ಮೈಸೂರು: ನೆನ್ನೆ ಸೋಮವಾರ ರಾತ್ರಿ ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯವನ್ನು ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ ಉದಯಗಿರಿ ಪೊಲೀಸ್ ಠಾಣೆ ಮುಂಭಾಗ ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆಯಲ್ಲಿ ಹಲವು ಪೊಲೀಸರು ಗಾಯಗೊಂಡಿದ್ದಾರೆ.
ಸುರೇಶ್ ಎಂಬಾತ ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹರಿಬಿಟ್ಟದ್ದ, ಉದಯಗಿರಿ ಪೊಲೀಸರು ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಆ ಪೋಸ್ಟ್ ಒಂದು ಸಮುದಾಯದ ಯುವಕರ ಆಕ್ರೋಶಕ್ಕೆ ಕಾರಣವಾಗಿತ್ತು.
ಇದನ್ನೂ ಓದಿ: ಆನೇಕಲ್‌ನಲ್ಲಿ ಸಿಲಿಂಡರ್ ಬ್ಲಾಸ್ಟ್ – ಓರ್ವ ಗಂಭೀರ
ಆಕ್ರೋಶಿತ ಗುಂಪು ಉದಯಗಿರಿ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿ, ಪೋಸ್ಟ್ ಹಾಕಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಪೋಸ್ಟ್‌ನಲ್ಲಿ ಏನಿತ್ತು ?
ಬಂಧಿತ ಸುರೇಶ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಒಂದನ್ನು ಹಂಚಿಕೊಂಡಿದ್ದು, ಅದರಲ್ಲಿ ರಾಹುಲ್ ಗಾಂಧಿ, ಅಖಿಲೇಶ್ ಯಾದವ್ ಹಾಗೂ ಅರವಿಂದ್ ಕೇಜ್ರಿವಾಲ್ ಅವರನ್ನು ಅರೆನಗ್ನ ರೀತಿಯಲ್ಲಿ ಚಿತ್ರಿಸಿ, ಅವರ ತೊಡೆ ಮೇಲೆ ವ್ಯಕ್ತಿಯೊಬ್ಬ ನಮಾಝ್ ಮಾಡುತ್ತಿರುವಂತೆ ತೋರಿಸಲಾಗಿತ್ತು. ಜೊತೆಗೆ ಪ್ರವಾದಿ ಮುಹಮ್ಮದ್ ಅವರ ಕುರಿತು ಅವಹೇಳನಕಾರಿ ಸಾಲುಗಳನ್ನು ಬರೆದಿದ್ದರು.
ಇದನ್ನೂ ನೋಡಿ: ಕೇಂದ್ರ, ರಾಜ್ಯ ಸರಕಾರಗಳ ವಿರುದ್ಧ ರೈತ ಕೂಲಿಕಾರರ ಪ್ರತಿಭಟನೆ Janashakthi Media