ಹಿಟ್ ಅಂಡ್ ರನ್ ಕಾನೂನು ವಿರೋಧಿಸಿ ಲಾರಿ ಮಾಲೀಕರ ಸಂಘ ಮುಷ್ಕರ

ಬೆಂಗಳೂರು : ಕೇಂದ್ರ ಸರ್ಕಾರ ಹಿಟ್ ಆಯಂಡ್ ರನ್ ಪ್ರಕರಣಗಳಲ್ಲಿ ಲಾರಿ ಚಾಲಕರಿಗೆ ಕಠಿಣ ಶಿಕ್ಷೆ ವಿಧಿಸುವ ನಿಯಮ ಜಾರಿ ಮಾಡಬಾರದು ಎಂಬದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆಡರೇಷನ್‌ ಕರ್ನಾಟಕ ಲಾರಿ ಮಾಲೀಕರ ಸಂಘದಿಂದ ಬುಧವಾರ ದಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ. ಲಾರಿ

ಕೇಂದ್ರದ ಹಿಟ್ ಆ್ಯಂಡ್ ರನ್ ಕಾನೂನು ವಿರೋಧಿಸಿ ಮತ್ತು ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಕ್ಷಿಣ ಭಾರತದ ಲಾರಿ ಮಾಲೀಕರ ಸಂಘಗಳು ಮುಷ್ಕರಕ್ಕೆ ಕರೆಕೊಟ್ಟಿವೆ. ಕರ್ನಾಟಕ ಲಾರಿ ಮಾಲೀಕರ ಸಂಘದಿಂದಲೂ ಮಷ್ಕರಕ್ಕೆ ಬೆಂಬಲ ಸಿಕ್ಕಿದೆ. ಇತ್ತ ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟ್ ಸಂಘ ಮುಷ್ಕರಕ್ಕೆ ಬೆಂಬಲ ನೀಡಿಲ್ಲ. ಇನ್ನು ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಹಿಟ್ ಅ್ಯಂಡ್ ರನ್ ಪ್ರಕರಣಗಳಿಗೆ ಕಠಿಣ ಕಾನೂನುಗಳ ವಿರುದ್ಧ ಪ್ರತಿಭಟಿಸಲು ಮುಷ್ಕರಕ್ಕೆ ಕರೆ ನೀಡಲಾಗಿದೆ. ಲಾರಿ

ಇದನ್ನು ಓದಿ : ಮುಸ್ಲಿಂ ಮಹಿಳೆಯರ ಬಗ್ಗೆ ಅಶ್ಲೀಲ ಹೇಳಿಕೆ | ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!

ಹೊಸ ಕಾನೂನು ಪ್ರಕಾರ, ರಸ್ತೆಯಲ್ಲಿ ಚಲಿಸುವಾಗ ಲಾರಿಗಳಿಗೆ ಯಾರಾದರೂ ಬಂದು ಅಕಸ್ಮಾತಾಗಿ ಡಿಕ್ಕಿ ಹೊಡೆದರೆ, ಹಾಗೂ ನಮ್ಮ ಚಾಲಕರು ವಾಹನದಲ್ಲಿ ಏನಾದರೂ ತೊಂದರೆ ಉಂಟಾಗಿ ಎದುರಿನ ವಾಹನಕ್ಕೆ ಡಿಕ್ಕಿ ಹೊಡೆದು ಅದರಲ್ಲಿದ್ದ ಪ್ರಯಾಣಿಕರು ಮೃತಪಟ್ಟರೆ ಲಾರಿ ಚಾಲಕರಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ 7 ಲಕ್ಷ ರೂ.ವರೆಗೆ ದಂಡ ಪಾವತಿಸಬೇಕಾದ ಹಿನ್ನೆಲೆ, ಕಾನೂನು ಹಿಂಪಡೆಯುವಂತೆ ಆಗ್ರಹಿಸಿ ಮುಷ್ಕರ ಕೈಗೊಳ್ಳಲಾಗುತ್ತಿದೆ. ಅತ್ಯಗತ್ಯ ಸೇವೆಗಳನ್ನ ಹೊರತುಪಡಿಸಿ ಕೆಲ ಸೇವೆಗಳು ವಿಳಂಭವಾಗುವ ಸಾಧ್ಯತೆ ಇದೆ. ಲಾರಿ

ಇದನ್ನು ನೋಡಿ : ಉದ್ಯೋಗ ಖಾತ್ರಿ ಕಾರ್ಮಿಕರಿಗೆ ಆಧಾರ್ ಆಧಾರಿತ ವೇತನ : ಮೋದಿ ಸರ್ಕಾರದ ಕ್ರೂರ ಉಡುಗೊರೆ Janashakthi Media

Donate Janashakthi Media

Leave a Reply

Your email address will not be published. Required fields are marked *