ರಾಯಚೂರು: ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಏಪ್ರಿಲ್ 26 ಶನಿವಾರ ಸಂಜೆ ಗುಡುಗು ಸಹಿತ ಭಾರೀ ಮಳೆಯೊಂದಿಗೆ ಬೀಸಿದ ಬಿರುಗಾಳಿಯಿಂದ ಬಸವ ಮೋಟಾರ್ಸ್ ಕಾರ್ ಶೋರೂಂನ ಶೆಡ್ ಕಿತ್ತು ಹೋಗಿ ಭಾರೀ ಅನಾಹುತ ಸಂಭವಿಸಿದೆ.
ಈ ಘಟನೆಯಲ್ಲಿ ಕಾರ್ ಶೋರೂಂನ ಶೆಡ್ ಸಂಪೂರ್ಣವಾಗಿ ಹಾರಿಹೋಗಿದ್ದು, ಕಬ್ಬಿಣದ ಕಂಬಗಳು ಮತ್ತು ಶೆಡ್‌ನ ಭಾಗಗಳು ಕಾರುಗಳ ಮೇಲೆ ಬಿದ್ದು ಹಾನಿಯಾಗಿದೆ.
ಶೋರೂಂನಲ್ಲಿದ್ದ ಕಾರುಗಳಿಗೆ ಮಾತ್ರವೇ ಅಲ್ಲ, ಶೆಡ್‌ನೊಳಗೆ ಇದ್ದ ಮಿಷನ್‌ಗಳಿಗೂ ಗಂಭೀರ ಹಾನಿಯಾಗಿದೆ. ಈ ಘಟನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಭದ್ರತಾ ವೈಫಲ್ಯದ ಹೊಣೆ ಹೊತ್ತು ಮೋದಿ, ಶಾ ರಾಜೀನಾಮೆ ನೀಡಲಿ – ಬಿಕೆ ಇಮ್ತಿಯಾಜ್
ಘಟನೆಯು ಲಿಂಗಸುಗೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಬಿರುಗಾಳಿಯ ತೀವ್ರತೆಗೆ ಶೋರೂಂನ ಚಾವಣಿ ತಡೆದುಕೊಳ್ಳಲಾಗದೇ ಕುಸಿದು ಬಿದ್ದಿದೆ. ಸ್ಥಳೀಯರು ಈ ಘಟನೆಯಿಂದ ಬೆಚ್ಚಿಬಿದ್ದಿದ್ದಾರೆ.
ಪ್ರಕೃತಿಯ ಈ ಆಕಸ್ಮಿಕ ರೌದ್ರಾವತಾರದಿಂದ ಉಂಟಾದ ನಷ್ಟದ ಬಗ್ಗೆ ವಿವರವಾದ ತನಿಖೆ ನಡೆಯುತ್ತಿದ್ದು, ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆಯನ್ನು ಈ ನಡೆದಿದೆ.
ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.
ಇದನ್ನೂ ನೋಡಿ: ಪಹಲ್‍ಗಾಂಮ್ ಹತ್ಯಾಕಾಂಡ|ಭರತ್ ಭೂಷಣ್ ಅಂತಿಮ ದರ್ಶನ ಪಡೆದ ಸಿಎಂ Janashakthi Media