ಬೆಂಗಳೂರು: ವಿದೇಶ ಪ್ರವಾಸದಿಂದ ವಾಪಸ್ ಆದ ರಾಹುಲ್ ಗಾಂಧಿ ದೆಹಲಿಯಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದೂ, ಈ ನಡುವೆ ರಾಜ್ಯದ ಕಾಂಗ್ರೆಸ್ ಹಿರಿಯ ನಾಯಕರ ಜೊತೆಗೂ ರಾಹುಲ್ ಒನ್ ಟು ಒನ್ ಮಾತುಕತೆ ನಡೆಸಿ, ಸಿದ್ದರಾಮಯ್ಯ ರ ಅನಿವಾರ್ಯತೆ ಕಾಂಗ್ರೆಸ್ ಪಕ್ಷಕ್ಕೆ ಹೇಗಿದೆ ಎಂಬ ವಿವರಣೆಯನ್ನು ನೀಡಿದ್ದಾರೆ ಎಂಬ ಮಾಹಿತಿ ಇದೆ. ಅನಿವಾರ್ಯತೆ
ರಾಹುಲ್ ಗಾಂಧಿ ಅವರನ್ನು ಹಿರಿಯ ಕಾಂಗ್ರೆಸ್ ಮುಖಂಡ ಬಿ ಕೆ ಹರಿಪ್ರಸಾದ್ ಭೇಟಿ ಆಗಿದ್ದರು. ಅಲ್ಲದೆ, ಸಚಿವ ಪ್ರಿಯಾಂಕ್ ಖರ್ಗೆ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಅಲ್ಲದೆ, ರಾಜ್ಯದ ರಾಜಕಾರಣದ ಬಗ್ಗೆ ಪೂರ್ಣ ಪ್ರಮಾಣದಲ್ಲಿ ಅರಿವು ಹೊಂದಿರುವ ಕೆಲವು ನಾಯಕರು ರಾಹುಲ್ ಗಾಂಧಿಗೆ ವಸ್ತು ಸ್ಥಿತಿಯನ್ನು ವಿವರಿಸಿದ್ದಾರೆ. ಅಷ್ಟೇ ಅಲ್ಲದೆ, ತಮ್ಮದೇ ಆದ ಮೂಲಗಳಿಂದ ರಾಹುಲ್ ಗಾಂಧಿ ಮಾಹಿತಿ ಸಂಗ್ರಹ ಮಾಡಿದ್ದಾರೆ. ಈ ಎಲ್ಲವನ್ನು ಆಧರಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆಗೆ ಮಾತುಕತೆ ನಡೆಸಿ ಅಂತಿಮ ತೀರ್ಮಾನಕ್ಕೆ ಬರುವ ಸಾಧ್ಯತೆ ಇದೆ. ಅನಿವಾರ್ಯತೆ
ಇದನ್ನೂ ಓದಿ: SIR | ಸಾಧಕ – ಬಾಧಕಗಳ ಕುರಿತು ಸಂವಾದ ಕಾರ್ಯಕ್ರಮ | ನವೆಂಬರ್ 27
ಸಿದ್ದರಾಮಯ್ಯ ಅವರು ಈ ಹಿಂದೆ ಜೆಡಿಎಸ್ ಪಕ್ಷದಲ್ಲಿದ್ದರು. ಜೆಡಿಎಸ್ ನಲ್ಲಿ ಅವರು ಪ್ರಭಾವಿ ನಾಯಕರಾಗಿದ್ದರು. ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷದಲ್ಲಿ ಇದ್ದ ಸಂದರ್ಭದಲ್ಲಿ ಜೆಡಿಎಸ್ ಪಕ್ಷವೂ ಹೆಚ್ಚಿನ ಸಂಖ್ಯೆಯ ಶಾಸಕರ ಬಲವನ್ನು ಹೊಂದಿತ್ತು. ಕೇವಲ ಹಳೆ ಮೈಸೂರು ಭಾಗ ಮಾತ್ರವಲ್ಲ, ಉತ್ತರ ಕರ್ನಾಟಕ ಭಾಗದಲ್ಲೂ ಜೆಡಿಎಸ್ ತಮ್ಮ ಬಲವನ್ನು ವಿಸ್ತರಿಸಿತ್ತು. ಅನಿವಾರ್ಯತೆ
ಧರ್ಮಸಿಂಗ್ ರಾಜ್ಯದ ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಆಗಿದ್ದರು. ಈ ಸಂದರ್ಭದಲ್ಲಿ ಜೆಡಿಎಸ್ ಬಲ 69 ಇತ್ತು. ಆದರೆ ಜೆಡಿಎಸ್ ಪಕ್ಷವನ್ನು ಸಿದ್ದರಾಮಯ್ಯ ತೊರೆದ ಬಳಿಕ ಆ ಪಕ್ಷದ ಸ್ಥಿತಿಯೂ ಹೀನಾಯವಾಗಿದೆ. ಕಳೆದ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಬಿಜೆಪಿಯ ಬಿ ಟೀಂ ಎಂದು ಬಿಂಬಿಸುವಲ್ಲಿ ಸಿದ್ದರಾಮಯ್ಯ ಅವರು ಯಶಸ್ವಿಯಾಗಿದ್ದರು. ಅದರ ನೇರ ಪರಿಣಾಮವಾಗಿ ಕೇವಲ 19 ಸ್ಥಾನಗಳಲ್ಲಿ ಜೆಡಿಎಸ್ ಗೆಲುವು ಸಾಧಿಸಿತ್ತು. ಇದೀಗ 18 ಕ್ಕೆ ಇಳಿದಿದೆ.
ಹೀಗಾಗಿ ಸಿದ್ದರಾಮಯ್ಯ ಅವರ ನಾಯಕತ್ವ ಕಾಂಗ್ರೆಸ್‌ಗೆ ಅಗತ್ಯವಿದೆ. ಹಿಂದುಳಿದ ವರ್ಗ, ದಲಿತರು ಹಾಗೂ ಅಲ್ಪಸಂಖ್ಯಾತರ ಮತಗಳನ್ನು ಬಹುತೇಕ ಪ್ರಮಾಣದಲ್ಲಿ ಕಾಂಗ್ರೆಸ್ ಗೆ ಕ್ರೋಢೀಕರಿಸುವ ಶಕ್ತಿ ಸಿದ್ದರಾಮಯ್ಯ ಅವರಿಗೆ ಇದೆ ಎಂಬ ಅಭಿಪ್ರಾಯ ಹೈಕಮಾಂಡ್ ನಾಯಕರಲ್ಲಿ ಇದೆ. ಹೀಗಾಗಿ ನಾಯಕತ್ವ ಬದಲಾವಣೆಗೆ ಕೈಹಾಕುವ ಸಾಧ್ಯತೆ ಬಹುತೇಕ ಕಡಿಮೆಯಾಗಿದೆ.
ಇದನ್ನೂ ನೋಡಿ: ನೇರಪ್ರಸಾರ: ರೈತ – ಕಾರ್ಮಿಕ ಕಾಯ್ದೆಗಳ ವಿರುದ್ಧ – ಬೆಂಗಳೂರು ಚಲೋ | JCTU | ಸಂಯುಕ್ತ ಹೋರಾಟ ಕರ್ನಾಟಕ
