ಮಧ್ಯಪ್ರದೇಶ: ಪ್ರಾಂಶುಪಾಲರನ್ನು ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ಗುಂಡಿಕ್ಕಿ ಹತ್ಯೆಗೈದಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ಶುಕ್ರವಾರ(ಡಿ6) ಮಧ್ಯಾಹ್ನ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ಕಾಲೇಜಿನ ಪ್ರಾಂಶುಪಾಲರನ್ನು ಗುಂಡಿಕ್ಕಿ ಹತ್ಯೆಗೈದು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ : ಉತ್ತರಪ್ರದೇಶ : ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಐವರು ಸಾವು
ಮಧ್ಯಾಹ್ನ 1:30ರ ಸುಮಾರಿಗೆ ಶಾಲೆಯ ಶೌಚಾಲಯದ ಪ್ರವೇಶ ದ್ವಾರದಲ್ಲಿ ಗುಂಡಿನ ದಾಳಿ ನಡೆದಿದೆ ಅದೇ ಸಂಸ್ಥೆಯ ವಿದ್ಯಾರ್ಥಿಯಾಗಿರುವ ಆರೋಪಿ ಶೂಟರ್ ಮತ್ತು ಆತನ ಸಹಚರರು ಮೃತ ಪ್ರಾಂಶುಪಾಲರ ಸ್ಫೋಟರ್‌ನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಆಗಮ್ ಜೈನ್ ತಿಳಿಸಿದ್ದಾರೆ.
ಕಳೆದ ಐದು ವರ್ಷಗಳಿಂದ ಪ್ರಾಂಶುಪಾಲರಾಗಿದ್ದ ಧಮೋರಾ ಸರಕಾರಿ ಪ್ರೌಢಶಾಲೆಯ ಶೌಚಾಲಯಕ್ಕೆ ಆಗಮಿಸಿದ್ದ ವೇಳೆ ಎಸ್.ಕೆ.ಸಸ್ಸೇನಾ (55) ಅವರ ಹಣೆಗೆ ಗುರಿಯಾಗಿಸಿ ಗುಂಡು ಹಾರಿಸಿ ಹತ್ಯೆಗೈಯಲಾಗಿದೆ. ಸ್ಥಳದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಪ್ರಭಾರಿ ಜಿಲ್ಲಾ ಶಿಕ್ಷಣಾಧಿಕಾರಿ ಆರ್.ಪಿ.ಪ್ರಜಾಪತಿ ತಿಳಿಸಿದ್ದಾರೆ.
ಇದನ್ನೂ ನೋಡಿ : ಒಂದು ದೇಶ, ಒಂದು ಚುನಾವಣೆ | ಒಂದು… ಒಂದು.. ಎನ್ನುವುದರ ಹಿಂದೆ ದೇಶಕ್ಕೆ ಕಾದಿದೆ ಅಪಾಯ – ಡಾ.ಸಿದ್ದನಗೌಡ ಪಾಟೀಲ್