ಹಾವೇರಿ| ವಿಶ್ವವಿದ್ಯಾಲಯ ಮುಚ್ಚುವ ತೀರ್ಮಾನ ರದ್ದುಪಡಿಸಲು ಹೋರಾಟ ಸಮಿತಿ ಆಗ್ರಹ

ಹಾವೇರಿ: ಕಳೆದ ಎರಡು ವರ್ಷಗಳ ಹಿಂದೆ ಆರಂಭಿಸಿದ ಹಾವೇರಿ ವಿಶ್ವ ವಿದ್ಯಾಲಯವನ್ನು ಮುಚ್ಚಲು ಪ್ರಸ್ತುತ ರಾಜ್ಯ ಸರಕಾರದ ಸಚಿವ ಸಂಪುಟ ಉಪಸಮಿತಿಯ ತೀರ್ಮಾನವನ್ನು ರದ್ದುಪಡಿಸಿ, ಯಥಾ ಸ್ಥಿತಿಯಲ್ಲಿ ವಿಶ್ವ ವಿದ್ಯಾಲಯವನ್ನು ಉಳಿಸಿ ಅಭಿವೃದ್ಧಿಪಡಿಸಲು ಒತ್ತಾಯಿಸಿ ಶಾಸಕರಾದ ಬಸವರಾಜ ಶಿವಣ್ಣ ರಿಗೆ ಹೋರಾಟ ಸಮಿತಿ ಸದಸ್ಯರು ಮನವಿ ಸಲ್ಲಿಸಿದರು. ಮುಚ್ಚುವ

ನಗರದ ಶಾಸಕರ ಗೃಹ ಕಛೇರಿಯಲ್ಲಿ ಶನಿವಾರ ಹಾವೇರಿ ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿ ಸದಸ್ಯರ ಮನವಿ ಸಲ್ಲಿಸಿ, ಯಾವುದೇ ಅನುದಾನ ಬರದಿರುವ ಸಂದರ್ಭದಲ್ಲಿಯೂ ವಿಶ್ವ ವಿದ್ಯಾಲಯವು ಕಾರ್ಯನಿರ್ವಹಿಸಿಕೊಂಡು ಬರುತ್ತಿದೆ. ಅಗತ್ಯ ಅನುದಾನ ನೀಡಿ  ಬಲಪಡಿಸುವ ಬದಲು ವಿಶ್ವವಿದ್ಯಾಲಯವನ್ನು ಮುಚ್ಚುವುದು ಸರಿಯಲ್ಲ. ಹಾಗಾಗಿ ರಾಜ್ಯ ಸರಕಾರ ಈ ವಿಶ್ವ ವಿದ್ಯಾಲಯ ಮುಚ್ಚುವ ತೀರ್ಮಾನ ರದ್ದುಪಡಿಸಿ, ವಿ.ವಿ ಅಭಿವೃದ್ಧಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದರು.

ಶಾಸಕರಾದ ಬಸವರಾಜ ಶಿವಣ್ಣ ರ ಮನವಿ ಸ್ವೀಕರಿಸಿ ಮಾತನಾಡಿ, ಹಾವೇರಿ ವಿ.ವಿ ಉಳಿಸಲು ಸರಕಾರದ ಮಟ್ಟದಲ್ಲಿ ಅಗತ್ಯ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ: ಎನ್‌ಇಪಿ ಜಾರಿ ಮಾಡಿದರೆ ನಾವು 2000 ವರ್ಷ ಹಿಂದಕ್ಕೆ ಹೋಗುತ್ತೇವೆ: ಸಿಎಂ ಎಂ.ಕೆ.ಸ್ಟಾಲಿನ್‌

ನಂತರ ಹಾವೇರಿ ನಗರಸಭೆ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ರಾ. ಮಾಳಗಿ, ಉಪಾಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಸಾತಣ್ಣವರ, ನಗರಸಭೆ ಮಾಜಿ ಅಧ್ಯಕ್ಷರೂ ಹಾಗೂ ಸದಸ್ಯರಾದ ಶ್ರೀ ಸಂಜೀವ ನೀರಲಗಿ ಅವರಿಗೆ ಹಾವೇರಿ ವಿಶ್ವವಿದ್ಯಾಲಯ ಉಳಿಸುವ ಭಾಗವಾಗಿ ನಗರ ಸಭೆಯಿಂದ ಠರಾವು ಪಾಸ್ ಮಾಡಲು ವಿನಂತಿಸಲಾಯ್ತು. ಇದಕ್ಕೆ ಸೂಕ್ತವಾಗಿ ಸ್ಪಂದಿಸಿದ ಅವರು ಠರಾವ್ ಪಾಸು ಮಾಡಲಾಗುವುದು ಎಂದರಲ್ಲದೇ, ಹಾವೇರಿ ವಿಶ್ವ ವಿದ್ಯಾಲಯದ ಉಳಿವಿಗಾಗಿ ನಡೆಯುವ ಹೋರಾಟಕ್ಕೆ ಕೈಜೋಡಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ಸಂಚಾಲಕರು ಹಾಗೂ ಸದಸ್ಯರಾದ ಬಸವರಾಜ ಪೂಜಾರ, ಸತೀಶ ಕುಲಕರ್ಣಿ, ಪರಿಮಳ ಜೈನ, ಸತೀಶ ಎಂ.ಬಿ, ನೇತ್ರಾ ಅಂಗಡಿ, ರೇಣುಕಾ ಗುಡಿಮನಿ, ಜುಬೇದಾ ನಾಯಕ್, ಬಸವರಾಜ ಎಸ್, ಉಡಚಪ್ಪ ಮಾಳಗಿ, ಫೃಥ್ವಿರಾಜ ಬೆಟಗೇರಿ, ಎಂ. ಆಂಜನೇಯ, ರಾಜೇಂದ್ರ ಹೆಗಡೆ, ಮಾಲತೇಶ ಕರ್ಜಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇದನ್ನೂ ನೋಡಿ: ಉಳಿಮೆ ಮಾಡುತ್ತಿದ್ದ ಭೂಮಿಯಲ್ಲಿ ಗುಂಡಿ ತೋಡಿದ ಅರಣ್ಯ ಇಲಾಖೆ : ಗುಂಡಿ ಮುಚ್ಚಿ ಆಕ್ರೋಶ ವ್ಯಕ್ತ ಪಡಿಸಿದ ರೈತರು

Donate Janashakthi Media

Leave a Reply

Your email address will not be published. Required fields are marked *