಂಗ್ ಕೋರ್ಸ್‌ಗಳ ಶುಲ್ಕವನ್ನು ಶೇ.7.5ರಷ್ಟು ಹೆಚ್ಚಳ ಮಾಡಲು ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಶೇ. 10ರಿಂದ ಶೇ. 15ರವರೆಗೆ ಶುಲ್ಕ ಹೆಚ್ಚಳಕ್ಕೆ ಪ್ರಸ್ತಾಪಿಸಿದ್ದರು. ಆದರೆ, ಸಭೆಯಲ್ಲಿ ಶುಲ್ಕವನ್ನು ಶೇ.7.5ಕ್ಕೆ ಹೆಚ್ಚಿಸಲು ಒಪ್ಪಿಗೆ ನೀಡಲಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶ ಎಸ್‌ಐಆರ್‌: 2 ಕೋಟಿಗೂ ಹೆಚ್ಚು ಹೆಸರುಗಳು ಡಿಲಿಟ್!

ಈ ನಿರ್ಧಾರದಿಂದ ಟೈಪ್-1 ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸಿಇಟಿ ಸೀಟುಗಳ ಶುಲ್ಕ 81800 ರೂ.ಗಳಿಂದ 87935 ರೂ. ಗೆ, ಟೈಪ್-2 ಕಾಲೇಜುಗಳ ಶುಲ್ಕ 91000 ರೂ. ಗಳಿಂದ 97,825 ರೂ.ಗೆ ಏರಿಸಲಾಗಿದೆ. ವಿಶ್ವವಿದ್ಯಾಲಯ ಶುಲ್ಕ, ನೋಂದಣಿ ಶುಲ್ಕ ಸೇರಿದಂತೆ ಇತರ ಪ್ರಕ್ರಿಯೆಗಳ ಶುಲ್ಕವನ್ನು ಇದು ಒಳಗೊಂಡಿಲ್ಲ.

ಇದನ್ನೂ ನೋಡಿ: ಎಸ್ ಐಆರ್: ವಿಶೇಷ ಸಮಗ್ರ ಹೊರತಳ್ಳುವಿಕೆ: ಮುಗಿಯದ ವ್ಯಥೆ? Janashakthi Media

Donate Janashakthi Media

Leave a Reply

Your email address will not be published. Required fields are marked *