ಮುಷ್ಕರದ ಎಚ್ಚರಿಕೆ:ಕರ್ನಾಟಕ ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟದ ಜೊತೆ ಚರ್ಚೆ-ರಾಮಲಿಂಗಾರೆಡ್ಡಿ

ಬೆಂಗಳೂರು: ಶಕ್ತಿ ಯೋಜನೆಯಡಿಯಲ್ಲಿ ರಾಜ್ಯದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ಖಾಸಗಿ ಬಸ್‌ಗಳು ಮತ್ತು ಆಟೋಗಳಿಗೆ ಪ್ರಯಾಣಿಕರ ಕೊರತೆ ಉಂಟಾಗಿದ್ದು, ನಷ್ಟ ಎದುರಿಸುವಂತಾಗಿದೆ. ಹೀಗಾಗಿ, ಕರ್ನಾಟಕ ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟದ ನೇತೃತ್ವದಲ್ಲಿ ಜುಲೈ 27ರಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದ್ದು, ಇದರ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೋಮವಾರ ಸಾರಿಗೆ ಇಲಾಖೆ ಕಚೇರಿಯಲ್ಲಿ ಒಕ್ಕೂಟದ ಜನಪ್ರತಿನಿಧಿಗಳೊಂದಿಗೆ ಸಭೆ ಕರೆದಿದ್ದಾರೆ.

ಶಾಂತಿನಗರದ ಸಾರಿಗೆ ಇಲಾಖೆ ಕಚೇರಿಯಲ್ಲಿ ಸೋಮವಾರ ಬೆಳಗ್ಗೆ 11 ಗಂಟೆಗೆ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಆರ್‌ಟಿಒ ಕಮಿಷನರ್, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ:ಲಖಿಂಪುರದಲ್ಲಿ ರೈತರ ಹತ್ಯೆ ಖಂಡಿಸಿ ಕಾಂಗ್ರೆಸ್‌ ಮೌನ ಪ್ರತಿಭಟನೆ

ಜು. 27ರಂದು ಬೆಂಗಳೂರು ಬಂದ್‌ಗೆ ಕರ್ನಾಟಕ ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟದ ನೇತೃತ್ವದಲ್ಲಿ ಖಾಸಗಿ ಬಸ್‌ಗಳು, ಕ್ಯಾಬ್‌ಗಳು, ಆಟೋ ಚಾಲಕರ ಸಂಘಟನೆಗಳು ಕರೆ ನೀಡಿದ್ದು, ಹೀಗಾಗಿ ನಗರದಲ್ಲಿ ಸಾರಿಗೆ ಸೇವೆಗೆ ತೊಂದರೆ ಉಂಟಾಗುವ ದೃಷ್ಟಿಯಿಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸೋಮವಾರ ಸಾರಿಗೆ ಇಲಾಖೆ ಕಚೇರಿಯಲ್ಲಿ ಒಕ್ಕೂಟದ ಪ್ರತಿನಿಧಿಗಳೊಂದಿಗೆ ಸಭೆ ಕರೆದಿದ್ದಾರೆ.

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಶಕ್ತಿ ಯೋಜನೆಯನ್ನು ಜಾರಿಗೊಳಿಸಿದಾಗಿನಿಂದ ತಮ್ಮ ಆದಾಯಕ್ಕೆ ತೀವ್ರ ಹೊಡೆತ ಬಿದ್ದಿದೆ ಎಂದು ಖಾಸಗಿ ಬಸ್ ಮಾಲೀಕರು, ಆಟೋ ಚಾಲಕರ ಒಕ್ಕೂಟ ಆರೋಪಿಸಿದೆ. ಫೆಡರೇಶನ್‌ನ ಪ್ರಮುಖ ಬೇಡಿಕೆಗಳಲ್ಲಿ ಒಂದಾದ, ಖಾಸಗಿ ಬಸ್‌ಗಳ ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯವನ್ನು ಸರ್ಕಾರ ಪಾವತಿಸಬೇಕು. ರಾಜ್ಯ ಸರ್ಕಾರವು ಕೆಎಸ್ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಮತ್ತು ಬಿಎಂಟಿಸಿ ನಿಗಮಗಳಿಗೆ ‘ಶೂನ್ಯ ಟಿಕೆಟ್’ ಆಧಾರದ ಮೇಲೆ ಹೇಗೆ ಮರುಪಾವತಿ ಮಾಡುತ್ತಿದೆಯೋ ಅದೇ ರೀತಿ ನಮಗೂ ಪಾವತಿ ಮಾಡಬೇಕು. ಒಂದು ವೇಳೆ ಸರ್ಕಾರಕ್ಕೆ ಇದನ್ನು ಪಾವತಿಸಲು ಸಾಧ್ಯವಾಗದಿದ್ದರೆ, ರಸ್ತೆ ತೆರಿಗೆ ಪಾವತಿಯಿಂದ ಸಂಪೂರ್ಣ ವಿನಾಯಿತಿ ನೀಡಬೇಕು ಎಂದು ಖಾಸಗಿ ಬಸ್ ನಿರ್ವಾಹಕರು ಒತ್ತಾಯಿಸಿದ್ದಾರೆ.

ಶಕ್ತಿ ಯೋಜನೆಯಿಂದಾಗಿ ಸಂಕಷ್ಟಕ್ಕೆ ತುತ್ತಾಗಿರುವ ಆಟೋ ಚಾಲಕರಿಗೆ ಮಾಸಿಕ 10,000 ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ವೈಟ್ ಬೋರ್ಡ್ ಬೈಕ್ ಟ್ಯಾಕ್ಸಿಗಳ ಮೇಲೆ ಸಂಪೂರ್ಣ ನಿಷೇಧ ಹೇರಬೇಕೆಂಬುದು ಆಟೋ ಒಕ್ಕೂಟಗಳ ಮತ್ತೊಂದು ಪ್ರಮುಖ ಬೇಡಿಕೆಯಾಗಿದೆ. ಇದಲ್ಲದೆ, ವಾಣಿಜ್ಯ ಸರಕು ವಾಹನಗಳು ಮತ್ತು ಕ್ಯಾಬ್‌ಗಳ ಮೇಲಿನ ಜೀವಮಾನದ ತೆರಿಗೆ ಹೆಚ್ಚಳದ ವಿರುದ್ಧ ಫೆಡರೇಶನ್‌ನ ಸದಸ್ಯರು ಪ್ರತಿಭಟನೆ ನಡೆಸುವ ನಿರೀಕ್ಷೆಯಿದೆ.

ಸಾರಿಗೆ ಇಲಾಖೆಯು ಸಭೆಗಾಗಿ ಖಾಸಗಿ ಟ್ರಾವೆಲ್ ಆಪರೇಟರ್‌ಗಳ 35 ಸಂಘಗಳ ಪ್ರತಿನಿಧಿಗಳನ್ನು ಆಹ್ವಾನಿಸಲಾಗಿದೆ.

Donate Janashakthi Media

Leave a Reply

Your email address will not be published. Required fields are marked *