ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಿ, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಿ :ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ ತೀವ್ರವಾದಂತಹ ಮನವರಿಕೆ ಮಾಡುವ ಮೂಲಕ ಕಾನೂನು ಹೋರಾಟ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಕಾವೇರಿ ನದಿ ನೀರು ಹಂಚಿಕೆ ವಿವಾದ: ಪ್ರತ್ಯೇಕ ಪೀಠ ರಚನೆಗೆ ಒಪ್ಪಿದ ಸುಪ್ರೀಂ ಕೋರ್ಟ್‌

ಈ ಕುರಿತು ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಅವರು, ರಾಜ್ಯ ಸರ್ಕಾರ ಕಾವೇರಿ ವಿಷಯದಲ್ಲಿ ಮೊದಲಿನಿಂದಲೂ ಎಡವುತ್ತ ಬಂದಿದೆ. ಈಗಾಗಲೇ ಸಿಡಬ್ಲುಎಂಎ ಆದೇಶದಂತೆ 10 ಸಾವಿರ ಕ್ಯೂಸೆಕ್ಸ್‌ ನಂತೆ ಸುಮಾರು 15 ಟಿಎಂಸಿ ನೀರು  ಬಿಟ್ಟಿದೆ. ಆದರೂ, ಅದರ ವಿರುದ್ಧ ಯಾವುದೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಿಲ್ಲ.

ಈಗ ಸಿಡಬ್ಲುಎಂಎ ಸೂಚನೆ ಮೇರೆಗೆ 5000 ಕ್ಯೂಸೆಕ್ಸ್‌ ನೀರು ಬಿಡಲು ಪ್ರಾರಂಭ ಮಾಡಿದ ಮೇಲೆ ಡಿಸಿಎಂ ಅವರು ಕಾನೂನು ತಜ್ಞರ ಜೊತೆ ಚರ್ಚೆ ಮಾಡುವುದರಲ್ಲಿ ಯಾವ ಅರ್ಥ ಇದೆ ಎಂದು ಪ್ರಶ್ನೆ ಮಾಡಿದ್ದಾರೆ. ಹಿಂದಿನ ಆದೇಶದ ವಿರುದ್ಧ ಈಗಾಗಲೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕಾಗಿತ್ತು. ಅದು ಕೂಡ ಮಾಡಿಲ್ಲ. ಈಗ ನೀರು ಬಿಡುತ್ತಿರುವುದರಿಂದ ಕಾನೂನು ಹೋರಾಟಕ್ಕೆ ಅರ್ಥವಿಲ್ಲ. ಕೂಡಲೇ ನೀರು ನಿಲ್ಲಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ ತೀವ್ರವಾದಂತಹ ಮನವರಿಕೆ ಮಾಡುವ ಮೂಲಕ ಕಾನೂನು ಹೋರಾಟ ಮಾಡಬೇಕೆಂದು ಆಗ್ರಹ ಮಾಡುತ್ತೇನೆ.

ಕಾಂಗ್ರೆಸ್‌ ಸರ್ಕಾರ ಕರ್ನಾಟಕ ರಾಜ್ಯದ ಕುಡಿಯುವ ನೀರು ಹಾಗೂ ರೈತರ ಹಿತಾಸಕ್ತಿ ಕಾಪಾಡಲು ವಿಫಲವಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *