ಪಾಲಿ ಜಲಪಾತದಲ್ಲಿ ಸಿಲುಕಿದ್ದ ಕರ್ನಾಟಕದ 50 ಪ್ರವಾಸಿಗರ ರಕ್ಷಣೆ

ಗೋವಾ :  ಗೋವಾ ಪಾಲಿ ಜಲಪಾತ ವೀಕ್ಷಣೆಗಾಗಿ ಹೋಗಿದ್ದ ಕರ್ನಾಟಕದ ಸುಮಾರು 50 ಮಂದಿ ಪ್ರವಾಸಿಗರು ಸೇರಿದಂತೆ ಗೋವಾ ಮತ್ತು ಮಹಾರಾಷ್ಟ್ರದ 150 ಜನರನ್ನು ಅರಣ್ಯ ಇಲಾಖೆ, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಣೆ ಮಾಡಿದ್ದಾರೆ.

ಮಹಾರಾಷ್ಟ್ರ , ಗೋವಾ ರಾಜ್ಯಗಳಲ್ಲಿ ಮಳೆಯ ಅರ್ಭಟ ಜೋರಾಗಿದ್ದು, ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ. ನದಿಗಳ  ಹರಿತ ಹೆಚ್ಚಿರುವುದರಿಂದ ಜಲಪಾತಗಳು ಭೂರ್ಗರೆಯುತ್ತ ದುಮುಕುತ್ತಿವೆ. ಗೋವಾ ಮತ್ತು ಕರ್ನಾಟಕ ಗಡಿಯಲ್ಲಿರುವ ಪಾಲಿ ಜಲಪಾ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ಆಕರ್ಶಿಸುತ್ತಿದೆ.

ಇದನ್ನು ಓದಿ : ಅಸ್ಸಾಂನಲ್ಲಿ ಭೀಕರ ಪ್ರವಾಹ; ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ 131 ಪ್ರಾಣಿಗಳ ಸಾವು

ಹಿನ್ನೆಲೆಯಲ್ಲಿ ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕದಿಂದ ಅಧಿಕ ಸಂಖ್ಯೆಯ ಜನರು ಪಾಲಿ ಜಲಪಾತ ವೀಕ್ಷಣೆಗೆ ಹೋಗುತ್ತಿದ್ದಾರೆ. ಅತಿಯಾಗಿ ನೀರು ಹರಿದು ಬರುತ್ತಿರುವುದರಿಂದ ಪಾಲಿ ಫಾಲ್ಸ್ ಸುತ್ತ-ಮುತ್ತ ಪ್ರವಾಹದ ಪರಿಸ್ಥಿತಿ ಉಂಟಾಗಿದೆ.

ವೀಕೆಂಡ್ ‌ಮಸ್ತಿಗಾಗಿ ಪಾಲಿ ಫಾಲ್ಸ್ ವೀಕ್ಷಣೆಗೆ ತೆರಳಿದ್ದ ಕರ್ನಾಟಕದ ಸುಮಾರು 50 ಮಂದಿ ಪ್ರವಾಸಿಗರು ಸೇರಿದಂತೆ ಗೋವಾ ಮತ್ತು ಮಹಾರಾಷ್ಟ್ರದ 150 ಜನ ಅಲ್ಲಿಯೇ ಸಿಲುಕಿಕೊಂಡಿದ್ದರು. ಮಳೆಯಿಂದ ಫಾಲ್ಸ್ ಮಾರ್ಗದ ರಸ್ತೆ ಸಂಪರ್ಕ ಸ್ಥಗಿತವಾದ ಹಿನ್ನೆಲೆಯಲ್ಲಿ ಪ್ರವಾಸಿಗರು ಸಿಲುಕಿ ಹಾಕಿಕೊಂಡಿದ್ದಾರೆ. ಈ ವೇಳೆ ಅರಣ್ಯ ಇಲಾಖೆ, ಅಗ್ನಿಶಾಮಕ ಹಾಗೂ ಪೊಲೀಸರು 150 ಪ್ರವಾಸಿಗರನ್ನು ರಕ್ಷಣೆ ಮಾಡಿ, ಸುರಕ್ಷಿತವಾಗಿ ಕರೆತಂದಿದ್ದಾರೆ.

ಇದನ್ನು ನೋಡಿ : ಬಿಹಾರದಲ್ಲಿ ಸರಣಿ ಸೇತುವೆ ಕುಸಿತ : 15 ದಿನಗಳಲ್ಲಿ 10 ಕುಸಿತ ಪ್ರಕರಣJanashakthi Media

Donate Janashakthi Media

Leave a Reply

Your email address will not be published. Required fields are marked *