ಪ್ರತಿಭಟನೆ ಹತ್ತಿಕ್ಕುತ್ತಿರುವ ರಾಜ್ಯ ಸರ್ಕಾರ – ಹೋರಾಟಗಾರರ ಮೇಲಿನ ಕೇಸ್ ಹಿಂಪಡೆಯಲು ಆಗ್ರಹ

ಬೆಂಗಳೂರು: ಕನ್ನಡ ಹೋರಾಟಗಾರರು, ರೈತರು, ಅಂಗನವಾಡಿ ಕಾರ್ಯಕರ್ತೆಯರು, ಅತಿಥಿ ಉಪನ್ಯಾಸಕರ ಹೋರಾಟವನ್ನು ಹತ್ತಿಕ್ಕಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ ಎಂದು ರೈತ ಮುಖಂಡರು, ಕನ್ನಡಪರ ಹೋರಾಟಗಾರರು, ಶಿಕ್ಷಣ ತಜ್ಞರು ಒಳಗೊಂಡ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಆರೋಪಿಸಿದ್ದು, ಹೋರಾಟಗಾರರ ಮೇಲಿನ ಕೇಸ್ ಹಿಂಪಡೆಯ ಬೇಕು ಎಂದು ಆಗ್ರಹಿಸಿದ್ದಾದೆ.

ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕೆ ಬರುವ ಮುನ್ನ ಪ್ರತಿಭಟನೆಗಳನ್ನು ಪ್ರಜಾಪ್ರಭುತ್ವದ ಪ್ರಮುಖ ಭಾಗ ಎಂದು ಹೇಳುತ್ತಿದ್ದರು, ಆದರೆ ಈಗ ಅವರ ಸರ್ಕಾರ ಅದನ್ನು ಹತ್ತಿಕ್ಕುತ್ತಿದೆ ಎಂದು ಸಮಿತಿ ಹೇಳಿದೆ.

ಇದನ್ನೂ ಓದಿ: ‘ಸೇವೆ ಖಾಯಂಗೊಳಿಸಿ’ | ಬೆಂಗಳೂರಿನಲ್ಲಿ ಅತಿಥಿ ಉಪನ್ಯಾಸಕರ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ

ಸಮಿತಿ ಮುಖಂಡ ಕುರುಬೂರು ಶಾಂತಕುಮಾರ್ ಮಾತನಾಡಿ, ಭಾಷೆ, ನೆಲ, ಜಲಕ್ಕಾಗಿ ಹೋರಾಟ ನಡೆಸುವವರ ಹೋರಾಟವನ್ನು ಹತ್ತಿಕ್ಕುತ್ತಿರುವುದು ಜನವಿರೋಧಿ ಕ್ರಮವಾಗಿದೆ. “ಕನ್ನಡ ಬಳಕೆಯ ಅನುಷ್ಠಾನದ ಹೊಣೆ ಹೊತ್ತಿರುವ ಸರಕಾರಿ ಸಂಸ್ಥೆಗಳು ನಿಷ್ಕ್ರಿಯವಾಗಿವೆ. ಆ ಸಂಸ್ಥೆಗಳು ದಕ್ಷತೆಯಿಂದ ಕೆಲಸ ಮಾಡುವುದನ್ನು ಖಾತ್ರಿಪಡಿಸುವ ಬದಲು ಸರ್ಕಾರವು ಪ್ರತಿಭಟನೆಗಳನ್ನು ಹತ್ತಿಕ್ಕುತ್ತಿದೆ” ಎಂದು ಅವರು ಹೇಳಿದ್ದಾರೆ.

ಬಂಧಿತ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆ ಮಾಡಲು ಹಾಗೂ ಅವರ ಮೇಲೆ ದಾಖಲಿಸಿರುವ ಸುಳ್ಳು ಪ್ರಕರಣಗಳನ್ನು ವಾಪಸ್ ಪಡೆಯಲು ಸಿಎಂ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ ಶಾಂತಕುಮಾರ್, ಎಲ್ಲ ಸಂಘಟನೆಗಳ ಮುಖಂಡರ ಸಭೆ ಕರೆದು ಚರ್ಚಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿಡಿಯೊ ನೋಡಿ: “ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣ : ರಾಜಕೀಯ ಲಾಭದ ಹೋರಾಟ ನಿಲ್ಲಿಸಿ, ಆತನಿಗೆ ಮೊದಲು ಜಾಮೀನು ಕೊಡಿಸಿ”

Donate Janashakthi Media

Leave a Reply

Your email address will not be published. Required fields are marked *