ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಗಂಭೀರವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹದಿನಾಲ್ಕು ದಿನ ಲಾಕ್‌ಡೌನ್ ಮಾದರಿಯಲ್ಲಿ ಕರ್ಫ್ಯೂ ಜಾರಿ ಮಾಡಿದ್ದರ ಬಗ್ಗೆ ರಾಜ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರು ನೆನ್ನೆ ಮಧ್ಯಾಹ್ನ ಪತ್ರಿಕಾಗೋಷ್ಟಿಯನ್ನು ನಡೆಸಿ ಸಂಪುಟ ಸಭೆಯ ತೀರ್ಮಾನಗಳನ್ನು ವಿವರಿಸಿದರು.
ರಾಜ್ಯದಲ್ಲಿ ಯಾವ ಸೇವೆಗಳು ಇರುತ್ತವೆ ಮತ್ತು ಯಾವ ಸೇವೆಗಳು ಇರುವುದಿಲ್ಲ ಎಂದು ತಿಳಿಸಿದ್ದರು.
ಇದನ್ನು ಓದಿ: ಕರ್ನಾಟಕ ಲಾಕ್‌ಡೌನ್ : ಹೊಸಮಾರ್ಗಸೂಚಿಯಲ್ಲಿ ಏನಿದೆ? ಯಾವುದಕ್ಕೆಲ್ಲಾ ಅನುಮತಿ??
ಆದರೆ, ನೆನ್ನೆ ಸಂಜೆಯ ಹೊತ್ತಿಗೆ ಕೋವಿಡ್ ನಿರ್ವಹಣೆಗಾಗಿ ರಾಜ್ಯದಲ್ಲಿರುವ ಎಲ್ಲಾ ಸರಕಾರಿ ನೌಕರರ ಒಂದು ತಿಂಗಳ ವೇತನವನ್ನು ಕಡಿತಗೊಳ್ಳಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸುದ್ದಿಗಳು ಹರಿದಾಡಿದವು.
ನೆನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಾಗಲಿ ಅಥವಾ ನಂತರ ಮಾಧ್ಯಮಗಳೊಂದಿಗೆ ತೀರ್ಮಾನಗಳನ್ನು ಹಂಚಿಕೊಂಡ ಮುಖ್ಯಮಂತ್ರಿಗಳು ಸರಕಾರಿ ನೌಕರರ ವೇತನ ಕಡಿತ ಬಗ್ಗೆ ಪ್ರಸ್ತಾಪಿಸಲಿಲ್ಲ.
ಇದನ್ನು ಓದಿ: ಗುಂಪಿನ ಸದಸ್ಯ ಮಾಡಿದ ಪೋಸ್ಟ್‌ಗೆ ವಾಟ್ಸಾಪ್ ಗುಂಪಿನ ನಿರ್ವಾಹಕನನ್ನು ಹೊಣೆಗಾರರನ್ನಾಗಿ ಮಾಡಲಾಗದು: ಬಾಂಬೆ ಹೈಕೋರ್ಟ್
ಸರಕಾರಿ ನೌಕರರ ವೇತನ ಕಡಿತದ ಬಗ್ಗೆ ಹರಿದಾಡುತ್ತಿರುವ ಸುದ್ದಿ ಬರೀ ವದಂತಿಯಾಗಿದೆ. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಅವರು ಹೇಳಿಕೆ ಬಿಡುಗಡೆ ಮಾಡಿದ್ದು ʻʻರಾಜ್ಯ ಸರಕಾರಗಳು ಈ ರೀತಿಯಾಗಿ ತೀರ್ಮಾನಗಳನ್ನು ತೆಗೆದುಕೊಳ್ಳಬೇಕಾದ ಸಂದರ್ಭದಲ್ಲಿ ಸಂಪ್ರದಾಯದಂತೆ ರಾಜ್ಯದ ಸರಕಾರಿ ನೌಕರರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಕರೆದು ಚರ್ಚಿಸಿ ತೀರ್ಮಾನಗಳನ್ನು ಈ ಹಿಂದೆ ತೆಗೆದುಕೊಂಡಿರುತ್ತದೆ. ಆದರೆ ಈ ಕ್ಷಣದವರೆಗೂ ಆ ರೀತಿಯ ಯಾವುದೇ ಚರ್ಚೆಗಳನ್ನು ಸರಕಾರವು ಸಂಘದ ಜೊತೆ ಮಾಡಿರುವುದಿಲ್ಲ ಎಂದು ವಿನಂತಿಸಿಕೊಂಡಿದ್ದಾರೆ.
ಹಾಗಾಗಿ ಸರಕಾರಿ ನೌಕರರ ಒಂದು ತಿಂಗಳ ವೇತನ ಕಡಿತದ ಬಗ್ಗೆ ಅಧಿಕೃತವಾಗಿ ಆದೇಶ ಇಲ್ಲಿದಿರುವುದರಿಂದ ಇದು ಸತ್ಯಕ್ಕೆ ದೂರವಾದದ್ದು ಎಂದು ತಿಳಿಸಿದ್ದಾರೆ.