ಮಂಗಳೂರು | ಕರ್ನಾಟಕದ ಮೊದಲ ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘ ಉದ್ಘಾಟನೆ

ಮಂಗಳೂರು: ಕರ್ನಾಟಕದ ಇತಿಹಾಸದಲ್ಲೆ ಬೀದಿಬದಿ ವ್ಯಾಪಾರಿಗಳ ಮೊದಲ ಸಹಕಾರ ಸಂಘವಾದ, ‘ದಕ್ಷಿಣ ಕನ್ನಡ ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘ (ನಿ)‘ದ ಉದ್ಘಾಟನೆ ನಗರದ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ಬುಧವಾರ ಉದ್ಘಾಟನೆಗೊಂಡಿದೆ. ಬೀದಿಬದಿ ವ್ಯಾಪಾರಿಗಳ ಆರ್ಥಿಕ ಹಿತರಕ್ಷಣೆ ಮತ್ತು ಸ್ವಾವಲಂಬಿ ಬದುಕಿಗಾಗಿ ಇದನ್ನು ರಚಿಸಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಬಿ.ಕೆ. ಇಮ್ತಿಯಾಝ್ ಅವರು ಹೇಳಿದರು.

ಪ್ರಾಸ್ತಾವಿಕ ಮಾತುಗಳನ್ನಾಡಿದ ಬಿ.ಕೆ. ಇಮ್ತಿಯಾಝ್, “ಬೀದಿಬದಿ ವ್ಯಾಪಾರಿಗಳ ರಕ್ತ ಹೀರುತ್ತಿರುವ ಬಡ್ಡಿ ದಂಧೆಕೋರರಿಂದ ಮುಕ್ತಿಗೊಳಿಸಲಿಕ್ಕಾಗಿ ಮತ್ತು ಬೀದಿ ವ್ಯಾಪಾರಿಗಳನ್ನು ಗುರಿಯಾಗಿಸಿಕೊಂಡು ಪಂಗನಾಮ ಹಾಕುತ್ತಿದ್ದ ಬ್ಲೇಡ್ ಕಂಪೆನಿಗಳಿಂದ ಬೀದಿ ವ್ಯಾಪಾರಿಗಳನ್ನು ರಕ್ಷಿಸಿ ಆರ್ಥಿಕ ಸ್ವಾವಲಂಬಿಗಳಾಗಿ ಮಾಡಿ ಅವರನ್ನು ಪ್ರಗತಿಶೀಲರನ್ನಾಗಿ ಮಾಡುವ ನಿಟ್ಟಿನಲ್ಲಿ ಸಹಕಾರ ಸಂಘವನ್ನು ರಚಿಸಲಾಗಿದೆ” ಎಂದು ಹೇಳಿದರು. ಮಂಗಳೂರು

ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ ಆಹ್ವಾನ ವಿಚಾರ | ಕೊನೆಗೂ ತೀರ್ಮಾನ ಕೈಗೊಂಡ ಕಾಂಗ್ರೆಸ್ ಹೇಳಿದ್ದೇನು?

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು, “ಬೀದಿಬದಿ ವ್ಯಾಪಾರಿಗಳು ಸ್ವಾವಲಂಬಿಗಳಾಗಳು ಕೇಂದ್ರ ಮತ್ತು ರಾಜ್ಯ ಸರಕಾರ ಅನೇಕ ಕಾರ್ಯಕ್ರಮ ಹಮ್ಮಿಕೊಂಡಿದೆ. ಮಂಗಳೂರು ಮಹಾ ನಗರ ಪಾಲಿಕೆ ಬೀದಿಬದಿ ವ್ಯಾಪಾರಿಗಳಿಗಾಗಿ ನಗರದ ಹೃದಯ ಭಾಗದಲ್ಲಿ ಬೃಹತ್ ಬೀದಿ ವ್ಯಾಪಾರ ವಲಯ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ನಗರದ ಎಲ್ಲಾ 60 ವಾರ್ಡ್ ಗಳಲ್ಲಿ ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಿ ಪ್ರತಿ ವಾರ್ಡ್‌ಗಳಲ್ಲಿ ನಗರ ಪಾಲಿಕೆ ವ್ಯಾಪಾರ ವಲಯ ನಿರ್ಮಿಸಿ ಕೊಡಲಿದೆ” ಎಂದು ಭರವಸೆ ನೀಡಿದರು.

ಮಂಗಳೂರು, ಕರ್ನಾಟಕ,ಮೊದಲ, ಬೀದಿಬದಿ ವ್ಯಾಪಾರಸ್ಥ, ಸಹಕಾರ ಸಂಘ, ಉದ್ಘಾಟನೆ,Mangalore, Karnataka, First, Street Trader, Co-operative Society, Inauguration,

ಪಾಲಿಕೆಯ ವಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ ಅವರು ಸಹಕಾರ ಸಂಘದ ಸದಸ್ಯರಿಗೆ ಷೇರು ಪ್ರಮಾಣ ಪತ್ರ ವಿತರಿಸಿದರು. ನಂತರ ಮಾತನಾಡಿದ ಅವರು ಬೀದಿಬದಿ ವ್ಯಾಪಾರಿಗಳ ಸಹಕಾರ ಸಂಘ ಮಾಡಿರುವುದು ಒಂದು ಐತಿಹಾಸಿಕ ಹೆಜ್ಜೆ ಎಂದು ಶ್ಲಾಘಸಿದರು. ನಗರದ ಅಭಿವೃದ್ಧಿಗೆ ಬೀದಿ ವ್ಯಾಪಾರಿಗಳು ಕೈಜೋಡಿಸಬೇಕೆಂದು ಎಂದು ಅವರು ಕರೆ ನೀಡಿದರು.

ಮುಖ್ಯ ಅತಿಥಿಯಾಗಿದ್ದ ಪದ್ಮಶ್ರೀ ಹಾಜಬ್ಬ ಹರೇಕಳ ಮಾತನಾಡುತ್ತಾ, “ನಾನು ಸ್ವತಃ ಬೀದಿ ವ್ಯಾಪಾರಿಯಾಗಿ ಅವರ ಹೊಟ್ಟೆಪಾಡಿನ ಕಷ್ಟಗಳು ನನಗೆ ಚೆನ್ನಾಗಿ ತಿಳಿದಿದೆ. ನಾನು ಇಂದು ಪ್ರಧಾನಿ, ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿರಬಹುದು. ಆದರೆ ನನ್ನ ಕಷ್ಟದ ದಿನಗಳ ಬಗ್ಗೆ ಇನ್ನು ನೆನಪಿದೆ. ಬೀದಿವ್ಯಾಪಾರಿಗಳು ಸ್ವಾಭಿಮಾನವನ್ನು ಎಂದೂ ಬಿಟ್ಟು ಕೊಡುವವರಲ್ಲ” ಎಂದರು.

ಇದನ್ನೂ ಓದಿ: ಉತ್ತರ ಪ್ರದೇಶ | ಸಾರಿಗೆ ಕಚೇರಿಯೊಳಗೆ 40 ಉದ್ಯೋಗಿಗಳು ಇದ್ದಾಗಲೇ ಬೀಗ ಜಡಿದ ನಗರ ಸಭೆ!

ಕಾರ್ಮಿಕ ಮುಖಂಡ ಸುನಿಲ್ ಕುಮಾರ್ ಬಜಾಲ್, ಭಗವತಿ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರಾದ ಬಿ.ಎಂ. ಮಾಧವ, ಪರಿವರ್ತನ ಗ್ರಾಮೀಣ ಸೊಸೈಟಿಯ ನಿರ್ದೇಶಕ ಡಿ ಕೃಷ್ಣಾನಂದ, ಚಿಂತಕಿ ಡಾ. ರೀಟಾ ನೋರೋನ್ಹ, ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಸಾಮರಸ್ಯ ಮಂಗಳೂರು ಇದರ ಅಧ್ಯಕ್ಷೆ ಮಂಜುಳಾ ನಾಯಕ್, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಕೃಷ್ಣಪ್ಪ ಸಾಲಿಯಾನ್, ಸಂಘದ ಉಪಾಧ್ಯಕ್ಷ ಹರೀಶ್ ಪೂಜಾರಿ ಶುಭ ಹಾರೈಸಿ ಮಾತನಾಡಿದರು. ಸಿಐಟಿಯು ಅಧ್ಯಕ್ಷರೂ ನಾಗುರಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾದ ಜೆ. ಬಾಲಕೃಷ್ಣ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಅಲ್ಲದೆ, ವೇದಿಯಲ್ಲಿ ಯುವ ವಕೀಲರಾದ ಚರಣ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತರಾದ ಬಾವ ಪದರಂಗಿ, ಗ್ಲೋಬಲ್ ಮಾರ್ಕೆಟ್ ವರ್ತಕರ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಫೈರೋಜ್, ಕಾರ್ಮಿಕ ಮುಖಂಡ ಸುಕುಮಾರ್ ತೊಕ್ಕೊಟ್ಟು, ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯ ಉಡುಪಿ ಜಿಲ್ಲಾ ಸಂಚಾಲಕ ಕವಿರಾಜ್ ಉಡುಪಿ, ಮಾಜಿ ಪಾಲಿಕೆ ಸದಸ್ಯ ದಯಾನಂದ ಶೆಟ್ಟಿ, ಬೀದಿಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಮುಸ್ತಫಾ, ಮುಖಂಡರಾದ ಮೊಹಮ್ಮದ್ ಆಸೀಫ್, ಶ್ರೀಧರ ಭಂಡಾರಿ, ಮೇರಿ ಡಿಸೋಜಾ, ಮೇಬಲ್ ಡಿಸೋಜಾ, ನೌಶಾದ್ ಉಳ್ಳಾಲ ಉಪಸ್ಥಿತರಿದ್ದರು.

ಅಲ್ಲದೆ, ಬೀದಿಬದಿ ವ್ಯಾಪಾರಿ ಸಂಘದ ಮುಖಂಡರುಗಳಾದ ಇಸ್ಮಾಯಿಲ್ ಉಳ್ಳಾಲ ಅಬ್ದುಲ್ ರಹಿಮಾನ್, ಹಸನ್ ಕುದ್ರೋಳಿ, ಆದಂ ಬಜಾಲ್, ಶಂಕರ್ ಸಿ.ಎಸ್., ಶ್ರೀನಿವಾಸ್ ಕಾವೂರು ಕಾಜ ಮೊಯಿದಿನ್, ಹನೀಫ್ ಸುರತ್ಕಲ್, ಪಿ.ಜಿ. ರಫೀಕ್ ಬೆಂಗರೆ, ಗಜಾನಂದ ರೈ, ಜಿತೇಂದ್ರ, ರೂಪೇಶ್ ನಾಯಕ್, ಹಂಝ ಪಡುಬಿದ್ರೆ, ನವಾಜ್, ಆನಂದ, ಅನಿಲ್ ಕಂದಕ್, ನಜೀರ್ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಂಘದ ನಿರ್ದೇಶಕರಾದ ಪ್ರವೀಣ್ ಕುಮಾರ್ ಅವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರೆ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕುಮಾರಿ ಶ್ರೇಯ ವಂದಿಸಿದರು.

ವಿಡಿಯೊ ನೋಡಿ: ಹೆಂಚುಗಳು ನಿರ್ಮಾಣವಾಗುವುದು ಹೇಗೆ? ಅದರ ಹಿಂದಿರುವ ಕಾರ್ಮಿಕರ ಶ್ರಮ ಎಂತದ್ದು? ಈ ವಿಡಿಯೋ ನೋಡಿ Janashakthi Media

Donate Janashakthi Media

Leave a Reply

Your email address will not be published. Required fields are marked *