ಬೆಂಗಳೂರು: 9 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೆಪ್ಟೆಂಬರ್ 18ರಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಸಕಾಲ ಯೋಜನೆಯ ಹೆಚ್ಚುವರಿ ಯೋಜನಾ ನಿರ್ದೇಶಕಿ ಪಲ್ಲವಿ ಆಕೃತಿ ಅವರನ್ನು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯ ವಿಶೇಷ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕ ಗಿರೀಶ್ ಆರ್. ಅವರನ್ನು ರಾಷ್ಟ್ರೀಯ ತೋಟಗಾರಿಕೆ ಯೋಜನೆ ಹಾಗೂ ತೋಟಗಾರಿಕೆ ಇಲಾಖೆಯ ನಿರ್ದೇಶಕ ಹಾಗೂ ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಗಂಗೂಬಾಯಿ ರಮೇಶ್ ಮಣಕರ್ ಅವರನ್ನು ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿಯ ಒಂಬುಡ್ಸ್ ಮನ್‍ರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
ಕರ್ನಾಟಕ ಪಬ್ಲಿಕ್ ಲ್ಯಾಂಡ್ಸ್ ಕಾರ್ಪೋರೇಷನ್‍ನ ವ್ಯವಸ್ಥಾಪಕ ನಿರ್ದೇಶಕ ವಸಂತ ಕುಮಾರ್ ಪಿ. ಅವರನ್ನು ಕೃಷಿ ಇಲಾಖೆಯ ಜಂಟಿ ಕಾರ್ಯದರ್ಶಿ, ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ರಮ್ಯಾ ಎಸ್. ಅವರನ್ನು ರಾಜ್ಯ ವಿದ್ಯುತ್ ಕಾರ್ಖಾನೆ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಶಿವಪ್ರಸಾದ್ ಪಿ.ಆರ್. ಅವರನ್ನು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಜಂಟಿ ಕಾರ್ಯದರ್ಶಿ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯ ವಿಶೇಷ ಅಧಿಕಾರಿಯಾಗಿ ಪೂವಿತಾ ಎಸ್. ಅವರನ್ನು ರಾಜ್ಯ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಜಂಟಿ ವ್ಯವಸ್ಥಾಪಕ ನಿರ್ದೇಶಕಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಅಲ್ಲದೇ, ಎಚ್.ಆರ್.ಎಂ.ಎಸ್ 2.0 ಹಣಕಾಸು ಇಲಾಖೆಯ ಉಪ ಯೋಜನಾ ನಿರ್ದೇಶಕಿಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.
ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಲಿಂಗಮೂರ್ತಿ ಜಿ. ಅವರನ್ನು ಕರ್ನಾಟಕ ಪಬ್ಲಿಕ್ ಲ್ಯಾಂಡ್ಸ್ ಕಾರ್ಪೋರೇಷನ್‍ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ರಾಜ್ಯ ವಿತ್ತೀಯ ಕಾರ್ಯನೀತಿ ಸಮಸ್ಥೆಯ ಹೆಚ್ಚುವರಿ ನಿರ್ದೇಶಕ ರಂಗಪ್ಪ ಎಸ್. ಅವರನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಇದನ್ನೂ ನೋಡಿ: ಬಿಹಾರದಲ್ಲಿ ಸರ್ (SIR) ಸೃಷ್ಟಿಸಿದ ಸುಳ್ಳು ಕಥೆಗಳು – ವಿಶ್ಲೇಷಣೆ : ಗುರುರಾಜ ದೇಸಾಯಿ Janashakthi Media
