ಬೆಂಗಳೂರು| ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ರಾಜ್ಯ ಸರ್ಕಾರ ಕಡಿವಾಣ

ಬೆಂಗಳೂರು: ಸಾಲ ವಸೂಲಿ ನೆಪದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲಗಾರರನ್ನು ಇನ್ನಿಲ್ಲದಂತೆ ಬಹುತೇಕ ಕಿರುಕುಳಗಳನ್ನು ನೀಡುತ್ತಿದೆ. ಸಾಕಷ್ಟು ಜನರ ಪ್ರಾಣಕ್ಕೆ ಕಂಟಕವಾಗಿವೆ. ಜೀವ ಹಿಂಡುವ ಇಂತಹ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಬೆಂಗಳೂರು

ಸರ್ಕಾರವು ಕಾನೂನು ತಿದ್ದುಪಡಿಗೆ ತುರ್ತಾಗಿ ಸುಗ್ರೀವಾಜ್ಞೆ ರೂಪಿಸಲು ಮುಂದಾಗಿದೆ. ಈ ನಡುವೆ ಪೊಲೀಸ್ ಇಲಾಖೆ ಕೂಡ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಮೂಗುದಾರ ಹಾಕುವ ನಿಟ್ಟಿನಲ್ಲಿ ನಿನ್ನೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ.

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾದ ಹಿನ್ನೆಲೆ, ಮೈಕ್ರೋ ಫೈನಾನ್ಸ್ ಗಳಿಗೆ ಮೂಗುದಾರ ಹಾಕಲು ಸಿದ್ಧತೆ ಕೂಡ ಚುರುಕುಗೊಂಡಿದೆ. ಕಟ್ಟುನಿಟ್ಟಿನ ನಿಯಮಾವಳಿ ರೂಪಿಸಲು ಹಿರಿಯ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದ್ದಾರೆ. ಡಿಜಿಪಿ ಅಲೋಕ್ ಮೋಹನ್ ನೇತೃತ್ವದಲ್ಲಿ ನಿನ್ನೆ (ಜನವರಿ 27) ಹಿರಿಯ ಅಧಿಕಾರಿಗಳು ಸಭೆ ನಡೆಸಿದ್ದಾರೆ.

ಇದನ್ನೂ ಓದಿ: ಶೋಷಿತ ವರ್ಗದ ಜನರ ಹಕ್ಕುಗಳ ರಕ್ಷಣೆಗೆ ಸಂವಿಧಾನದಿಂದ ಮಾತ್ರ ಸಾದ್ಯ: ಪೀರು ರಾಠೋಡ

ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ತಡೆಗಟ್ಟುವ ಕುರಿತು ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದು, ಮುಖ್ಯವಾಗಿ ಒತ್ತಾಯ ಪೂರ್ವಕವಾಗಿ ಯಾವುದೇ ಸಾಲ ಕೇಳುವಂತಿಲ್ಲ, ಸಾಲ ವಸೂಲಿ ನೆಪದಲ್ಲಿ ಮಾನಹಾನಿ, ವೈಯಕ್ತಿಕ ತೇಜೋವಧೆ ಮಾಡುವಂತಿಲ್ಲ. ಸಾರ್ವಜನಿಕವಾಗಿ ಗಲಾಟೆ ಮಾಡುವುದು, ಮನೆ ಮೇಲೆ ಪೇಯಿಂಟ್ ನಲ್ಲಿ ಬರೆಯುವಂತಿಲ್ಲ ಮಾಡುವುಂತಿಲ್ಲ. ಒಂದು ವೇಳೆ ಈ ರೀತಿಯ ಕೃತ್ಯಗಳು ನಡೆದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.

ಮೈಕ್ರೋ ಫೈನಾನ್ಸ್ ಕಂಪನಿಗಳ ಲೈಸೆನ್ಸ್ ರದ್ದು

ಲೈಸೆನ್ಸ್ ಇಲ್ಲದೆ ಮೈಕ್ರೋ ಫೈನಾನ್ಸ್ ಹಣ ನೀಡಿದರೆ ತಕ್ಷಣ ಕ್ರಮ ಕೈಗೊಳ್ಳುವುದು. ನಿಯಮಗಳನ್ನು ಉಲ್ಲಂಘನೆ ಮಾಡುವ ಮೈಕ್ರೋ ಫೈನಾನ್ಸ್ ಕಂಪನಿಗಳ ಲೈಸೆನ್ಸ್ ರದ್ದು ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದು. ಇದೇ ವಾರ ಅಧಿಕೃತವಾಗಿ ಕೆಲವು ನಿಯಮಗಳನ್ನು ಜಾರಿಗೆ ತರಲು ಪೊಲೀಸರು ಸಿದ್ದತೆ ಮಾಡಿಕೊಂಡಿದ್ದಾರೆ.

ಬೆಂಗಳೂರು ನಗರದಲ್ಲೂ ಮೈಕ್ರೋ ಫೈನಾನ್ಸ್ ಕಾಟ ಹೆಚ್ಚಾಗಿದ್ದು, ನಗರದಲ್ಲಿ ಎಚ್ಚರಿಕೆ ವಹಿಸಲು ಕಮೀಷನರ್ ದಯಾನಂದ್ ಸೂಚನೆ ನೀಡಿದ್ದಾರೆ. ಯಾವುದೇ ಸಾವು ನೋವು ಸಂಭವಿಸುವುದಕ್ಕೂ ಮುನ್ನ ಎಚ್ಚೆತ್ತುಕೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.

ಅಂತಹ ದೂರುಗಳು ಬಂದರೆ ನಿರ್ಲಕ್ಷ್ಯ ಮಾಡದೆ ಕ್ರಮ ಜರುಗಿಸುವುದು. ಮೈಕ್ರೋ ಫೈನಾನ್ಸ್ ದೂರುಗಳು ಬಂದಲ್ಲಿ ಖುದ್ದು ಇನ್ಸ್‌ಪೆಕ್ಟರ್ ಜಾಗೃತೆ ವಹಿಸಿ ಕ್ರಮಕೈಗೊಳ್ಳಬೇಕು, ನಿಯಮಾವಳಿ ಜಾರಿಗೆ ಬರುವ‌ವರೆಗೂ ಎಚ್ಚರಿಕೆ ವಹಿಸುವಂತೆ ಕಮೀಷನರ್ ಸೂಚನೆ ನೀಡಿದ್ದಾರೆ.

ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಅಗತ್ಯ ನಿಯಮಾವಳಿ ರೂಪಿಸುವಂತೆ ಸೂಚಿಸಿದ್ದ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದ ಹಿನ್ನೆಲೆ. ನಿನ್ನೆ ಹಿರಿಯ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದ್ದಾರೆ.

ಇದನ್ನೂ ನೋಡಿ: ಮೋದಿ ಸರ್ಕಾರದ ಪ್ರಕಾರ ಭಾರತದಲ್ಲಿ 3-7 ಕೋಟಿ ಬಡವರಿದ್ದಾರೆ ಅಷ್ಟೇ! ಹೌದಾ ಭಾರತೀಯರೇ?? Janashakthi Media

Donate Janashakthi Media

Leave a Reply

Your email address will not be published. Required fields are marked *