ಬೆಂಗಳೂರು: ಬೆಳಗಾವಿ ಜಿಲ್ಲೆಯ ಜೈನಮುನಿ ನಂದಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣ ಸೂಕ್ಷ್ಮವಾಗಿರುವುದರಿಂದ, ಸಾರ್ವಜನಿಕರ ಕೋರಿಕೆಯ ಮೇರೆಗೆ ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ಹಸ್ತಾಂತರಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಬುಧುವಾರ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ವಿಚಾರವನ್ನು ಘೋಷಣೆ ಮಾಡಿದರು. ಜೈನ ಮುನಿಯನ್ನು ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಲಾಗಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆದರೆ ಹತ್ಯೆ ಪ್ರಕರಣದಲ್ಲಿ ಬೇರೆ ಆಯಾಮ ಇದೆ. ಈ ಹಿನ್ನೆಲೆಯಲ್ಲಿ ಇದನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿತ್ತು.
ಇದನ್ನೂ ಓದಿ:ಸೌಜನ್ಯ ಹತ್ಯೆ-ಅತ್ಯಾಚಾರ ಪ್ರಕರಣ | ಮರು ತನಿಖೆಗಾಗಿ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ
ಏನಿದು ಘಟನೆ? ಕಳೆದ ಕೆಲ ದಿನಗಳ ಹಿಂದೆ ಅಂದರೆ ಜು.06 ರಂದು ಬೆಳ್ಳಿಗೆಯಿಂದ ನಂದಿ ಕಾಮಕುಮಾರ ಸ್ವಾಮಿಗಳು ಆಶ್ರಮದಲ್ಲಿ ಕಾಣಸಿಗಲಿಲ್ಲ. ಆಗ ಅತಂಕಗೊಂಡ ಭಕ್ತರು ಎಲ್ಲ ಕಡೆ ಹುಡುಕಿದರೂ ಮುನಿಗಳು ಪತ್ತೆಯಾಗಿರಲಿಲ್ಲ. ಹೀಗಾಗಿ ಚಿಕ್ಕೋಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಪೊಲೀಸರು ತನಿಖೆ ಆರಂಭಿಸಿದ್ದರು. ಶುಕ್ರವಾಋ ರಾತ್ರಿ ಪೊಲೀಸರು ಶಂಕಿತ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಆರೋಪಿಗಳು ರಾಯಬಾಗ ತಾಲೂಕಿನ ಕಟಕಬಾವಿ ಗ್ರಾಮದ ಹೊರವಲಯದ ಬೋರ್‌ವೆಲ್‌ನಲ್ಲಿ ಜೈನ ಮುನಿಗಳ ಶವ ಎಸೆದಿರುವುದಾಗಿ ಮಾಹಿತಿ ನೀಡಿದ್ದರು. ಹೀಗಾಗಿ ಪೊಲೀಸರು ರಾತ್ರಿಯಿಂದಲೇ ಕಾರ್ಯಚರಣೆ ಆರಂಭಿಸಿದ್ದರು.ಜೈನ ಮುನಿಗಳ ದೇಹದ ತುಂಡುಗಳನ್ನು ಬಟ್ಟೆಯಲ್ಲಿ ಕಟ್ಟಿ ತೆರೆದ ಕೊಳವೆ ಬಾವಿಯಲ್ಲಿ ಆರೋಪಿಗಳು ಎಸೆದಿದ್ದರು. 20 ಅಡಿ ಆಳದಲ್ಲಿ ಶವದ ಭಾಗಗಳು ಪತ್ತೆಯಾಗಿತ್ತು.
ಆರಂಭದಲ್ಲಿ ಹಣಕಾಸಿನ ವ್ಯವಹಾರಕ್ಕಾಗಿ ಜೈನ ಮುನಿಗಳ ಕೊಲೆ ಮಾಡಲಾಗಿದೆ ಎನ್ನಲಾಗಿತ್ತು. ಕೊಲೆ ಆರೋಪದಲ್ಲಿ ಹಿರೇಕೋಡಿ ಗ್ರಾಮದ ನಾರಾಯಣ ಮಾಳಿ ಮತ್ತು ಹುಸೇನ್ ಡಾಲಾಯತ ಎಂಬುವವರನ್ನು ಬಂಧಿಸಲಾಗಿದೆ. ಕೊಲೆ ಆರೋಪಿ ಮುನಿಗಳಿಂದ ಹಣ ಪಡೆದಿದ್ದ. ಹಣ ಮರಳಿಸುವಂತೆ ಮುನಿಗಳು ಕೇಳಿದ್ದರಿಂದ ಕೊಲೆ ಮಾಡಲಾಗಿದೆ ಪ್ರಾಥಮಿಕ ತನಿಖೆಯ ನಂತರ ಪೊಲೀಸರು ಹೇಳಿದ್ದರು.