ಬೆಂಗಳೂರು: ವಿದ್ಯಾರ್ಥಿನಿಯೊಬ್ಬಳು ತನ್ನ ಕಾಲೇಜು ಪೀಸ್‌ಗೆಂದು ಪೋಷಕರು ನೀಡಿದ್ದ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ಕಳೆದುಕೊಂಡ ಕಾರಣ ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ.
ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ತಂಗಿದ್ದ ಕೋಲಾರ ಜಿಲ್ಲೆ ಶ್ರೀನಿವಾಸಪುರದ ಪಾವನಾ(19) ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.
‘ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದಿದ್ದರು. ಪೋಷಕರು ನೀಡಿದ್ದ ಕಾಲೇಜು ಶುಲ್ಕವನ್ನು ಜೂಜಾಟವಾಡಿ ಕಳೆದುಕೊಂಡಿದ್ದರು. ಆ ಹಣ ಹೊಂದಿಸಲು ಸಾಧ್ಯವಾಗದೇ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ’ ಎಂದು ಪೊಲೀಸರು ಹೇಳಿದರು.
ಇದನ್ನು ಓದಿ : ಪೋಕ್ಸೋ ಪ್ರಕರಣ: ಸತತ 3 ಗಂಟೆಕಾಲ ಯಡಿಯೂರಪ್ಪ ವಿಚಾರಣೆ
‘ಪಾವನಾ, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದಲ್ಲಿ ಬಿಎಸ್‌ಸಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮೂರು ದಿನ ರಜೆಯಿದ್ದ ಕಾರಣ ಹಾಸ್ಟೆಲ್‌ನಲ್ಲಿದ್ದ ಸಹ ಪಾಠಿಗಳು ಊರುಗಳಿಗೆ ತೆರಳಿದ್ದರು. ಹಾಸ್ಟೆಲ್‌ನಲ್ಲಿ ಭಾನುವಾರ ರಾತ್ರಿ ಒಬ್ಬರೇ ಇದ್ದರು. ಆ ವೇಳೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.
’ಕೊಠಡಿಯಲ್ಲಿ ಡೆತ್‌ನೋಟ್ ಪತ್ತೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಪಾಲಕರಿಗೆ ಹಸ್ತಾಂತರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಪೋಷಕರು ಕಾಲೇಜು ಶುಲ್ಕ ಪಾವತಿಸಲು ₹ 15 ಸಾವಿರ ನೀಡಿದ್ದರು. ಅದನ್ನು ಪಾವನಾ ಆನ್‌ಲೈನ್ ಗೇಮಿಂಗ್‌ಗೆ ಬಳಸಿಕೊಂಡು ಸಂಪೂರ್ಣ ಹಣ ಕಳೆದುಕೊಂಡಿದ್ದಳು’ ಎಂದು ತಿಳಿದುಬಂದಿದೆ. ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ನೋಡಿ : ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ ಯುಕೆಜಿ ಪ್ರಾರಂಭಿಸಿ – ತಜ್ಞರ ಆಗ್ರಹ Janashakthi Media